
ನಾಪೋಕ್ಲು ಜೂ.17 NEWS DESK : ದನದ ಕೊಟ್ಟಿಗೆ ಕುಸಿದು ಅಪಾರ ನಷ್ಟ ಉಂಟಾಗಿರುವ ಘಟನೆ ಹೋದವಾಡ ಗ್ರಾಮದಲ್ಲಿ ನಡೆದಿದೆ. ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದವಾಡ ಗ್ರಾಮದ ನಿವಾಸಿ ಬಿ.ಬಿ.ದರ್ನಪ್ಪ ಎಂಬವರ ದನದ ಕೊಟ್ಟಿಗೆ ಮಳೆ ಗಾಳಿಗೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಕೊಟ್ಟಿಗೆಯಲ್ಲಿದ್ದ ಜಾನುವಾರುಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜಾನುವಾರುಗಳನ್ನು ರಕ್ಷಿಸಿ ಜೀವಪಾಯದಿಂದ ಪಾರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಹೊದ್ದೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.
ವರದಿ : ದುಗ್ಗಳ ಸದಾನಂದ.









