Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಅಂತರ ರಾಷ್ಟ್ರೀಯ 11ನೇ ಯೋಗ ದಿನಾಚರಣೆ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಶಾಸಕ ಡಾ.ಮಂತರ್ ಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಅಂತರ ರಾಷ್ಟ್ರೀಯ 11ನೇ ಯೋಗ ದಿನಾಚರಣೆ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಶಾಸಕ ಡಾ.ಮಂತರ್ ಗೌಡ

ಜೂನ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.21 NEWS DESK : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಜೊತೆಗೆ ಮಾನಸಿಕವಾಗಿಯೂ ಸಹ ಸದೃಢರಾಗಿರಬಹುದು ಎಂದು ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು. ಯೋಗವು ಇಡೀ ವಿಶ್ವ ಮೆಚ್ಚುಗೆ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ, ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ದಿನನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಮಾತನಾಡಿ ಯೋಗ/ ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದರು. ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ ಎಂದು ತಿಳಿಸಿದರು. ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಾತನಾಡಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಲವು ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು. ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಯೋಗಾಭ್ಯಾಸ ಶಿಕ್ಷಣ ನೀಡಿದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ನಗರಸಭೆ ಸದಸ್ಯರು ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ರಾಮಚಂದ್ರ ಕಾಮತ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.