
ಸೋಮವಾರಪೇಟೆ ಜೂ.17 NEWS DESK : ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ ಮತ್ತು ಕೊಡಗು ಜಿಲ್ಲೆ, ಕೊಡಗು ಪತ್ರಕರ್ತರ ಸಂಘ ತಾಲ್ಲೂಕು ಘಟಕ, ಕಳಲೆ, ಕೂಡಿಗೆ ಬಿಜಿಎಸ್ ಸೇವಾಸಂಘ ಮತ್ತು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಪಿ.ಸಂದೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಹಾಸನ ಶಾಖ ಮಠದ ಕಾರ್ಯದರ್ಶಿಗಳಾದ ಶಂಭುನಾಥಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು. ಶಾಸಕರಾದ ಡಾ.ಮಂತರ್‍ಗೌಡ, ಮೈಸೂರು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಬೆಂಗಳೂರು ಸಂಚಾರ ನಿಯಂತ್ರಣ ವಿಭಾಗದ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್, ಬೆಂಗಳೂರಿನ ಇಂಡಿಯನ್ ಐಎಎಸ್ ಅಕಾಡೆಮಿ ಸಿ.ಇ.ಒ. ಪಿ.ಸಿ.ಶ್ರೀನಿವಾಸ್, ಬಸುಗುಳ ಕಾಫಿ ಬೆಳೆಗಾರರಾದ ಬಿ.ಸಿ.ಪುಟ್ಟೇಗೌಡ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್.ಟಿ.ಅನಿಲ್, ಕಳಲೆ-ಕೂಡಿಗೆ ಬಿಜಿಎಸ್ ಸೇವಾಸಂಘದ ಅಧ್ಯಕ್ಷ ಆರ್.ಪಿ.ಲಕ್ಷ್ಮಣ್, ಉಪಾಧ್ಯಕ್ಷ ಕಳಲೆ ಕೃಷ್ಣೇಗೌಡ, ಉದ್ಯಮಿ ಗಿರೀಶ್ ಮಲ್ಲಪ್ಪ, ಭಾರತೀ ವಿದ್ಯಾಸಂಸ್ಥೆಯ ಅಧ್ಯಕ್ಷ ಜಗನ್‍ಪಾಲ್ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448582636 ಸಂಪರ್ಕಿಸಬಹುದು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಎ.ಮುರುಳೀಧರ್, ಕಾರ್ಯದರ್ಶಿ ಡಿ.ಪಿ.ಲೋಕೇಶ್, ಕಳಲೆ-ಕೂಡಿಗೆ ಬಿಜಿಎಸ್ ಸೇವಾಸಂಘದ ಉಪಾಧ್ಯಕ್ಷ ಕೃಷ್ಣೇಗೌಡ, ಸಂಘದ ನಿರ್ದೇಶಕ ಸುಕುಮಾರ್ ಇದ್ದರು.









