Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ : ಶಾಸಕ ಡಾ.ಮಂತರ್ ಗೌಡ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ : ಶಾಸಕ ಡಾ.ಮಂತರ್ ಗೌಡ ಭೇಟಿ*

ಜೂನ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.21 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ದೇವಾಲಯದ ಆವರಣಕ್ಕೆ ಭೇಟಿ ಮಾಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿದರು. ದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಸಂಬಂಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ ಮತ್ತು ಪ್ರಮುಖರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಶಿಥಿಲಾವಸ್ಥೆಗೊಂಡಿದ್ದ ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಸರಕಾರದ ಮೂಲಕ ಹೆಚ್ಚಿನ ಅನುದಾನ ಕಲ್ಪಿಸುವ ಭರವಸೆ ವ್ಯಕ್ತಪಡಿಸಿದರು.  ಇದರೊಂದಿಗೆ ವೈಯಕ್ತಿಕವಾಗಿ ಕೂಡ ಸಹಕಾರ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ 2027ರ ಒಳಗೆ ದೇವಸ್ಥಾನದ ಚೀರ್ಣೋದರ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಸರಕಾರದಿಂದ ಅನುದಾನದ ಬಗ್ಗೆ ಶಾಸಕರ ಮೂಲಕ ಮನವಿ ಪತ್ರ ಸಲ್ಲಿಸಲಾಗಿದೆ. ಜೊತೆಗೆ ದಾನಿಗಳಿಂದ ಕೂಡ ಅಗತ್ಯ ನೆರವು ಪಡೆಯುವ ಮೂಲಕ ಕಾವೇರಿ ನದಿ ತಟದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯ ನಡೆಯಲಿದೆ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ ಗುಂಡುರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರಾದ ಕೆ ಎಸ್.ಕೆ.ಶ್ರೀನಿವಾಸರಾವ್ ಚಂದ್ರು, ಜೀರ್ಣೋದ್ಧಾರ ಸಮಿತಿ ಸಂಚಾಲಕರಾದ ವಿ.ಎಸ್.ಆನಂದಕುಮಾರ್, ಡಿ.ಪಿ.ಗಿರೀಶ್, ವಿನೋದ್ ಜೈನ್ , ವಸಂತ್, ಯಶವಂತ್ ಮತ್ತಿತರರು ಇದ್ದರು. ಬೈಚನಹಳ್ಳಿಗೆ ತೆರಳಿದ ಶಾಸಕ ಡಾ.ಮಂತರ್ ಗೌಡ ಅವರು ಅಲ್ಲಿನ ಗ್ರಾಮ ದೇವತೆ ಕನ್ನಂಬಾಡಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.