
ಮಡಿಕೇರಿ ಜೂ.17 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ರಸ್ತೆ ಜಲಾವೃತಗೊಂಡಿದೆ. ಸ್ಥಳಕ್ಕೆ ಮಡಿಕೇರಿ ತಾಲ್ಲೂಕು ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ನಿರ್ದೇಶನ ನೀಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.










