Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಸೈನಿಕ ಶಾಲೆಯಲ್ಲಿ ಫುಟ್ಬಾಲ್ ಕ್ರೀಡೆಯ ವಿಜಯೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಸೈನಿಕ ಶಾಲೆಯಲ್ಲಿ ಫುಟ್ಬಾಲ್ ಕ್ರೀಡೆಯ ವಿಜಯೋತ್ಸವ*

ಜೂನ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.19 NEWS DESK : ಸೈನಿಕ ಶಾಲೆಗಳ ಅಂತರ ವಲಯದ ರಾಷ್ಟ್ರೀಯ ಮಟ್ಟದ ಸುಬ್ರತೋ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ರನ್ನರ್ ಅಪ್ ಪ್ರಶಸ್ತಿಗೆ ಕೊಡಗು ಸೈನಿಕ ಶಾಲಾ ತಂಡ ಪಾತ್ರವಾದ ಹಿನ್ನೆಲೆ ಆಡಗಾರರೊಂದಿಗೆ ಕೂಡಿಗೆಯಲ್ಲಿ ಭವ್ಯ ವಿಜಯೋತ್ಸವ ಮೆರವಣಿಗೆ ನಡೆಯಿತು. ಜೂ.9 ರಿಂದ 15ರವರೆಗೆ ಒರಿಸ್ಸಾ ರಾಜ್ಯದ ಭುವನೇಶ್ವರದ ಸೈನಿಕ್ ಶಾಲೆಯಲ್ಲಿ ಆಯೋಜಿತ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡ ಈ ಸಾಧನೆ ಮಾಡಿತ್ತು. ಇದರ ಪ್ರಯುಕ್ತ ಕೂಡಿಗೆ ಸೈನಿಕ ಶಾಲೆಯ ಜೂನಿಯರ್ ಫುಟ್ಬಾಲ್ ತಂಡದ ಆಟಗಾರರು ವಿಜಯಪತಾಕೆಯೊಂದಿಗೆ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ. ಫುಟ್ಬಾಲ್ ಪಂದ್ಯಾವಳಿಯಲ್ಲಿ ಶಾಲೆಯ ಜೂನಿಯರ್ ಪುಟ್ಬಾಲ್ ತಂಡವು, ನಾಯಕ ಕೆಡೆಟ್ ಯಶ್ ಪ್ರತಾಪ್ ನೇತೃತ್ವದಲ್ಲಿ ಕ್ರೀಡಾಕೂಟದ ಕೊನೆಯವರೆಗೂ ಉತ್ತಮ ಪ್ರದರ್ಶನ ನೀಡಿದರೆ, ತಂಡದ ಗೋಲ್ ಕೀಪರ್ ಕೆಡೆಟ್ ಆರ್ಯನ್ ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಗೆ ಭಾಜನರಾದರು. ಇದು ಕೂಡಿಗೆ ಸೈನಿಕ ಶಾಲೆಯ ಇತಿಹಾಸದಲ್ಲೆ ರಾಷ್ಟ್ರಮಟ್ಟದ ವೇದಿಕೆಯಲ್ಲಿ ಮೂಡಿ ಬಂದ ಅಪರೂಪದ ಸಾಧನೆಯಾಗಿದೆ. ವಿಜಯೋತ್ಸವ ಮೆರವಣಿಗೆ ಹಳೇ ಕೂಡಿಗೆಯ ಏಂಜೆಲ್ ಶಾಲೆಯ ಮುಖ್ಯ ರಸ್ತೆಯಿಂದ ಆರಂಭವಾಗಿ ಶಾಲೆಯ ಮುಖ್ಯ ದ್ವಾರದವರೆಗೆ ನಡೆಯಿತು. ಈ ಸಂದರ್ಭ ಶಾಲೆಯ ಸುಮಾರು 600 ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿವರ್ಗ, ಎನ್‍ಸಿಸಿ ಸಿಬ್ಬಂದಿ, ದೈಹಿಕ ಶಿಕ್ಷಕರು ಹಾಗೂ ಕೂಡಿಗೆ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ವಿಜಯೋತ್ಸವ ಮೆರವಣಿಗೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್, ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಉಪ ಪ್ರಾಂಶುಪಾಲರಾದ ಸ್ಕ್ವಾಡರ್ನ್ ಲೀಡರ್ ಮೊಹಮ್ಮದ್  ಹಾಜಿ, ಶಾಲೆಯ ಪ್ರಥಮ ಮಹಿಳೆ ಶ್ರೀಮತಿ ದಿವ್ಯಾ ಸಿಂಗ್ ಹಾಜರಿದ್ದರು.
ಕೊಡಗಿನ ಸಂಸ್ಕೃತಿಯ ಪ್ರತೀಕವಾಗಿ ಶಾಲೆಯ ಬಾಲಕಿಯರು ಕೊಡವ ಮಹಿಳೆಯರ ಉಡುಪಿನಲ್ಲಿ ಫುಟ್ಬಾಲ್ ಆಟಗಾರರನ್ನು ಪುಷ್ಟಗುಚ್ಛದೊಂದಿಗೆ ಸ್ವಾಗತಿಸಿದರು. ಹಾಗೆಯೇ ಶಾಲೆಯ ಡೊಳ್ಳು ಕುಣಿತ ತಂಡ ಹಾಗೂ ತಮಟೆ ತಂಡಗಳೂ ಸಹ ತಮ್ಮ ಹಸ್ತ ಕೌಶಲ್ಯದ ಪ್ರತಿಭೆಯ ಮೂಲಕ ಮೆರವಣಿಗೆಗೆ ಮೆರಗನ್ನು ತಂದರು. ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್, ವಿಜೇತ ತಂಡದ ಎಲ್ಲಾ ಆಟಗಾರರಿಗೂ ಪ್ರಶಸ್ತಿಪತ್ರ ಮತ್ತು ಉಡುಗೊರೆ ಪ್ರದಾನ ಮಾಡಿದರು. ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ತಂಡದ ಸಾಂಘಿಕ ಪ್ರದರ್ಶನವನ್ನು ಪ್ರಶಂಸಿಸುವುದರೊಂದಿಗೆ, ತಂಡದ ತರಬೇತುದಾರ ಶೇಕ್ ಅಜ್ಜದ್, (ಎಐಎಫ್‍ಎಫ್ ಕೋಚ್) ಹಾಗೂ ಶಾಲೆಯ ಕ್ರೀಡೆಗಳ ಮೇಲ್ವಿಚಾರಕರಾದ ವೆಂಕಟರಮಣರವರು ತೋರಿದ ಅವಿರತ ಪ್ರಯತ್ನ ಮತ್ತು ಅರ್ಪಣಾ ಮನೋಭಾವವನ್ನು ಸ್ಮರಿಸಿದರು. ತಂಡಕ್ಕೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿದ ಶಾಲಾ ಶಿಕ್ಷಕಿ ವಿ.ಎಸ್.ಶ್ರೀಲೇಖಾ, ಕಾವ್ಯ ಲೋಕೇಶ್, ದೈಹಿಕ ಶಿಕ್ಷಕ ಸಿಎಚ್‍ಎಂ ವಿಕ್ರಮಜೀತ್ ಸಿಂಗ್‍ರನ್ನು ಪ್ರಶಂಸಿಸಿದರು. ಶಾಲೆಯ ಉಪಪ್ರಾಂಶುಪಾಲರಾದ ಸ್ಕ್ವಾಡರ್ನ್ ಲೀಡರ್ ಮೊಹಮ್ಮದ್ ಹಾಜಿಯವರು, ಶಾಲಾ ತಂಡದ ಸಾಧನೆಯನ್ನು ಶ್ಲಾಘಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.