Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯೋಗ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ : ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ ಹಾಗೂ ಯೋಗ ಪ್ರದರ್ಶನ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯೋಗ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ : ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ ಹಾಗೂ ಯೋಗ ಪ್ರದರ್ಶನ’*

ಜೂನ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ ಗಾಂಧಿ ಭವನದ ಆವರಣದಲ್ಲಿ ಗಿಡ ನೆಟ್ಟು ಅರಿವು ಮೂಡಿಸಲಾಯಿತು. ಜೊತೆಗೆ ಯೋಗ ಶಿಕ್ಷಕರಾದ ಮಹೇಶ್ ಅವರ ನೇತೃತ್ವದಲ್ಲಿ ಯೋಗ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಅತ್ಯಗತ್ಯ. ಆ ನಿಟ್ಟಿನಲ್ಲಿ ವಿವಿಧ ರೋಗಗಳಿಂದ ದೂರವಿರಲು ಪ್ರತೀ ನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವಂತಾಗಬೇಕು ಎಂದು ಸಲಹೆ ನೀಡಿದರು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತೀನಿತ್ಯ ಒಳ್ಳೆಯ ಜೀವನಶೈಲಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಾಕೃತಿಕ ಪರಿಸರವನ್ನು ಉಳಿಸಿ ಬೆಳೆಸುವಂತಾಗಬೇಕು ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಅವರು ಮಾತನಾಡಿ ಈ ಬಾರಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಸಿರು ಯೋಗವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಾಕೃತಿಕ ಸಂಪತ್ತು ಇದ್ದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಆ ನಿಟ್ಟಿನಲ್ಲಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಮತ್ತಷ್ಟು ಚಲನಶೀಲತೆ ಮತ್ತು ಕ್ರೀಯಾಶೀಲತೆಯಿಂದ ಕೂಡಿರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಗಿಡ ಮರ ಹಸಿರು ವಾತಾವರಣ ಇದ್ದಲ್ಲಿ ಒಳ್ಳೆಯ ಗಾಳಿ ಸಿಗಲಿದೆ. ಆ ನಿಟ್ಟಿನಲ್ಲಿ ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು. ಹಾಗೆಯೇ ಯೋಗಾಭ್ಯಾಸದಲ್ಲಿ ತೊಡಗಬೇಕು ಎಂದರು. ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಾತನಾಡಿ ಹಸಿರು ಯೋಗ ಪ್ರಯುಕ್ತ ಪ್ರಕೃತಿಯೊಂದಿಗೆ ಬೆರೆತು ಯೋಗಾಭ್ಯಾಸ ಮಾಡಲಾಗುತ್ತಿದೆ. ಯೋಗದ ಮಹತ್ವವನ್ನು ಎಲ್ಲೆಡೆ ಪಸರಿಸಲಾಗುತ್ತಿದೆ ಎಂದರು. ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು, ವಿಶ್ವದ ಎಲ್ಲೆಡೆ ಯೋಗದ ಪ್ರಯೋಜನ ಪಡೆಯಲಾಗುತ್ತಿದೆ. ಯೋಗ, ವ್ಯಾಯಾಮ ಮಾಡುವುದರಿಂದ ಪ್ರತೀ ನಿತ್ಯ ಕ್ರಿಯಾಶೀಲವಾಗಿರಲು ಸಾಧ್ಯ. ಆ ನಿಟ್ಟಿನಲ್ಲಿ ಯೋಗಾಭ್ಯಾಸ ಮಾಡಬೇಕು ಎಂದು ಸಲಹೆ ಮಾಡಿದರು. ಆಯುಷ್ ವೈದ್ಯಾಧಿಕಾರಿ ಡಾ.ಅರುಣ್ ಅವರು ಮಾತನಾಡಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ, ಯೋಗ ಸಂಗಮ, ಯೋಗ ಬಂಧನ, ಯೋಗೋದ್ಯಾನ, ಯೋಗ ಧನಸ್ಸು, ಯೋಗ ಪ್ರಭಾವ ಹೀಗೆ ವಿವಿಧ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿದೆ ಎಂದರು. ಜೂನ್, 21 ರಂದು 11 ನೇ ಯೋಗ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪಿಎಸ್‍ಐ ಅನ್ನಪೂರ್ಣ ಅವರು ಮಾತನಾಡಿದರು. ಎಎಸ್‍ಐ ಶಿವಾನಂದ, ಆಯುಷ್ ವೈದ್ಯಾಧಿಕಾರಿ ಡಾ.ಶುಭ, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‍ಸಿಸಿ, ಎನ್‍ಎಸ್‍ಎಸ್ ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.