Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಟಾಸ್ಕ್ ಫೋರ್ಸ್ ಸಭೆ : ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ : ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಟಾಸ್ಕ್ ಫೋರ್ಸ್ ಸಭೆ : ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ : ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

ಜೂನ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.20 NEWS DESK :  ಮಡಿಕೇರಿ-ಭಾಗಮಂಡಲ ರಸ್ತೆ ಗುಂಡಿಮಯವಾಗಿದ್ದು, ಸಾರಿಗೆ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ಸದ್ಯ ಮಳೆಯಾಗಿರುವುದಿರಿಂದ ‘ವೆಟ್‍ಮಿಕ್ಸ್’ ಅಳವಡಿಸುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಲಹೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 18 ಗ್ರಾ.ಪಂ.ಒಳಪಟ್ಟಂತೆ ಕಾರುಗುಂದದ ವಿಎಸ್‍ಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆದ ಟಾಸ್ಕ್‍ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಸ್ತೆಗಳು ತುಂಬಾ ಹಳ್ಳ ಬಿದ್ದಿದ್ದು, ಇಂತಹ ಕಡೆಗಳಲ್ಲಿ ವೆಟ್‍ಮಿಕ್ಸ್ ಅಳವಡಿಸುವ್ಸ್ತಾಗಬೇಕು. ಮೇ ಕೊನೆ ವಾರ ಮತ್ತು ಜೂನ್ ಮಧ್ಯದ ವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂದ ಹೆಚ್ಚಿನ ಮಳೆಯಾಗಿದೆ. ಇದರಿಂದ ಮನೆ ಹಾನಿ, ವಿದ್ಯುತ್ ಅಡಚಣೆ ಮತ್ತಿತರ ಸಮಸ್ಯೆಗಳು ಉಂಟಾಗಿದೆ. ಮನೆಹಾನಿ ಸಂಬಂಧಿಸಿದಂತೆ 24 ಗಂಟೆಯೊಳಗೆ ಪರಿಹಾರ ವಿತರಿಸಬೇಕು ಎಂದು ನಿರ್ದೇಶನ ನೀಡಿದರು. ಬೆಟ್ಟಗೇರಿ, ಕಾರುಗುಂದ, ಚೇರಂಬಾಣೆ, ತಣ್ಣಿಮಾನಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆ ಸಂದರ್ಭದಲ್ಲಿ 5 ದಿನವಾದರೂ ವಿದ್ಯುತ್ ಸಂಪರ್ಕ ವಿಲ್ಲದೆ ಸಾರ್ವಜನಿಕರು ಪರಿತಪಿಸಿದ್ದಾರೆ. ಆದ್ದರಿಂದ ಆಯಾಯ ದಿನದಲ್ಲಿಯೇ ವಿದ್ಯುತ್ ಸರಿಪಡಿಸುವ ಕಾರ್ಯವಾಗಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಸೆಸ್ಕ್ ಎಂಜಿನಿಯರ್‍ಗಳಿಗೆ ಎ.ಎಸ್.ಪೊನ್ನಣ್ಣ ಸೂಚಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ರಸ್ತೆ ಬದಿ ಹಳೆಯ ಹಾಗೂ ಬೀಳುವ ಹಂತದ ಮರ ತೆರವುಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸುವುದು ಅತೀ ಮುಖ್ಯವಾಗಿದೆ ಎಂದು ಶಾಸಕರು ನುಡಿದರು. ಅಂಗನವಾಡಿ, ಶಾಲಾ, ಕಾಲೇಜುಗಳ ಕಟ್ಟಡಗಳು ಸುಸ್ಥಿತಿ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ಸಮಸ್ಯೆ ಉಲ್ಬಣ ಆಗದಂತೆ ಗಮನಹರಿಸುವುದು ಅಗತ್ಯ ಎಂದರು. ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳು ಹಾಗೂ ಮಾನವ ಸಂಘರ್ಷ ನಿರಂತರವಾಗಿ ನಡೆದಿದೆ. ಹುಲಿ, ಆನೆ ದಾಳಿ ಈಗ ಕರಡಿ ದಾಳಿ ಸುರುವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಪ್ರಾಣಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಎ.ಎಸ್.ಪೊನ್ನಣ್ಣ ಹೇಳಿದರು. ಚೇರಂಬಾಣೆ ಬಳಿಯ ದೋಣಿಕಾಡು ಬಳಿ 40 ಕುಟುಂಬಗಳಿದ್ದು, ಮಳೆಗಾಲದಲ್ಲಿ ತುಂಬಾ ಸಂಕಷ್ಟ ಅನುಭವಿಸುತ್ತಾರೆ. ಈ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ರಸ್ತೆ ನಿರ್ಮಿಸುವಂತೆ ಸೂಚಿಸಿದರು. ಇರುವ ರಸ್ತೆ ಅಭಿವೃದ್ಧಿ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಚೆಂಬು, ಮದೆನಾಡು, ಡಬ್ಬಡ್ಕದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗೆ ಅಡಚಣೆ ಉಂಟುಮಾಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಭತ್ತ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಉಂಟಾಗದಂತೆ ಗಮನಹರಿಸಬೇಕು. ಅನ್ನಭಾಗ್ಯ ಯೋಜನೆಯ ಅಕ್ಕಿ ಕೇರಳಕ್ಕೆ ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಆಹಾರ ಇಲಾಖೆ ಅಧಿಕಾರಿಗಳು ಎಚ್ಚರವಹಿಸುವಂತೆ ಸೂಚಿಸಿದರು. ತೂಕದಲ್ಲಿಯೂ ಸಹ ಮೋಸವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ನಿರ್ದೇಶನ ನೀಡಿದರು. ಮಳೆಗಾದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಎಚ್ಚರವಹಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಎಂದರು. ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಲು ಉತ್ಸಾಹದಿಂದ ಹೋಗುತ್ತೇವೆ. ಅದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ನಮ್ಮ ಉತ್ಸಾಹವನ್ನು ಕುಗ್ಗಿಸುತ್ತಿದೆ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗಾಗಲೇ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಯಾವ ಹಂತದಲ್ಲಿದೆ ಎಂದು ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾಕಷ್ಟು ಮುನ್ನೆಚ್ಚರ ವಹಿಸಬೇಕು. ಯಾವುದೇ ರೀತಿಯ ಹಾನಿ ಉಂಟಾಗದಂತೆ ಜಾಗೃತಿ ವಹಿಸಬೇಕು ಎಂದರು. ವಾತಾವರಣದಲ್ಲಿನ ಬದಲಾವಣೆಯಿಂದಾಗಿ ಭೂಮಂಡಲದಲ್ಲಿ ಹಲವು ರೀತಿಯ ವೈಪರೀತ್ಯಗಳು ಕಂಡುಬರುತ್ತಿದ್ದು, ವಾತಾವರಣದ ಅಪ್‍ಡೇಟ್ ಮಾಹಿತಿ ತಿಳಿದುಕೊಂಡು ಸಾರ್ವಜನಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದರು. ಕರಡಿಗೋಡು, ಚೆರಿಯಪರಂಬು ಮತ್ತಿತರ ಕಡೆಗಳಲ್ಲಿ ಮನೆ ಹಾನಿ ಸಂಬಂಧಿಸಿದಂತೆ ಕೆಲಸ ನಿರ್ವಹಿಸಬೇಕು. ಈಗಾಗಲೇ ಆರಂಭಿಸಿರುವ ಕಾಮಗಾರಿ ಪೂರ್ಣಗೊಳಿಸಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವತ್ತ ಗಮನಹರಿಸಬೇಕು ಎಂದರು. ಊರಿನ ಪ್ರಮುಖರಾದ ಮುದ್ದಯ್ಯ ಅವರು ಮಾತನಾಡಿ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈ ಭಾಗದಲ್ಲಿ ರಸ್ತೆ ನಿರ್ಮಾಣ ಆಗಿಲ್ಲ. ಮೂಲ ಸೌಕರ್ಯಗಳ ನಯಾಪೈಸೆ ಕೆಲಸ ಆಗಿಲ್ಲ ಎಂದು ದೂರಿದರು. ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷರು, ತಾ.ಪಂ.ಇಒ ಶೇಖರ್, ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಹಲವು ಮಾಹಿತಿ ನೀಡಿದರು. ಗ್ರಾ.ಪಂ.ಪಿಡಿಒಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮುಂಗಾರು ಸಂಬಂಧ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.