
ಮಡಿಕೇರಿ ಜೂ.21 NEWS DESK : ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಭೆಯು ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಯುವಶಕ್ತಿಯೇ ದೇಶದ ಶಕ್ತಿ. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಇಂದಿನಿಂದಲೂ ಯುವ ಕಾಂಗ್ರೆಸ್ ಕೊಡುಗೆ ಬಹು ದೊಡ್ಡದಾಗಿದೆ. ಯುವಕರಿಗೆ ರಾಜಕೀಯ ಅನುಭವ ಹಾಗೂ ಸಂಘಟನೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಬಲಾಢ್ಯರಾಗಲು ಯುವ ಕಾಂಗ್ರೆಸ್ ಒಂದು ಮಹತ್ವದ ಘಟಕವಾಗಿದೆ. ಇಂದಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದರ ಸದುಪಯೋಗವನ್ನು ಪಡೆಸಿಕೊಂಡು ತಮ್ಮ ರಾಜಕೀಯ ಭವಿಷ್ಯ ರೂಪಿಸುವುದರೊಂದಿಗೆ ಜನರ ಸೇವೆ ಮಾಡುವುದರಲ್ಲಿ ನಿರತರಾಗಬೇಕೆಂದು ಕರೆ ನೀಡಿದರು. ರಾಜಕೀಯದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಎದುರಾಗುತ್ತದೆ. ಅದರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಅವರಿಗೆ ಸವಾಲುಗಳನ್ನು ಎದುರಿಸಲು ಇಂತಹ ಸನ್ನಿವೇಶ ಉಪಯೋಗವಾಗಲಿದೆ. ಯುವಕರಲ್ಲಿರುವ ಆ ಶಕ್ತಿಯನ್ನು ಸಮಾಜದ ಒಳಿತಿಗೆ ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಹಿಮಾಚಲ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಮಾಧ್ಯಮ ಅಧ್ಯಕ್ಷ ದೀಪಕ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಕೊಡಗು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರ್ಷದ್ ಲತೀಫ್, ಕೊಡಗು ಯುವ ಕಾಂಗ್ರೆಸ್ ನ ವಿವಿಧ ಬ್ಲಾಕ್ ಅಧ್ಯಕ್ಷರುಗಳು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೊಡಗು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ಕೊಡಗು ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರತಿನಿಧಿಗಳು, ಕಾರ್ಯಕರ್ತರು ಹಾಜರಿದ್ದರು.










