
ಬೆಂಗಳೂರು ಜೂ.17 NEWS DESK : ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ – 2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ, ಸಾಧಕರನ್ನು ಗೌರವಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.










