
ಮಡಿಕೇರಿ ಜೂ.19 NEWS DESK : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರುನೇಮಕಗೊಂಡ ನಾಪಂಡ ರವಿ ಕಾಳಪ್ಪ ಇಂದು ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ.ವಿಜಯೇಂದ್ರ ಅವರಿಂದ ಆದೇಶ ಪ್ರತಿ ಸ್ವೀಕರಿಸಿದರು. ರಾಜ್ಯ ಚುನಾವಣಾ ಅಧಿಕಾರಿ ಕ್ಯಾ. ಗಣೇಶ ಕಾರ್ಣಿಕ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ರಾಜ್ಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.










