Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಬಾಲ್ಯವಿವಾಹ ತಡೆಯುವಲ್ಲಿ ಪರಿಣಾಮಕಾರಿ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಬಾಲ್ಯವಿವಾಹ ತಡೆಯುವಲ್ಲಿ ಪರಿಣಾಮಕಾರಿ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*

ಜೂನ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.19 NEWS DESK : ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಯುವಲ್ಲಿ ಜಿಲ್ಲೆಯ ಹಾಡಿಗಳು, ಲೈನ್‍ಮನೆಗಳು ಸೇರಿದಂತೆ ಗ್ರಾಮ ಮಟ್ಟದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಕಾಯ್ದೆ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಅವರು ಮಾಹಿತಿ ನೀಡಿ ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಲ್ಯ ವಿವಾಹ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈಗಾಗಲೇ ಎರಡು ಬಾಲ್ಯ ವಿವಾಹ ಪ್ರಕರಣ ತಡೆಯಲಾಗಿದೆ. ಉಳಿದಂತೆ ಒಂದು ಪ್ರಕರಣ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ಅವರು ಮಾಹಿತಿ ನೀಡಿ ಸರ್ಕಾರ 18 ವರ್ಷದೊಳಗಿನ ಸಂಕಷ್ಟದಲ್ಲಿರುವ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆಯನ್ನು ಜಾರಿಗೊಳಿಸಿದ್ದು, ಮಕ್ಕಳಿಗೆ ಪೌಷ್ಠಿಕ ಆಹಾರ, ಶಿಕ್ಷಣ, ಜೊತೆಗೆ ಮಾಹೆವಾರು 2 ಸಾವಿರ ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು. ಪ್ರಾಯೋಜಕತ್ವ ಕಾರ್ಯಕ್ರಮದಡಿ 18 ವರ್ಷದೊಳಗಿನ ಇಬ್ಬರು ಪೋಷಕರನ್ನು ಕಳೆದುಕೊಂಡಿರುವ ಮಕ್ಕಳು ಹಾಗೂ ಏಕಪೋಷಕರನ್ನು ಹೊಂದಿರುವ ಮಕ್ಕಳು ಹಾಗೂ ಸಜಾ ಕೈದಿಗಳ ಮಕ್ಕಳಿಗೆ ಮಾಸಿಕ 4 ಸಾವಿರ ರೂ. ಆರ್ಥಿಕ ಧನ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಉಪಕಾರ್ ಯೋಜನೆಯಡಿ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ದಾಖಲಾಗಿ ಕನಿಷ್ಠ ಮೂರು ವರ್ಷ ಸಂಸ್ಥೆಯಲ್ಲಿ ಪೋಷಣೆ ಹಾಗೂ ರಕ್ಷಣೆ ಪಡೆದು 18 ವರ್ಷ ಪೂರ್ಣಗೊಳಿಸಿ ಶಿಕ್ಷಣ ಹಾಗೂ ತರಬೇತಿ ಉದ್ದೇಶದಿಂದ ಸಂಸ್ಥೆಯಿಂದ ಬಿಡುಗಡೆಯಾಗುವ ಮಕ್ಕಳಿಗೆ ಮಾಸಿಕ 5 ಸಾವಿರ ರೂ. ಒದಗಿಸುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು. ಮಕ್ಕಳಿಗೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಉಚಿತವಾಗಿ ಕರೆಮಾಡಿ ಮಾಹಿತಿ ಒದಗಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಘಟಕವನ್ನು ಪ್ರಾರಂಭಿಸಲಾಗಿದ್ದು, 28 ದೂರುಗಳು ದಾಖಲಾಗಿವೆ. ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿಯು ಸಹ ಕರ್ತವ್ಯ ನಿರ್ವಹಿಸುತ್ತಿದೆ ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.