Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ : ಸಂಭ್ರಮದ ಆಟೋಟ ಸ್ಪರ್ಧೆ, ಪ್ರತಿಭಾ ಪುರಸ್ಕಾರ : ನೂತನ ಪದಾಧಿಕಾರಿಗಳ ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ : ಸಂಭ್ರಮದ ಆಟೋಟ ಸ್ಪರ್ಧೆ, ಪ್ರತಿಭಾ ಪುರಸ್ಕಾರ : ನೂತನ ಪದಾಧಿಕಾರಿಗಳ ಆಯ್ಕೆ

ಜೂನ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK  ಜೂ.11 : ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ 29ನೇ ವಾರ್ಷಿಕ ಮಹಾಸಭೆ, ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಮಡಿಕೇರಿ ಸಮೀಪದ ತಾಳತ್ತಮನೆ ಗ್ರಾಮದಲ್ಲಿರುವ ಸಂಘದ ನಿವೇಶನದ ಆವರಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು ಸಮಾಜ ಬಾಂಧವರ ಪ್ರಗತಿಗೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆಗಾಗಿ ಸಂಘಕ್ಕೆ ಐದು ಎಕರೆ ಭೂಮಿ ಪಡೆಯಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.
ಸಮುದಾಯದ ಮಂದಿಯ ಆರೋಗ್ಯ ಸುಧಾರಣೆಗೆ ಆರೋಗ್ಯ ನಿಧಿ ಸಂಗ್ರಹಿಸಿ ಪ್ರತ್ಯೇಕ ಖಾತೆ ತೆರೆಯಬೇಕು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ ಮರಾಠ ಮರಾಟಿ ವಿದ್ಯಾಭಿವೃದ್ಧಿ ನಿಧಿ ಖಾತೆಯನ್ನು ಆರಂಭಿಸಬೇಕು, ಸರ್ಕಾರದ ಸಮಿತಿಗಳ ಸಭೆಯಲ್ಲಿ ಸಂಘವನ್ನು ಪ್ರತಿನಿಧಿಸಲು ಸಮಾಜ ಬಾಂಧವರು ಮುಂದೆ ಬರಬೇಕು, ಸರ್ವರು ಸಂಘದ ಅಜೀವ ಸದಸ್ಯತ್ವವನ್ನು ಪಡೆದು ಸಮಾಜದ ಅಭ್ಯುದಯಕ್ಕೆ ಸಹಕಾರ ನೀಡಬೇಕೆಂದು ಕರೆ ನೀಡಿದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಐಎಫ್‌ಎಸ್ ಅಧಿಕಾರಿ ಸುಂದರ ನಾಯ್ಕ್ ಅವರು ಸಂಘದ ಏಳಿಗೆಗೆ ಹಾಗೂ ಸಂಘದ ಆಡಳಿತ ಮಂಡಳಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು. ಕರ್ನಾಟಕ ಮರಾಟಿ ಒಕ್ಕೂಟದ ಕುರಿತು ಸಭೆಗೆ ಮಾಹಿತಿ ನೀಡಿದ ಅವರು ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲು ಐವರು ಪ್ರತಿನಿಧಿಗಳು ಸಹಕರಿಸಬೇಕೆಂದು ತಿಳಿಸಿದರು. ಸಂಘದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಂಬAಧಪಟ್ಟ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸುವುದಾಗಿ ಭರವಸೆ ನೀಡಿದ ಅವರು, ಕಟ್ಟಡ ಕಾಮಗಾರಿ ಮುಂದುವರಿಸಲು ವೈಯುಕ್ತಿಕವಾಗಿ ರೂ.50 ಸಾವಿರ ದೇಣಿಗೆಯನ್ನು ಘೋಷಿಸಿದರು. ಸಮಾಜದ ಹಿರಿಯರಾದ ದೇವಿ ಪ್ರಸಾದ್ ವಾಮನ ನಾಯ್ಕ್ ಅವರು ಮಾತನಾಡಿ ಸಮಾಜ ಬಾಂಧವರು ಸಮಾಜದ ಏಳಿಗೆಗೆ ಆಡಳಿತ ಮಂಡಳಿಯೊAದಿಗೆ ಕೈಜೋಡಿಸಬೇಕೆಂದು ಕೋರಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಂಘದ ಹಿರಿಯ ಅಜೀವ ಸದಸ್ಯರು ಹಾಗೂ ಜಿ.ಪಂ ಮಾಜಿ ಸದಸ್ಯ ಎಂ.ಟಿ.ನಾರಾಯಣ ಅವರು ಸಂಘದ ಆಡಳಿತ ಮಂಡಳಿಗೆ ನಿವೇಶನವನ್ನು ಪಡೆಯುವಲ್ಲಿ ಸಂಘದ ಹಿರಿಯ ಸದಸ್ಯರು ಪಟ್ಟ ಶ್ರಮವನ್ನು ಸ್ಮರಿಸಿದರು. ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಎಲ್ಲರೂ ಸಹಕರಿಸಬೇಕು ಮತ್ತು ಸದಸ್ಯತ್ವ ಶುಲ್ಕವನ್ನು ಹೆಚ್ಚಿಸಿ ಹಣವನ್ನು ಕ್ರೋಢೀಕರಿಸಲು ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಚನಿಯಪ್ಪ ನಾಯ್ಕ್ ದೊಡ್ಡತ್ತೂರು, ಉಪಾಧ್ಯಕ್ಷರಾದ ದೇವಕಿ ಜಿ.ಆರ್ ನಾಯಕ್, ಯುವ ವೇದಿಕೆ ಅಧ್ಯಕ್ಷ ಮೋಹನ ಎಂ.ಆರ್ ಕಾನೂರು, ಮಹಿಳಾ ವೇದಿಕೆ ಅಧ್ಯಕ್ಷರಾದ ರತ್ನಮಂಜರಿ ಎಂ.ಆರ್, ಕಟ್ಟಡ ಸಮಿತಿ ಅಧ್ಯಕ್ಷ ಗುರುವಪ್ಪ ಎಂ.ಟಿ ಚಿಕ್ಕತ್ತೂರು, ಉಪ ಸಮಿತಿ ಅಧ್ಯಕ್ಷರಾದ ವೆಂಕಪ್ಪ ಎಂ.ಎಸ್ 2ನೇ ಮೊಣ್ಣಂಗೇರಿ, ಧನಂಜಯ ಕುಮಾರ್, ಕುಂಡಾಡು ಹೊನ್ನಪ್ಪ ಎಚ್.ಕೆ ಕರಿಕೆ ಹಾಗೂ ನಿರಲ್ ಕುಮಾರ್ ಕಾನೂರು ಉಪಸ್ಥಿತರಿದ್ದರು. 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಹೊನ್ನಮ್ಮ ಹಾಗೂ ಲೆಕ್ಕಪತ್ರವನ್ನು ಮೋಹನ್ ಎಂ.ಆರ್ ಮಂಡಿಸಿದರು. ಭಾರತಿ ರಾಮಣ್ಣ ಪ್ರಾರ್ಥಿಸಿ, ನರಸಿಂಹ ಎ.ಎಂ ಸ್ವಾಗತಿಸಿ, ರತ್ನಮಂಜರಿ ನರಸಿಂಹ ವಂದಿಸಿದರು. 2023-24 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 7ನೇ ತರಗತಿ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ವಿವಿಧ ಆಟೋಟ ಸ್ಪರ್ಧೆ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 29ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಲಕ್ಕಿಡಿಪ್ ನ್ನು ಇದೇ ಸಂದರ್ಭ ಡ್ರಾ ಮಾಡಲಾಯಿತು.
*ನೂತನ ಪದಾಧಿಕಾರಿಗಳ ಆಯ್ಕೆ* ಸಭೆಯಲ್ಲಿ 2025-26ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಜಿಲ್ಲಾಧ್ಯಕ್ಷರಾಗಿ ಎಂ.ಎಂ.ಪರಮೇಶ್ವರ ಕೆದಮಳ್ಳೂರು, ಯುವ ವೇದಿಕೆ ಅಧ್ಯಕ್ಷರಾಗಿ ಮೋಹನ ಎಂ.ಆರ್ ಕಾನೂರು ಹಾಗೂ ಮಹಿಳಾ ವೇದಿಕೆ ಅಧ್ಯಕ್ಷರಾಗಿ ರತ್ನಮಂಜರಿ ನರಸಿಂಹ ತಾಳತ್ತಮನೆ ಅವರು ಅವಿರೋಧವಾಗಿ ಮರು ಆಯ್ಕೆಯಾದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.