
ನಾಪೋಕ್ಲು ಜೂ.14 NEWS DESK : ಟೌನ್ ಅಂಗನವಾಡಿ ಕಾರ್ಯಕರ್ತೆ ಎಂ.ಪಿ.ಜ್ಯೋತಿ ಸೇವ ನಿವೃತ್ತಿ ಹೊಂದಿದ್ದು, ಬಲ್ಲಮಾವಟಿ ವೃತ್ತದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಟೌನ್ ಅಂಗನವಾಡಿಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಕಾರ್ಯಕರ್ತರು ಹಾಗೂ ಸಹಾಯಕಿಯರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿರು. ಈ ಸಂದರ್ಭ ಉತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ರಾಜ್ಯ ಪ್ರಶಸ್ತಿ ಪಡೆದ ಹಳೇತಾಲುಕಿನ ಕಾರ್ಯಕರ್ತೆ ಭಾಗ್ಯವತಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೀಲಾ, ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ಕಾರ್ಯಕರ್ತೆಯರು, ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಪವಿತ್ರ ಸ್ವಾಗತಿಸಿ, ನಿರೂಪಿಸಿದರು. ಭಾಗ್ಯವತಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.









