Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಗರಸಭೆಯ ಸಾಮಾನ್ಯ ಸಭೆ : ದ್ವಿತೀಯ ದರ್ಜೆ ಸಹಾಯಕನನ್ನು ಅಮಾನತು ಮಾಡಲು ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಗರಸಭೆಯ ಸಾಮಾನ್ಯ ಸಭೆ : ದ್ವಿತೀಯ ದರ್ಜೆ ಸಹಾಯಕನನ್ನು ಅಮಾನತು ಮಾಡಲು ನಿರ್ಧಾರ*

ಜೂನ್ 19, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.19 NEWS DESK : ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಮೀನು, ಮಾಂಸ ಮಾರುಕಟ್ಟೆಯ ಉಸ್ತುವಾರಿ ಸಿಬ್ಬಂದಿ ಬಶೀರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ತನಿಖೆ ನಡೆಸಲು ನಗರಸಭೆಯ ಸಾಮಾನ್ಯ ಸಭೆ ನಿರ್ಧಾರ ಕೈಗೊಂಡಿದೆ. ನಗರ ಸಭೆ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆಯಲ್ಲಿ ನೂತನ ಆಡಳಿತ ಮಂಡಳಿಯ ಮೊದಲ ಸಾಮಾನ್ಯ ಸಭೆ ಬುಧವಾರ ನಡೆಯಿತು. ಸಭೆಯ ಪ್ರಾರಂಭದಲ್ಲೇ ವಿಚಾರ ಪ್ರಸ್ತಾಪಿಸಿದ ಸದಸ್ಯ ಮನ್ಸೂರ್, ನಗರದ ಮಾರುಕಟ್ಟೆ ಆವರಣದಲ್ಲಿ ನಗರ ಸಭೆ ವತಿಯಿಂದ ಕೇವಲ ಒಂದು ಕುರಿ ಮಾಂಸ ಮಳಿಗೆಯನ್ನು ಟೆಂಡರ್ ಕರೆಯಲಾಗಿದೆ. ಆ ಮಳಿಗೆಯ ಪಕ್ಕದಲ್ಲೇ ಮತ್ತೊಂದು ಕುರಿ ಮಾಂಸ ಮಳಿಗೆ ಇದ್ದು, ಅದನ್ನು ಕೂಡ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆ ಮೂಲಕ ಮತ್ತೊಂದು ಮಳಿಗೆಯ ಹಣವನ್ನು ತಿನ್ನುತ್ತಿರುವವರು ಯಾರು..? ಹೀಗೆ ಹಲವು ವರ್ಷಗಳಿಂದ ನಗರ ಸಭೆಗೆ ವಂಚಿಸಲಾಗುತ್ತಿದೆ. ಈ ಬಗ್ಗೆ ನಗರ ಸಭೆ ಸೂಕ್ತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಇತರ ಸದಸ್ಯರು ಕೂಡ ಪಕ್ಷಾತೀತವಾಗಿ ಧ್ವನಿಗೂಡಿಸಿ ಸೂಕ್ತ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯಿಸುವಂತೆ ಮಾರುಕಟ್ಟೆ ಉಸ್ತುವಾರಿ ನೀಡಲಾಗಿದ್ದ ನಗರ ಸಭೆ ಸಿಬ್ಬಂದಿ ಬಶೀರ್ ಅವರಿಗೆ ಅಧ್ಯಕ್ಷರು ಸೂಚಿಸಿದರು. ಈ ಸಂದರ್ಭ ಮಾರುಕಟ್ಟೆಯಲ್ಲಿ ಕೇವಲ ಒಂದು ಕುರಿ ಮಾಂಸ ಮಳಿಗೆಯನ್ನು ಮಾತ್ರವೇ ಟೆಂಡರ್ ಮಾಡಲಾಗಿದೆ. ಅದರ ಪಕ್ಕದ ಮಳಿಗೆಗೆ ಬಾಗಿಲು ಇಲ್ಲದ ಕಾರಣ ಆ ಮಳಿಗೆಯನ್ನು ಕುರಿ ಮಾಂಸ ತಯಾರಿ ಮಾಡಲು ಮಾತ್ರವೇ ಮೊದಲ ಅಂಗಡಿಯನ್ನು ಟೆಂಡರ್ ಕರೆದವರು ಬಳಸುತ್ತಿದ್ದಾರೆ ಎಂದು ಉತ್ತರಿಸಿದರು. ಇದಕ್ಕೆ ಆಕ್ಷೇಪವೆತ್ತಿದ ಮನ್ಸೂರ್ ಸಭೆಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸಲಾಗುತ್ತಿದೆ. ಮತ್ತೊಂದು ಮಳಿಗೆಯಲ್ಲೂ ವ್ಯಾಪಾರ ನಡೆಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸ್ಥಳದ ವಿಡಿಯೋ ತರಿಸುವಂತೆ ಪಟ್ಟು ಹಿಡಿದರು. ಈ ವೇಳೆ ನಾಮ ನಿರ್ದೇಶಿತ ಸದಸ್ಯ ಯಾಕೂಬ್ ಅವರು ಮಾರುಕಟ್ಟೆ ವಿಡಿಯೋ ದೃಶ್ಯವನ್ನು ಪ್ರದರ್ಶಿಸಿ ಮತ್ತೊಂದು ಮಳಿಗೆಯಲ್ಲೂ ವ್ಯಾಪಾರ ನಡೆಸುತ್ತಿರುವುದುನ್ನು ಸಭೆಯ ಮುಂದಿಟ್ಟರು. ಈ ಅವ್ಯವಹಾರ ಹಲವು ವರ್ಷಗಳಿಂದಲೂ ನಡೆಯುತ್ತಿದೆ ಎಂದು ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಪೌರಾಯುಕ್ತ ಮಾರುಕಟ್ಟೆ ಬಗ್ಗೆ ದೂರುಗಳು ಬಂದ ಸಂದರ್ಭವೇ ಬಶೀರ್ ಅವರನ್ನು ಆ ಕರ್ತವ್ಯದಿಂದ ಬಿಡುಗಡೆ ಮಾಡಿ ಸತ್ಯ ನಾರಾಯಣ ಹಾಗು ಹರಿಣಿ ಅವರಿಗೆ ಜವಾಬ್ದಾರಿ ನೀಡುವಂತೆ ಸೂಚಿಸಲಾಗಿತ್ತು. ಹೀಗಿದ್ದರೂ ಬಶೀರ್ ಆ ಇಬ್ಬರು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿರಲಿಲ್ಲ. ಆದ ಕಾರಣ ಆ ಇಬ್ಬರು ಅಧಿಕಾರಿಗಳು ಲಿಖಿತ ರೂಪದಲ್ಲಿ ಅಧಿಕಾರಿ ವಹಿಸದಿರುವ ಬಗ್ಗೆ ವರದಿ ನೀಡಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು. ಸಿಬ್ಬಂದಿ ಬಶೀರ್ ವಿರುದ್ದ ತನಿಖೆ ನಡೆಸುವಂತೆ ಸದಸ್ಯರಾದ ಅರುಣ್ ಶೆಟ್ಟಿ, ಸತೀಶ್, ಬಶೀರ್, ಮನ್ಸೂರ್, ಯಾಕೂಬ್ ಸಹಿತ ಹಲವು ಸದಸ್ಯರು ಆಗ್ರಹಿಸಿದರು. ಕೆ.ಎಸ್.ರಮೇಶ್ ಮಾತನಾಡಿ, ಸಿಬಂದಿ ಬಶೀರ್ ವಿರುದ್ದ ಹಲವು ದೂರುಗಳು ಕೇಳಿ ಬಂದಿವೆ. ಇದೀಗ ಮಾರುಕಟ್ಟೆ ಉಸ್ತುವಾರಿ ಜವಾಬ್ದಾರಿಯನ್ನೂ ಬೇರೆಯವರಿಗೆ ಹಸ್ತಾಂತರಿಸದೇ ನಿರ್ಲಕ್ಷ್ಯ ಮಾಡುವ ಮೂಲಕ ಪೌರಾಯುಕ್ತರ ಸೂಚನೆಯನ್ನೂ ಧಿಕ್ಕರಿಸಲಾಗಿದೆ. ಮಾತ್ರವಲ್ಲದೇ ಕೌನ್ಸಿಲ್ ಸಭೆಗೂ ತಪ್ಪು ಮಾಹಿತಿ ನೀಡುವ ಮೂಲಕ ಸಭೆಯ ದಾರಿ ತಪ್ಪಿಸುವ ಪ್ರಯತ್ನ ನಡೆದಿದೆ. ಸಿಬ್ಬಂದಿ ಬಶೀರ್‍ನನ್ನು ತಕ್ಷಣವೇ ಕರ್ತವ್ಯದಿಂದ ವಜಾ ಮಾಡಿ ಆತನ ವಿರುದ್ದ ತನಿಖೆಗೆ ಸೂಚಿಸುವಂತೆ ಆಗ್ರಹಿಸಿದರು. ಇತರ ಸದಸ್ಯರು ಕೂಡ ಇದಕ್ಕೆ ಧ್ವನಿಗೂಡಿಸಿದರು. ಸಭೆಯ ಅಧ್ಯಕ್ಷೆ ಕಲಾವತಿ ಅವರು ಸಿಬ್ಬಂದಿ ಬಶೀರ್‍ನನ್ನು ಕರ್ತವ್ಯದಿಂದ ಅಮಾನತು ಮಾಡಿ ತನಿಖೆ ನಡೆಸಲು ಆದೇಶ ನೀಡಿದರು.
*ಹೆಚ್ಚಿನ ಅನುದಾನಕ್ಕೆ ನಿಯೋಗ* : ಸದಸ್ಯ ಅರುಣ್ ಶೆಟ್ಟಿ ಮಾತನಾಡಿ, ನಗರ ಸಭೆಯಿಂದ ಸದಸ್ಯರ ವಾರ್ಡ್‍ಗಳಿಗೆ ಹಂಚಿಕೆ ಮಾಡಲಾಗುತ್ತಿರುವ ಅನುದಾನದಲ್ಲಿ ಅಭಿವೃದ್ದಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವಿವಿಧ ಯೋಜನೆಗಳ ಮೂಲಕ ಹೆಚ್ಚಿನ ಅನುದಾನವೂ ನಗರಸಭೆಗೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಸರ್ವ ಪಕ್ಷ ಸದಸ್ಯರ ನಿಯೋಗ ಮುಖ್ಯಮಂತ್ರಿಗಳ ಬಳಿಗೆ ತೆರಳಿ ಅನುದಾನಕ್ಕೆ ಮನವಿ ಮಾಡಬೇಕಿದೆ ಎಂದು ಹೇಳಿದರು. ಇದಕ್ಕೆ ಎಲ್ಲಾ ಸದಸ್ಯರು ಕೂಡ ಧ್ವನಿಗೂಡಿಸಿದರು.
*ಪ್ಲಾಸ್ಟಿಕ್ ನಿಷೇಧಿಸಿ* ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಮಾರಾಟ ಮಾಡದಂತೆ ಈ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೂ ಕೂಡ ಇಂದಿಗೂ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳು ಮತ್ತು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳನ್ನು ಎಗ್ಗಿಲ್ಲದೇ ಮಾರಾಟ ಮಾಡಲಾಗುತ್ತಿದೆ. ಕೌನಿಲ್ ಸಭೆಯ ನಿರ್ಣಯಗಳಿಗೆ ಬೆಲೆಯೇ ಇಲ್ಲವೇ ಎಂದು ಸದಸ್ಯ ಅಪ್ಪಣ್ಣ ಸಭೆಯ ಗಮನ ಸೆಳೆದರು. ಇದಕ್ಕೆ ಸದಸ್ಯೆ ಶ್ವೇತಾ ಪ್ರಶಾಂತ್ ಧ್ವನಿಗೂಡಿಸಿದರು. ಮೊದಲ ಮಳೆಗೆ ಚರಂಡಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳು ನಿಂತು ಮಳೆ ನೀರು ಮದುವೆ ನಡೆಯುತ್ತಿದ್ದ ಖಾಸಗಿ ಸಭಾಂಗಣ ಮತ್ತು ಮಣೆಗಳಿಗೆ ನುಗ್ಗಿದ ಘಟನೆಗಳನ್ನು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ವಿಭಾಗದ ಅಧಿಕಾರಿ ಹರಿಣಿ, ಪ್ಲಾಸ್ಟಿಕ್ ಬ್ಯಾಗ್‍ಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವಾರದಿಂದ 1 ಲೀಟರ್ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಮಾರಾಟದ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಸಭೆಗೆ ತಿಳಿಸಿದರು. ಇನ್ನುಳಿದಂತೆ ರಸ್ತೆ, ಬೀದಿ ದೀಪಗಳ ಅವ್ಯವಸ್ಥೆ, ತಡೆಗೋಡೆ ನಿರ್ಮಾಣ, ಕುಡಿಯುವ ನೀರು, ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ವಿಚಾರ, ಮಾರುಕಟ್ಟೆ, ಅಮೃತ್-2 ಯೋಜನೆ, ಫಾರಂ ನಂಬರ್ 3, ಸರಕಾರ ಅನುದಾನ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.