

ಮಡಿಕೇರಿ ಜೂ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕೊಯವ ಸಮಾಜದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಶಾಸಕರನ್ನು ಭೇಟಿಯಾದ ಪ್ರಮುಖರು ಸಮಾಜದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗಗಳ ಕೊಡಗು ಜಿಲ್ಲಾಧ್ಯಕ್ಷ ಬಾನಂಡ ಪೃತ್ಯು, ಕೋಯವ ಸಮಾಜದ ಅಧ್ಯಕ್ಷ ಜೆ.ಸಿ.ಮಾದಪ್ಪ, ಕಾರ್ಯದರ್ಶಿ ಟಿ.ಜಿ ಕಾರ್ಯಪ್ಪ, ನಿರ್ದೇಶಕರುಗಳಾದ ಎಂ.ಜಿ ಮಹೇಶ್, ಎಂ.ಪೂಣಚ್ಚ ಕೆ.ಎನ್.ಸುಬ್ಬಯ್ಯ ಮೊದಲಾದವರು ಉಪಸ್ಥಿತರಿದ್ದರು. ಮನವಿಯನ್ನು ಸ್ವೀಕರಿಸಿದ ಶಾಸಕರು, ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯಕ್ಕನುಸಾರ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.










