Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆಯ ಮೇಳ : ಬೆಣ್ಣೆಹಣ್ಣಿನ ಬೇಸಾಯವನ್ನು ಅಭಿವೃದ್ಧಿಪಡಿಸಲು ತಜ್ಞರ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆಯ ಮೇಳ : ಬೆಣ್ಣೆಹಣ್ಣಿನ ಬೇಸಾಯವನ್ನು ಅಭಿವೃದ್ಧಿಪಡಿಸಲು ತಜ್ಞರ ಸಲಹೆ*

ಜೂನ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಜೂ.23 NEWS DESK : ರೈತರು ಬೆಳೆದ ವಿವಿಧ ಬಗೆಯ ಬೆಣ್ಣೆಹಣ್ಣುಗಳು ಹಾಗೂ ವಿವಿಧ ರೀತಿಯ ಖಾದ್ಯಗಳ ಪ್ರದರ್ಶನವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಅಯೋಜಿಸಿದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು. ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗು ಕೇಂದ್ರದ ಸಂಶೋದಿತ ತಳಿಗಳಾದ ಅರ್ಕಾ ಸುಪ್ರೀಮ್, ಅರ್ಕಾ ಕೂರ್ಗ್ ರವಿ ಹಾಗೂ ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ, ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್,ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು. ಪೊನ್ನಂಪೇಟೆಯ ಸಿಇಟಿ ಕಾಲೇಜಿನ ನಿರ್ದೇಶಕರು ಹಾಗೂ ಪ್ರಗತಿಪರ ಬೆಳೆಗಾರರಾದ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿ, ಕೊಡಗಿನವರು ಕಾಫಿ ಹಾಗೂ ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿ ಕೊಂಡಿದ್ದರು. ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ ಒತ್ತುನೀಡಿದಿದ್ದರೆ ಕಿತ್ತಳೆಬೆಳೆಯನ್ನು ಅಭಿವೃದ್ಧಿಪಡಿಸ ಬಹುದಿತೆಂದರು.ಇಂತಹ ವೈವಿಧ್ಯತಾ ಮೇಳಗಳು ಕೃಷಿಕರಿಗೆ ಪ್ರಯೋಜನ ಕಾರಿಯಾಗಲಿದೆ ಎಂದರು. ಭಾರತೀಯ ತೋಟಗಾರಿಕಾ ಸಂಶೋದನಾ ಸಂಸ್ಥೆಯ ಮಾಜಿ ನಿರ್ದೇಶಕರಾದ ಎಂ.ಆರ್.ದಿನೇಶ್ ಮಾತನಾಡಿ, ಕೊಡಗಿನಲ್ಲಿ ಹಲವು ವರ್ಷಗಳಿಂದಲೇ ಈ ಬೆಣ್ಣೆಹಣ್ಣನ್ನು ಬೆಳೆಸಲಾಗುತಿದೆ. ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ಆದಾಯದ ಮೂಲಗಳನ್ನು ಕಂಡುಕೊಳ್ಳ ಬೇಕೆಂದರು. ತೋಟಗಾರಿಕಾ ಸಂಶೋಧನಾ ಕೇಂದ್ರದಿಂದ ಬೆಣ್ಣೆಹಣ್ಣಿನ ಸಂಶೋಧಿತ ತಳಿಗಳನ್ನುಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು. ನಿರ್ದೇಶಕರಾದ‌ ಡಾ.ಪ್ರಕಾಶ್ ಪಾಟೀಲ್ ಮಾತನಾಡಿ, ಆದಾಯದ ಮೂಲವಾಗಿ ಒಂದೇ ಬೆಳೆಯನ್ನು ಅವಲಂಬಿಸುವ ಬದಲು ವಿವಿಧ ಬೆಳೆಗಳನ್ನು ಮಾಡುವ ಮೂಲಕ ಹೆಚ್ಚಿನ ಆದಾಯದ ಮೂಲಗಳನ್ನು ಕಂಡುಕೊಳ್ಳಬೇಕೆಂದರು. ಕೊಡಗಿನ ವಾತಾವರಣವೂ ಬೆಣ್ಣೆಹಣ್ಣಿನ ಬೇಸಾಯಕ್ಕೆ ಉತ್ತಮವಾಗಿದೆಂದರು.
ಮೊದಲಿಗೆ ಐಹೆಚ್ ಅರ್ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಭಾರತೀಯ ತೋಟಗಾರಿಕಾ ಸಂಶೋದನಾ ಸಂಸ್ಥೆ ಹಣ್ಣು ವಿಭಾಗದ‌ ಮುಖ್ಯಸ್ಥರಾದ ಡಾ.ಎಂ.ಶಂಕರ್ ಸ್ವಾಗತಿದರು, ಕೇಂದ್ರದ ಮುಖ್ಯಸ್ಥರಾದ ಡಾ.ಮುರುಳಿದರ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಬೆಣ್ಣೆ ಹಣ್ಣಿನ‌ಬೇಸಾಯ ಕ್ರಮದ ಬಗ್ಗೆಗಿನ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. ಸನ್ಮಾನ:  ಡಾ. ಎಂ.ಆರ್.ದಿನೇಶ್ ಹಾಗೂ ಕೆ.ಎ.ಚಿಣ್ಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿಜೇತರಿಗೆ ಬಹುಮಾನ: ಬೆಣ್ಣೆಹಣ್ಣಿ ವಿವಿಧ ತಳಿಗಳ ಪ್ರದರ್ಶನದಲ್ಲಿ ವೈನಾಡಿನ ಜೋಸೆಫ್ ಕುರುವಿಳಾ ಪ್ರಥಮ, ಅಭ್ಯತಂಮಗಲದ ಕೆ.ಸಿ.ಉಮೇಶ್ ದ್ವಿತೀಯ, ಮಾದಾಪುರದ ಅನಿಲ್ ಚಂಗಪ್ಪ ತ್ರತೀಯ ಬಹುಮಾನ‌ ಪಡೆದರು. ಬೆಣ್ಣೆಹಣ್ಣಿನ ವಿವಿಧ ಖಾದ್ಯಗಳ ವಿಭಾಗದಲ್ಲಿ ಸೋಮವಾರಪೇಟೆಯ ಸಂದ್ಯಾರಾಣಿ ಪ್ರಥಮ,‌ ಮಡಿಕೇರಿಯ ಅಕ್ಷತಾ ಮುರುಳಿಧರ್ ದ್ವಿತೀಯ, ಚೆಟ್ಟಳ್ಳಿಯ ಪುತ್ತರಿರ ಕನ್ನು ಕಾಳಯ್ಯ ತೃತೀಯ ಬಹುಮಾನ ಪಡೆದುಕೊಂಡರು.

ತಾಂತ್ರಿಕ ವಿಷಯ ಮಂಡನೆ: ಬೆಣ್ಣೆಹಣ್ಣು ಕೊಯ್ಲಿನ ನಂತರದ ನಿರ್ವಹಣೆ ಮತ್ತು ಮೌಲ್ಯವರ್ಧನೆ ಬಗ್ಗೆ ಬೆಂಗಳೂರು ಐಸಿಎಅರ್,ಐಐ ಹೆಚ್ ಅರ್ ಹಿರಿಯ ವಿಜ್ಞಾನಿ ಡಾ.ಪ್ರೀತಿ.ಪಿ ಹಾಗೂ ಬೆಣ್ಣೆ ಹಣ್ಣು ಕೃಷಿಯಲ್ಲಿನ ಸಮಸ್ಯೆಗಳು ಮತ್ತು ಪರಿಹಾರಗಳು ಚೆಟ್ಟಳ್ಳಿ ಐಸಿಎಆರ್-ಐ ಐಎಚ್ ಆರ್. ಹಿರಿಯ ವಿಜ್ಞಾನಿ (ಹಣ್ಣು ವಿಜ್ಞಾನ) ಡಾ.ಮುರಳೀಧರ ಬಿ.ಎಂ.ಮಾಹಿತಿ ನೀಡಿದರು. ನಂತರ ರೈತ -ವಿಜ್ಞಾನಿಗಳ ಸಂವಾದ, ಕ್ಷೇತ್ರ ಬೇಟಿ‌ಕಾರ್ಯಕ್ರಮ ನಡೆಯಿತು. ಅರ್ಕಾ ಸುಪ್ರೀಮ್ ಹಾಗು ಅರ್ಕಾ ಕೂರ್ಗ್ ರವಿ ತಳಿಗಳ ಅಭಿವೃದ್ಧಿಗೆ ಕೇಂದ್ರದಿಂದ ಗೋಣಿಕೊಪ್ಪಲಿನ ರಶ್ಮಿ ಅವರಿಗೆ ಲೈಸನ್ಸ್ ನೀಡಲಾಯಿತು. ಕಾಫಿ ಮಂಡಳಿಯ ಮಾಜಿ ಉಪಾದ್ಯಕ್ಷರು ಹಾಗೂ ಪ್ರಗತಿ ಪರ ರೈತರಾದ ನಡಿಕೇರಿಯಂಡ ಬೋಸ್ ಮಂದಣ್ಣ‌, ವಿವಿಧ ಇಲಾಖಾ ಆದಿಕಾರಿಗಳು, ಸೇರಿದಂತೆ ಕೃಷಿ ವಿಜ್ಞಾನ ‌ಕೇಂದ್ರ ಗೋಣಿಕೊಪ್ಪಲು, ಕಾಫಿ ಸಂಶೋಧನಾ‌‌ ಕೇಂದ್ರ ಚೆಟ್ಟಳ್ಳಿ, ಜೆಎಸ್ ಎಸ್ ಕ್ರಷಿ ವಿಜ್ಞಾನ ‌ಕೇಂದ್ರ‌ಮೈಸೂರು,ಸಂಬಾರ ಮಂಡಳಿ ಅಪ್ಪಂಗಳದ ಅಧಿಕಾರಿಗಳು ಭಾಗವಹಿಸಿದರು. ಬೆಣ್ಣೆಹಣ್ಣಿನ ವೈವಿಧ್ಯತೆಯ ಮೇಳ ಹಾಗೂ ವಿಶ್ವಯೋಗ ದಿನದ ಅಂಗವಾಗಿ ಅವಯೋಗ ಚಿತ್ರವನ್ನು‌ ಪ್ರದರ್ಶಿಸ ಲಾಗಿತ್ತು.

ವರದಿ : ಪುತ್ತರಿರ ಕರುಣ್ ಕಾಳಯ್ಯ 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.