


ಮಡಿಕೇರಿ ಜೂ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ಅಂತರಾಷ್ಟ್ರೀಯ 11ನೇ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ ಯೋಗ, ಧ್ಯಾನ ಮಾಡಿ ಗಮನ ಸೆಳೆದರು. ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ನೇತೃತ್ವದಲ್ಲಿ ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಕಲಾವತಿ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪವಿಭಾಗಧಿಕಾರಿ ವಿನಾಯಕ್ ನರ್ವಾಡೆ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಆಯುಷ್ ಅಧಿಕಾರಿ ಶೈಲಜಾ ಸೇರಿದಂತೆ ಹಲವರು ಪಾಲ್ಗೊಂಡು ಯೋಗ ಪ್ರದರ್ಶನ ಮಾಡಿದರು.











