Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಪತ್ರಕರ್ತರಿಗೆ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ : ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಪ್ರಮುಖ : ಕಾಣತಂಡ ಬೀನ ಜಗದೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಪತ್ರಕರ್ತರಿಗೆ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ : ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಪ್ರಮುಖ : ಕಾಣತಂಡ ಬೀನ ಜಗದೀಶ್*

ಜೂನ್ 23, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ವಿರಾಜಪೇಟೆ ಜೂ.23 NEWS DESK : ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನ ಜಗದೀಶ್ ಹೇಳಿದರು, ನಗರದ ಎ-ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳು ಜನಸಾಮಾನ್ಯರಿಗೆ ತಲುಪಲು ಪತ್ರಕರ್ತರು ಪ್ರಮುಖ ಕಾರಣಕರ್ತರು. ತಮ್ಮ ವೈಯುಕ್ತಿಕ ಬದುಕನ್ನು ಬದಿಗೊತ್ತಿ ಸಮಾಜ ನಿರ್ಮಾಣದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕೆಲಸ ಶ್ಲಾಘನೀಯ. ಮುಂದಿನ ದಿನಗಳಲ್ಲಿ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಪ್ರಶಸ್ತಿ ಸ್ಥಾಪಿಸುವುದಾಗಿ ಕಾಣತಂಡ ಬೀನ ಜಗದೀಶ್ ಇದೇ ಸಂದರ್ಭ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತಾನಾಡಿ, ಪತ್ರಕರ್ತರು ಬದಲಾದ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬೇಕಾಗಿದೆ. ಪ್ರಸ್ತುತ ದಿನಗಳಲ್ಲಿ ತನಿಖಾ ವರದಿ ಸಂಪೂರ್ಣವಾಗಿ ಮಾಯಾವಾಗುತ್ತಿದೆ. ತನಿಖಾ ವರದಿ ಮಾಡುವಲ್ಲಿ ಪತ್ರಕರ್ತರು ಕೂಡ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು. ಪತ್ರಕರ್ತರು ವಿಶೇಷ ವರದಿಯತ್ತ ಹೆಚ್ಚು ಆಸಕ್ತಿ ವಹಿಸಿಕೊಂಡು, ಧ್ವನಿಯಿಲ್ಲದವರಿಗೆ ತಮ್ಮ ವರದಿಯ ಮೂಲಕ ಧ್ವನಿಯಾಗಬೇಕಿದೆ ಎಂದರು. ಪ್ರಶಸ್ತಿಯು ಪತ್ರಕರ್ತನ ಜವಬ್ದಾರಿ ಹೆಚ್ಚಿಸಲಿದೆ. ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೂ ಕೂಡ ತಮ್ಮ ಕೊಡುಗೆ ನೀಡಬೇಕೆಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ವಿಷಯವಾಗಿದೆ. ಪತ್ರಕರ್ತರು ಇತ್ತೀಚಿನ ದಿನಗಳಲ್ಲಿ ಕೂತಲ್ಲೇ ಸುದ್ದಿ ಮಾಡುತ್ತಿದ್ದಾರೆ. ವರದಿಯ ಸತ್ಯಾಂಶವನ್ನು ತಿಳಿಯಲು ಆಸಕ್ತಿ ತೋರುತ್ತಿಲ್ಲ. ಪತ್ರಿಕೋದ್ಯಮದಿಂದ ತನಿಖಾ ವರದಿ ದೂರವಾಗುತ್ತಿದೆ ಎಂದು ಸವಿತಾ ರೈ ವಿಷಾದ ವ್ಯಕ್ತಪಡಿಸಿದರು. ತಾಲ್ಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸಿ.ಎ ನಾಸಿರ್ ಅವರು ದತ್ತಿ ಪ್ರಶಸ್ತಿ ಸ್ಥಾಪನೆ ಮಾಡುವುದಾಗಿ ತಿಳಿಸಿದರಲ್ಲದೆ ಸಮಾಜವನ್ನು ತಿದ್ದುವ ಮಹತ್ತರ ಜವಬ್ದಾರಿ ಪತ್ರಕರ್ತರ ಮೇಲಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜದ ಕಣ್ಣಿನಂತೆ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ಅವರು ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ರಘು ಮಾಚಯ್ಯ ಇದ್ದರು. ವಾರ್ಷಿಕ ಪ್ರಶಸ್ತಿ ಪ್ರದಾನ:: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಆರು ಮಂದಿ ಪತ್ರಕರ್ತರಿಗೆ ಪ್ರದಾನ ಮಾಡಲಾಯಿತು. ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನು ಕೆ.ಎಂ ಇಸ್ಮಾಯಿಲ್ ಕಂಡಕರೆ ಹಾಗೂ ಸತೀಶ್ ನಾರಾಯಣ್, ಅತ್ಯುತ್ತಮ ಕೃಷಿ ವರದಿ ಟಿ.ಜೆ ಕಿಶೋರ್ ಕುಮಾರ್, ಅತ್ಯುತ್ತಮ ಮಾನವೀಯ ವರದಿಗೆ ರವಿಕುಮಾರ್ ಎಂ, ಅರಣ್ಯ ವನ್ಯ ಜೀವಿ ಪ್ರಶಸ್ತಿ ಅಂತೋಣಿ ಪಿ.ವಿ ಹಾಗೂ ಅತ್ಯುತ್ತಮ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ರಜಿತಾ ಕಾರ್ಯಪ್ಪ ಅವರಿಗೆ ಪ್ರದಾನ ಮಾಡಲಾಯಿತು. ಹಾಗೂ ಶೇಕಡಾ 80ಕ್ಕೂ ಹೆಚ್ಚು ಅಂಕ ಪಡೆದ ತಾಲೂಕು ಸಂಘದ ಸದಸ್ಯರ ಮಕ್ಕಲಾದ ಕೆ.ಈಶಾನ್ವಿ, ರಾಗ ಹೆಚ್ ಶೆಟ್ಟಿ, ಪಿ.ಸಿ. ಕಾಜಲ್, ಸಮೃಧ್ಧಿ, ಎಂ.ಕೆ ಜಸ್ಮಿತಾ, ಪೋಷಿಕ ಸಿ.ಟಿ., ಜೀಷ್ಮ ಎಂ.ಕೆ., ವೈಭವ್ ಕಾರ್ತಿಕೆಯನ್ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮಹಾಸಭೆ : ಪ್ರಶಸ್ತಿ ಪ್ರದಾನ ಸಮಾರಂಭಕ್ಕು ಮೊದಲು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ವಹಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎ.ಎಸ್.ಮುಸ್ತಫಾ ವಾರ್ಷಿಕ ವರದಿ ಹಾಗೂ ಕಳೆದ ಮಹಾಸಭೆ ವರದಿ ಮಂಡಿಸಿದರು. ಖಜಾಂಜಿ ಡಾ.ಹೇಮಂತ್ ಲೆಕ್ಕಪತ್ರವನ್ನು ಮಂಡಿಸಿದರು. ಮಹಾಸಭೆಯ ವೀಕ್ಷಕರಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎಚ್.ಕೆ ಜಗದೀಶ್ ಆಗಮಿಸಿದ್ದರು. ಈ ಸಂದರ್ಭ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅನು ಕಾರ್ಯಪ್ಪ, ಖಜಾಂಜಿ ಆನಂದ್ ಕೊಡಗು ವೇದಿಕೆಯಲ್ಲಿದ್ದರು. ಸಭೆಯಲ್ಲಿ ಕಾರ್ಯದರ್ಶಿ ರಜಿತಾ ಕಾರ್ಯಪ್ಪ, ನಿರ್ದೇಶಕರಾದ ರವಿಕುಮಾರ್ ಎಂ.ಕೆ, ಡಿ. ಮಂಜುನಾಥ್, ಕಿಶೋರ್ ಕುಮಾರ್ ಶೆಟ್ಟಿ ಸೇರಿದಂತೆ ಸಂಘದ ಸದಸ್ಯರುಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.