
ನಾಪೋಕ್ಲು ಜೂ.23 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಎನ್.ಸಿ.ಸಿ ಸಂಯುಕ್ತ ಆಶ್ರಯದಲ್ಲಿ “ಯೋಗ ಫಾರ್ ಒನ್ ಅರ್ಥ್, ಒನ್ ಹೆಲ್ತ್” ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡು ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ತೇಜಸ್ ಯೋಗಾಸನದ ಮಹತ್ವವನ್ನು ತಿಳಿಸಿ ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ, ವೃಕ್ಷಾಸನ, ಚಕ್ರಾಸನ, ಶವಾಸನ ಮುಂತಾದ ಆಸನಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿ ಯತೀಶ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಶ್ಮಿ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಧಮಯಂತಿ, ಎನ್ ಸಿ ಸಿ ಅಧಿಕಾರಿ ಕಾವೇರಪ್ಪ ಹಾಗೂ ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಶಿಕ್ಷಕರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ









