

ಮಡಿಕೇರಿ ಜೂ.21 NEWS DESK : ಭಾಗಮಂಡಲ ವ್ಯಾಪ್ತಿಯಲ್ಲಿ ರೂ.70 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವಿಧ ರಸ್ತೆಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಭಾಗಮಂಡಲ ಪಂಚಾಯತ್ ವ್ಯಾಪ್ತಿಯ ತಾವೂರು ಹೈಸ್ಕೂಲ್ ಪೈಸಾರಿ ರಸ್ತೆ, ತಣ್ಣಿಮಾನಿ, ಚೇರಂಗಾಲ, ಕೋರಂಗಲ ಹಾಗೂ ಭಾಗಮಂಡಲ ಪಟ್ಟಣ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಹಲವು ರಸ್ತೆಗಳನ್ನು ಉದ್ಘಾಟಿಸಿದರು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ಗ್ಯಾರಂಟಿ ಅನುಷ್ಠಾನದ ಉಪಾಧ್ಯಕ್ಷ ಗಿರೀಶ್, ರಮಾನಾಥ್ ಬೇಕಲ್, ಹರ್ಷ, ಪ್ರಕಾಶ್, ಪಕ್ಷದ ಮುಖಂಡರು,ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.









