
ಮಡಿಕೇರಿ ಜೂ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಮಲ್ಲಂಗಡ ಕುಟುಂಬಸ್ಥರ ಐನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಐನ್ ಮನೆ ಹಿರಿಯರು ಹಾಗೂ ಪ್ರಮುಖದೊಂದಿಗೆ ಮಾತನಾಡಿದ ಶಾಸಕರು, ಮಲ್ಲಂಗಡ ಐನ್ ಮನೆಯ ಇತಿಹಾಸದ ಬಗ್ಗೆ ತಿಳಿದುಕೊಂಡರು ಹಾಗೂ ಅಭಿವೃದ್ಧಿಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಮಲ್ಲಂಗಡ ಕುಟುಂಬಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









