
ಮಡಿಕೇರಿ ಜೂ.21 NEWS DESK : ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಟಿ.ಬಿ.ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಧಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಹಿಂದಿನ ಸಾಲಿನ ಅಧ್ಯಕ್ಷರಾದ ಸಿ.ಕೆ.ಉದಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರ ಆಯ್ಕೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಸಹಕಾರ ಇಲಾಖೆಯ ಅಧಿಕಾರಿ ಸುದೀಪ್ ಕಾರ್ಯನಿರ್ವಹಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಜರಿದ್ದು, ಅಧ್ಯಕ್ಷರಿಗೆ ಶುಭ ಕೋರಿದರು. ಸಂಘದ ಉಪಾಧ್ಯಕ್ಷೆ ಗೌರಮಣಿ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ, ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಅರುಣ್ ರಾವ್, ಸಂಘದ ನಿರ್ದೇಶಕರಾದ ಕೆ.ಎಸ್.ಕೃಷ್ಣೇಗೌಡ, ಟಿ.ಎ.ರವಿಚಂದ್ರ, ಟಿ.ಜಿ.ರವಿಕುಮಾರ್, ಹೆಚ್.ಸಿ.ಮೂರ್ತಿ, ಹೇಮ, ಸಿ.ಕೆ.ಉದಯಕುಮಾರ್, ಗ್ರಾಪಂ ಸದಸ್ಯೆ ಸಾವಿತ್ರಿ ಗಿರೀಶ್ ಸೇರಿದಂತೆ ಕಾಂಗ್ರೆಸ್ ಪ್ರಮುಖರಾದ ಪಿ.ಡಿ.ರವಿ, ಎಸ್.ಎಸ್.ಚಂದ್ರಶೇಖರ್, ತೋಟೇಶ್, ರಮೇಶ್, ಗುಂಡಣ್ಣ, ಟಿ.ಎಸ್.ಚಂದ್ರಶೇಖರ್, ಗಣೇಶ್, ವಸಂತಕುಮಾರ್, ಗ್ರಾಮಸ್ಥರು, ಬೆಂಬಲಿಗರು ಇದ್ದರು.










