Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ*

ಜೂನ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.19 NEWS DESK : ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿದರು. ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು. ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿರದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತೀವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ತಹಶೀಲ್ದಾರರು ಮತ್ತು ತಾ.ಪಂ ಇಒಗಳ ಜೊತೆ ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುವಂತೆ ನಿರ್ದೇಶನ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ.ಇಒ ಪರಮೇಶ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.