Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಿವರ್ ರ‍್ಯಾಪ್ಟಿಂಗ್ : ಸುರಕ್ಷತೆ ಮತ್ತು ಜೀವರಕ್ಷಣೆಯ ಕ್ರಮಗಳಿಗೆ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಿವರ್ ರ‍್ಯಾಪ್ಟಿಂಗ್ : ಸುರಕ್ಷತೆ ಮತ್ತು ಜೀವರಕ್ಷಣೆಯ ಕ್ರಮಗಳಿಗೆ ಸೂಚನೆ*

ಜೂನ್ 13, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.13 : ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಪ್ಟಿಂಗ್ (ಜಲಕ್ರೀಡೆ) ನಡೆಸುವ ರ‍್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್‌ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಹಾರಂಗಿ ಜಲಾಶಯದ ಬಳಿಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಿವರ್ ರ‍್ಯಾಪ್ಟಿಂಗ್ ಸ್ಥಳದ ಟಿಕೆಟ್ ಕೌಂಟರ್ ಪ್ರದೇಶದಲ್ಲಿ ಸೆಲ್ಟರ್ ಅಳವಡಿಕೆ, ಪ್ರವಾಸಿಗರ ಸುರಕ್ಷತೆಗೆ ಸೋಪಾನ್ ಕಟ್ಟೆ ರೈಲಿಂಗ್ಸ್ ಅಳವಡಿಕೆ, ಗೈಡ್‌ಗಳ ಬಟ್ಟೆ ಬದಲಿಸುವ ಕೊಠಡಿ, ಬೆಂಚ್‌ಗಳ ಅಳವಡಿಕೆ, ಕುಡಿಯುವ ನೀರು, ಮಾಹಿತಿ ಫಲಕ, ಶೌಚಾಲಯ ನಿರ್ಮಾಣ ಜೊತೆಗೆ ಸಿಸಿಟಿವಿ ಅಳವಡಿಕೆಗೆ ಸಭೆಯಲ್ಲಿ ಅನುಮೋದಿಸಲಾಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ರಿವರ್ ರ‍್ಯಾಪ್ಟಿಂಗ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸುರಕ್ಷತೆ ಮತ್ತು ಜೀವರಕ್ಷಣೆ ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ರಿವರ್ ರ‍್ಯಾಪ್ಟ್ಗಳಿಗೆ ಫಿಟ್‌ನೆಸ್ ಪ್ರಮಾಣಪತ್ರ ಕಡ್ಡಾಯವಾಗಿ ಪಡೆಯಬೇಕು. ಜೊತೆಗೆ ಪ್ರತೀ ವರ್ಷ ನವೀಕರಣ ಮಾಡಿಕೊಳ್ಳಬೇಕು. ನಂತರ ರಿವರ್ ರ‍್ಯಾಪ್ಟಿಂಗ್ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಮುಂಗಾರು ಸಂದರ್ಭದಲ್ಲಿ ಜಲಪಾತ ವೀಕ್ಷಣೆ ಹಾಗೂ ಜಲಸಾಹಸ ಕ್ರೀಡೆ ಒಂದು ಆಕರ್ಷಣೀಯ ಹಾಗೂ ಪ್ರವಾಸಿಗರನ್ನು ಸೆಳೆಯುತ್ತದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಿವರ್ ರ‍್ಯಾಪ್ಟಿಂಗ್ ಒಂದು ಭಾಗವಾಗಿದ್ದು, ಆ ನಿಟ್ಟಿನಲ್ಲಿ ರಿವರ್ ರ‍್ಯಾಪ್ಟಿಂಗ್ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕರು ತಿಳಿಸಿದರು. ರ‍್ಯಾಪ್ಟಿಂಗ್ ಫಿಟ್‌ನೆಸ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ‘ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ’(ಜೇತ್ನ) ಯಿಂದ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಬೇಕು ಎಂದು ಸೂಚಿಸಿದರು. ಜೊತೆಗೆ ಪೊಲೀಸ್ ಇಲಾಖೆಯಿಂದಲೂ ಸಹ ಪರಿಶೀಲನೆ ನಡೆಸಬೇಕು ಎಂದು ಶಾಸಕರು ಹೇಳಿದರು. ಜಲಕ್ರೀಡೆ ಸಂದರ್ಭದಲ್ಲಿ ಜೀವರಕ್ಷಕ ಜಾಕೆಟ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಜೊತೆಗೆ ಗೈಡ್‌ಗಳು ಕೌಶಲ್ಯ ಪರೀಕ್ಷೆ ಮಾಡಿಸಿರಬೇಕು. ಸಮವಸ್ತ್ರವನ್ನು ಧರಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕರು ಸೂಚಿಸಿದರು. ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಹುಣಸೂರು ತಾಲ್ಲೂಕಿನ ಬಿಳಿಕೆರೆ, ಮೈಸೂರು ರಸ್ತೆಯ ಹುಣಸೂರು-ಗೋಣಿಕೊಪ್ಪ ಜಂಕ್ಷನ್, ಪಿರಿಯಾಪಟ್ಟಣ ಸಿದ್ದಾಪುರ ಬಳಿಯ ಜಂಕ್ಷನ್‌ಗಳಲ್ಲಿ ಸೈನ್‌ಬೋರ್ಡ್ಗಳನ್ನು ಅಳವಡಿಸುವಂತೆ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ರಿವರ್ ರ‍್ಯಾಪ್ಟಿಂಗ್ ಸಂದರ್ಭದಲ್ಲಿ ಏನಾದರೂ ತೊಂದರೆ ಉಂಟಾದಲ್ಲಿ ಕೊಡಗು ಜಿಲ್ಲೆಯ ಇಡೀ ಪ್ರವಾಸೋದ್ಯಮಕ್ಕೆ ಪೆಟ್ಟು ಬೀಳಲಿದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು. ರಿವರ್ ರ‍್ಯಾಪ್ಟಿಂಗ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಜಲಸಾಹಸ ಕ್ರೀಡೆ ನಡೆಸುವ ಗೈಡ್‌ಗಳು ಸೂಕ್ತ ತರಬೇತಿ ಪಡೆದಿರಬೇಕು. ಹಾಗೆಯೇ ವೃತ್ತಿ ಕೌಶಲ್ಯ ಹೊಂದಿರಬೇಕು. ಜೊತೆಗೆ ಜೇತ್ನ ಸಂಸ್ಥೆ ಈ ಬಗ್ಗೆ ದೃಡೀಕರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಸೋಮವಾರಪೇಟೆ ತಾಲ್ಲೂಕಿನ ಕುಮಾರಳ್ಳಿ(ಬೀದಳ್ಳಿ) ರಿವರ್ರ‍್ಯಾಪ್ಟಿಂಗ್ ನಡೆಸುವ ಸಂಬAಧ ಈಗಾಗಲೇ ಅನುಮತಿ ನೀಡಲಾಗಿದೆ. ಆದರೆ ಇನ್ನೂ ಕಾರ್ಯರೂಪಕ್ಕೆ ಬರದಿರುವ ಹಿನ್ನೆಲೆ ಸ್ಥಳಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ದುಬಾರೆಯಲ್ಲಿ ಒಟ್ಟು 75 ರ‍್ಯಾಪ್ಟಿಂಗ್ ಕಾರ್ಯನಿರ್ವಹಿಸುತ್ತಿದ್ದು, ಬರಪೊಳೆಯಲ್ಲಿ 24 ರ‍್ಯಾಫ್ಟ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಡಿ ಜಲ ಸಾಹಸ ಕ್ರೀಡೆಯಲ್ಲಿ ಒಂದಾದ ‘ಕಾಯಕಿಂಗ್’ ನಡೆಸಲು ಅವಕಾಶವಿದೆ. ಈ ಸಂಬAಧ ಜಿಲ್ಲೆಯಲ್ಲಿ 11 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅನಿತಾ ಭಾಸ್ಕರ್ ಅವರು ಮಾಹಿತಿ ನೀಡಿದರು. ಹೇಮಾವತಿ ನದಿ ಪಾತ್ರ ಕೊಡ್ಲಿಪೇಟೆ ದೊಡ್ಡಕುಂದ, ಹಟ್ಟಿಹೊಳೆ ಬಳಿಯ ದೇವಸ್ತೂರು ನದಿ, ಕಾವೇರಿ ನದಿ ಪಾತ್ರದ ಐವತ್ತೊಕ್ಲು, ಹೊದ್ದೂರು, ಹಾರಂಗಿ ಹಿನ್ನೀರು ಪ್ರದೇಶದ ಹೆರೂರು, ನಾಕೂರು ಶಿರಂಗಾಲ, ಬೈರಂಪಾಡ, ಚಿಕ್ಕಬೆಟ್ಟಗೇರಿ ಈ ಪ್ರದೇಶಗಳಲ್ಲಿ ಕಾಯಕಿಂಗ್ ಮಾಡಲು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳ ಸಂಬAಧ ಕಾರ್ಯಸಾಧ್ಯತಾ ವರದಿ ನೋಡಿಕೊಂಡು ಮುಂದಿನ ಕ್ರಮವಹಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡ ಜೇನು ಕುರುಬ ಜನಾಂಗದ ಯುವಕರಿಗೆ ರ‍್ಯಾಪ್ಟಿಂಗ್ ಸಲಕರಣೆಗಳನ್ನು ವಿತರಿಸಲು ತಲಾ 2 ಲಕ್ಷ ರೂ.ನಂತೆ 9 ಜನ ಫಲಾನುಭವಿಗಳಿಗೆ 18 ಲಕ್ಷ ರೂ. ಬಿಡುಗಡೆಯಾಗಿದ್ದು, ಈ ಯುವಕರು ಈಗಾಗಲೇ ತಲಾ ಒಂದು ರ‍್ಯಾಪ್ಟ್ ಖರೀದಿ ಮಾಡಿದ್ದಾರೆ. ಈ ಸಂಬಂಧ ದುಬಾರೆಯಲ್ಲಿ ರ‍್ಯಾಪ್ಟಿಂಗ್ ನಡೆಸಲು ಪರವಾನಗಿ ನೀಡುವಂತೆ ಕೋರಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಹೊಸದಾಗಿ ರಿವರ್ ರ‍್ಯಾಪ್ಟಿಂಗ್ ನಡೆಸಲು ಅನುಮತಿಗಾಗಿ ಹಲವು ಅರ್ಜಿಗಳು ಸಲ್ಲಿಕೆಯಾಗಿರುವ ಹಿನ್ನೆಲೆ ಈಗಾಗಲೇ ರಿವರ್ ರ‍್ಯಾಪ್ಟಿಂಗ್ ನಡೆಸುತ್ತಿರುವವರು ಹೊಸದಾಗಿ ರಿವರ್ ರ‍್ಯಾಪ್ಟಿಂಗ್‌ಗೆ ಅನುಮತಿ ನೀಡಬಾರದು ಎಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಸದ್ಯ ತೀರ್ಪು ಪ್ರಕಟವಾದ ನಂತರ ಮುಂದಿನ ಕ್ರಮ ವಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ರಿವರ್ ರ‍್ಯಾಪ್ಟಿಂಗ್ ನಡೆಸುವವರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಕೌಶಲ್ಯ ತರಬೇತಿ ಪಡೆಯಲು ಇದೇ ಸಂದರ್ಭದಲ್ಲಿ ಸಲಹೆ ನೀಡಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಉಪ ಅರಣ್ಯ ಸಂರಕ್ಷಾಣಧಿಕಾರಿ ಅಭಿಷೇಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಅರಣ್ಯ ಇಲಾಖೆಯ ರತನ್, ಅಗ್ನಿಶಾಮಕ ಅಧಿಕಾರಿ ರಾಜೇಶ್, ಜೇತ್ನಾ ಸಂಸ್ಥೆಯ ಕೀರ್ತಿ ಪಯಾಸ್, ದುಬಾರೆ ರಿವರ್ ರ‍್ಯಾಪ್ಟಿಂಗ್‌ನ ವಿಜು ಚಂಗಪ್ಪ, ವಸಂತ್ ಪಿ.ಸಿ., ಬರಪೊಳೆಯ ರತನ್ ಸಿ.ಎಸ್., ನಿತಿನ್, ಕುಮಾರಳ್ಳಿಯ ಪ್ರದೀಪ್, ಹಾರಂಗಿ ಜಲಾಶಯದ ಕಾರ್ಯಪಾಲಕ ಅಭಿಯಂತರರಾದ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಇಇ ಸತೀಶ್, ತಹಶೀಲ್ದಾರ್ ಕಿರಣ್ ಗೌರಯ್ಯ, ಐಟಿಡಿಪಿ ಅಧಿಕಾರಿ ಎಸ್.ಹೊನ್ನೇಗೌಡ, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್, ನಂಜರಾಯಪಟ್ಟಣ ಪಿಡಿಒ ರಾಜಶೇಖರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.