
ಮಡಿಕೇರಿ ಜೂ.9 NEWS DESK : ಅಮ್ಮತಿ ಕಾರ್ಮಾಡುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಪ್ರತಿಯೊಬ್ಬನಿಗೂ ವಿದ್ಯಾಭ್ಯಾಸದ ಮೊದಲ ಅಧ್ಯಾಯ ಅಂಗನವಾಡಿಯಿಂದಲೇ ಪ್ರಾರಂಭ ಆಗುತ್ತದೆ. ಮಕ್ಕಳಲ್ಲಿ ವಿದ್ಯೆಯ ಬಗ್ಗೆ ಮುತುವರ್ಜಿ ಮೂಡಲು ಅಂಗನವಾಡಿಗಳು ಮೂಲ ಕಾರಣವಾಗಬೇಕು. ಹಾಗಾಗಬೇಕಾದಲ್ಲಿ ಅಂಗನವಾಡಿಯಲ್ಲಿನ ವಾತಾವರಣವೂ ಮಕ್ಕಳ ಕಲಿಕೆಯ ಉತ್ಸಾಹಕ್ಕೆ ಪೂರಕವಾಗಿರಬೇಕು ಎಂದು ಹೇಳಿದರು. ಪುಟಾಣಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಂಗನವಾಡಿಯಲ್ಲಿ ಇರುವ ಶಿಕ್ಷಕರು ಮತ್ತು ಸಹಾಯಕಿಯರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವವರಾಗಿದ್ದಾರೆ. ಇವರೆಲ್ಲರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು, ದೇಶದ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಶ್ರಮವಹಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಜಾನ್ಸನ್, ಪಂಚಾಯಿತಿ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು, ವಿರಾಜಪೇಟೆ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಅಮ್ಮತಿ ವಲಯ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









