Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ : ಕಾವೇರಿ ತೀರದಲ್ಲಿ ಪ್ರವಾಹದ ಪರಿಸ್ಥಿತಿ : ಭಾಗಮಂಡಲದಲ್ಲಿ 8 ಇಂಚು ಮಳೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ : ಕಾವೇರಿ ತೀರದಲ್ಲಿ ಪ್ರವಾಹದ ಪರಿಸ್ಥಿತಿ : ಭಾಗಮಂಡಲದಲ್ಲಿ 8 ಇಂಚು ಮಳೆ*

ಜೂನ್ 18, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.18 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿಮಳೆ ಮುಂದುವರೆದಿದ್ದು, ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ ತೀರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚು ಮಳೆಯಾಗಿದೆ. ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವಂತೆ ಸೂಚನೆ ನೀಡಿದರು. ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಅಪಾಯದ ಅಂಚಿನಲ್ಲಿದೆ. ತಹಶೀಲ್ದಾರರಾದ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿಗೆ ಹೋಗುವ ಗೇಟ್ ಗೆ ಬೀಗ ಅಳವಡಿಸಲಾಗಿದೆ. ನಿರಂತರ ಮಳೆಯಿಂದಾಗಿ ಚೇರಂಬಾಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಂಗೂರು ಗ್ರಾಮದ ದೋಣಿ ಕಾಡು ರಸ್ತೆ ಜಲಾವೃತಗೊಂಡಿದೆ. ಸ್ಥಳಕ್ಕೆ ಮಡಿಕೇರಿ ತಾಲ್ಲೂಕು ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು. ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಮುಂಜಾಗೃತಾ ಕ್ರಮವಾಗಿ ಇಂದು ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ತಲಕಾವೇರಿ ಹಾಗೂ ಭಾಗಮಂಡಲ ಭಾಗದಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚು ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಜಿಲ್ಲೆಯ ಹಲವೆಡೆ ಅಧಿಕ ಮಳೆಯಿಂದ ಗದ್ದೆ, ಕಾಫಿ ಮತ್ತು ಅಡಿಕೆ ತೋಟಗಳು ಜಲಾವೃತಗೊಂಡಿವೆ. ಗ್ರಾಮೀಣ ಭಾಗದಲ್ಲಿ ಮರ ಮತ್ತು ವಿದ್ಯುತ್ ಕಂಬ ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ ಅವಧಿಗೂ ಮೊದಲೇ 60 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 75.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 989.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 496.42 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 122.45 ಮಿ.ಮೀ. ಕಳೆದ ವರ್ಷ ಇದೇ ದಿನ 9.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1505.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 688.64 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 72.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1025.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 437.75 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 902.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 465.14 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 74.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 886.52 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 413.58 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 628.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 477 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 90, ನಾಪೋಕ್ಲು 88.80, ಸಂಪಾಜೆ 116, ಭಾಗಮಂಡಲ 195, ವಿರಾಜಪೇಟೆ 77.20, ಅಮ್ಮತ್ತಿ 67, ಹುದಿಕೇರಿ 87.60, ಶ್ರೀಮಂಗಲ 56.60, ಪೊನ್ನಂಪೇಟೆ 80, ಬಾಳೆಲೆ 60.09, ಸೋಮವಾರಪೇಟೆ 74, ಶನಿವಾರಸಂತೆ 48, ಶಾಂತಳ್ಳಿ 140, ಕೊಡ್ಲಿಪೇಟೆ 35.40, ಕುಶಾಲನಗರ 24.80, ಸುಂಟಿಕೊಪ್ಪ 52 ಮಿ.ಮೀ.ಮಳೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2850.89 ಅಡಿಗಳು. ಕಳೆದ ವರ್ಷ ಇದೇ ದಿನ 2828.01 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 18.89 ಮಿ.ಮೀ., ಕಳೆದ ವರ್ಷ ಇದೇ ದಿನ 8.20 ಮಿ.ಮೀ., ಇಂದಿನ ನೀರಿನ ಒಳಹರಿವು 6481 ಕ್ಯುಸೆಕ್, ಕಳೆದ ವರ್ಷ ಇದೇ ದಿನ 343 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 8750 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.