Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*
  • *ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಕರ್ನಾಟಕ ಸೇರಿದಂತೆ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಮರು ಅಧಿಸೂಚನೆ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಕರ್ನಾಟಕ ಸೇರಿದಂತೆ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಮರು ಅಧಿಸೂಚನೆ*

ಜೂನ್ 24, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ಭಾರತದಲ್ಲಿ ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್‍ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್‍ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ. ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬಲ್ಲ ಅಭ್ಯರ್ಥಿಗಳಿಗೆ ಇವು ಮೀಸಲಾಗಿವೆ. ಉಳಿದ ಹುದ್ದೆಗಳಿಗೂ ಆಯಾ ರಾಜ್ಯಗಳ ಭಾಷಾ ನಿಯಮ ಅನ್ವಯವಾಗಲಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಾಕಾಂಕ್ಷಿಗಳಿಗೆ, ಈ ಹಿಂದೆ ಮೇ ತಿಂಗಳಲ್ಲಿ ಈ ಕುರಿತು ಅಧಿಸೂಚನೆ ಪ್ರಕಟಿಸಿತ್ತು. ಮೇ ಕೊನೆಯ ವಾರದಲ್ಲಿ ಅರ್ಜಿ ಸಲ್ಲಿಕೆ ಕೊನೆಗೊಳಿಸಿದ್ದರೂ, ಇದೀಗ ಅದೇ ಅಧಿಸೂಚನೆಗೆ ಮತ್ತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಹೊಸ ಪ್ರಕಟಣೆಗಳ ಪ್ರಕಾರ, ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ವಿರುವುದಿಲ್ಲ, ಹುದ್ದೆಗಳ ಸಂಖ್ಯೆ: 2025-26ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು ರೆಗ್ಯುಲರ್ 2,600 ಮತ್ತು ಬ್ಯಾಕ್ಲಾಗ್ 364 ಹುದ್ದೆಗಳಿವೆ. 2,964 ರಲ್ಲಿ ಕರ್ನಾಟಕದಿಂದ 250 ರೆಗ್ಯುಲರ್ ಹಾಗೂ ಬ್ಯಾಕ್ ಲಾಗ್ 39 ಮಂದಿಗೆ ಅವಕಾಶ ಸಿಗಲಿದೆ. ಆನ್ಲೈನ್ ಪರೀಕ್ಷೆ ಮೂಲಕ ಕರ್ನಾಟಕ ಸೇರಿದಂತೆ ದೇಶದಾದ್ಯಂತವಿರುವ ಶಾಖೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಮತ್ತು ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಯ ಹೆಸರು:: ಜೂನಿಯರ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಟೇಲ್ -1, ವೇತನಶ್ರೇಣಿ:: 48, 480-85, 920 ರೂ. ಇದಲ್ಲದೆ ಬ್ಯಾಂಕ್ ಹೆಚ್ಚುವರಿಯಾಗಿ, ವಿಶೇಷ ಭತ್ಯೆ, ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ವಸತಿ ಕ್ವಾರ್ಟರ್ಸ್/ಲೀಸ್ ಬಾಡಿಗೆ, ಬ್ಯಾಂಕಿನ ನೀತಿಯ ಪ್ರಕಾರ ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಎಲ್‍ಎಫ್‍ಸಿ, ಮರುಪಾವತಿಯಂತಹ ಇತರ ಸೌಲಭ್ಯಗಳಿಗೆ ಅರ್ಹರಾಗಿರುತ್ತಾರೆ. ಮತ್ತು ಇತರ ಭತ್ಯೆಗಳನ್ನು ಚಾಲ್ತಿಯಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಪಾವತಿಸಲಾಗುವುದು.  ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ : 750. ಪ.ಜಾ, ಪ.ಪಂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ವಯೋಮಿತಿ: ಕನಿಷ್ಠ 21 ವರ್ಷ ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಶೈಕ್ಷಣಿಕ ಅರ್ಹತೆ: 1)ಯಾವುದೆ ವಿಷಯಗಳಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೈದ್ಯಕೀಯ, ಎಂಜಿನಿಯರಿಂಗ್, ಸಿ.ಎ. ಮಾಡಿದವರು ಕೂಡ ಅರ್ಜಿ ಸಲ್ಲಿಸಬಹುದು ಪದವಿಯ ಜತೆಯಲ್ಲಿ ಸ್ಥಳೀಯ ಭಾಷಾ ಜ್ಞಾನವನ್ನು (ಬರೆಯುವ, ಓದುವ ಮತ್ತು ಅರ್ಥಮಾಡಿಕೊಳ್ಳುವ) ಅಭ್ಯರ್ಥಿಯು ಹೊಂದಿರಬೇಕು. 2) ಎರಡು ವರ್ಷ ಯಾವುದೇ ವಾಣಿಜ್ಯ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಅಥವಾ ಆರ್ಬಿಐನಿಂದ ಅಂಗೀಕೃತವಾಗಿರುವ ಯಾವುದೇ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕಿರುತ್ತದೆ. ಅಲ್ಲದೆ, ಉತ್ತಮ ಸಿಬಿಲ್ ಸ್ಕೋರ್ ಹೊಂದಿರಬೇಕು. ಆನ್ಲೈನ್ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮೈಸೂರು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗಲೇ ತಮ್ಮ ಹತ್ತಿರದ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಪರೀಕ್ಷಾ ಪೂರ್ವ ತರಬೇತಿ: ಬ್ಯಾಂಕ್ ವತಿಯಿಂದ ಎಸ್ಸಿ/ಎಸ್ಟಿ/ ಒಬಿಸಿ/ಧಾರ್ಮಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಈ ತರಬೇತಿಯ ಅಗತ್ಯವಿದ್ದವರು ಅರ್ಜಿ ಸಲ್ಲಿಸುವಾಗಲೇ ಅರ್ಜಿಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಬೇಕಾಗುತ್ತದೆ ನೇಮಕಾತಿ ಪ್ರಕ್ರಿಯೆ ಹೇಗೆ…? :: ಮೊದಲಿಗೆ ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಯ ದಾಖಲೆಗಳನ್ನು ಬ್ಯಾಂಕಿನ `ಪರಿಶೀಲನಾ ಸಮಿತಿ’ (Screening Committee) ಪರಿಶೀಲಿಸಿ, ವೃತ್ತವಾರು ಮೆರಿಟ್ ಪಟ್ಟಿಯನ್ನು ಪ್ರಕಟಿಸಲಿದೆ. ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಸಂದರ್ಶನ ನಡೆಸಿ, ಆನ್ಲೈನ್ ಪರೀಕ್ಷೆಯಲ್ಲಿ ಪಡೆದ ಅಂಕ ಮತ್ತು ಸಂದರ್ಶನದಲ್ಲಿ ಪಡೆದ ಅಂಕವನ್ನು 75:25 ಅನುಪಾತದಲ್ಲಿ ಲೆಕ್ಕಾಚಾರ ಹಾಕಿ ಹೆಚ್ಚು ಅಂಕಪಡೆದ ಅಭ್ಯರ್ಥಿಗಳ (ಮೀಸಲಾತಿ ಅನ್ವಯಿಸಿ) ಅಂತಿಮ ಆಯ್ಕೆ ಪಟ್ಟಿ ಸಿದ್ದಪಡಿಸಲಾಗುತ್ತದೆ. ಈ ಅಭ್ಯರ್ಥಿಗಳಲ್ಲಿ ಅಗತ್ಯ ಇರುವ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹತೆ ಪಡೆದವರನ್ನು ನೇಮಕಮಾಡಿಕೊಳ್ಳಲಾಗುತ್ತದೆ. ನೆನಪಿಡಿ :: ಎಸ್‍ಎಸ್‍ಎಲ್‍ಸಿ ಅಥವಾ ಪಿಯುಸಿಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಓದಿ, ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಈ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿರುತ್ತದೆ. ಪರೀಕ್ಷೆಯ ಸ್ವರೂಪ: ಆನ್ಲೈನ್ ಪರೀಕ್ಷೆಯು 120 ಅಂಕಗಳಿಗೆ ನಡೆಯಲಿದ್ದು, ನಾಲ್ಕು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
1. ಇಂಗ್ಲಿಷ್ ಭಾಷೆ. (English Language),  2. ಬ್ಯಾಂಕಿಂಗ್ ಕ್ಷೇತ್ರದ ಜ್ಞಾನ (Banking Knowledge),  3.ಸಾಮಾನ್ಯಜ್ಞಾನ/ಆರ್ಥಿಕತೆ (General Awareness/Economy),  4. ಕಂಪ್ಯೂಟರ್ ಆಪ್ಟಿಟ್ಯೂಟ್ (Computer Aptitude) ಒಟ್ಟು 120 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಜತೆಯಲ್ಲಿಯೇ ಇಂಗ್ಲಿಷ್ ಭಾಷೆಗೆ ಸಂಬಂಧಿಸಿದ ವಿವರಣಾತ್ಮಕ ಪರೀಕ್ಷೆ (Descriptive Test) ನಡೆಯಲಿದೆ. ಪತ್ರ ಮತ್ತು ಪ್ರಬಂಧ ಬರೆಯುವುದಕ್ಕೆ ಸಂಬಂಧಿಸಿದಂತೆ ತಲಾ ಒಂದೊಂದು ಪ್ರಶ್ನೆ ಕೇಳಲಾಗಿರುತ್ತದೆ. ಇದಕ್ಕೆ ಉತ್ತರ ಬರೆಯಲು 30 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. 50 ಅಂಕಗಳಿಗೆ ಈ ಪರೀಕ್ಷೆ ನಡೆಯಲಿದೆ. ಸಂದರ್ಶನಕ್ಕೆ 50 ಅಂಕ ನಿಗದಿಪಡಿಸಲಾಗಿರುತ್ತದೆ. ಇದರಲ್ಲಿ ಬ್ಯಾಂಕ್ ನಿಗದಿಪಡಿಸಿರುವಷ್ಟು ಕನಿಷ್ಠ ಅಂಕ ಪಡೆದ ಅಭ್ಯರ್ಥಿಗಳನ್ನು ಮಾತ್ರ ನೇಮಕಕ್ಕೆ ಪರಿಗಣಿಸಲಾಗುತ್ತದೆ. ಋಣಾತ್ಮಕ ಮೌಲ್ಯಮಾಪನ ಇಲ್ಲ: ಆನ್ಲೈನ್ ಪರೀಕ್ಷೆಯ ವಸ್ತುನಿಷ್ಠ ಮಾದರಿಯಲ್ಲಿ ನಡೆಯುವ ಈ ಪರೀಕ್ಷೆಯ ಪ್ರತಿ ವಿಭಾಗದಲ್ಲಿಯೇ ಇಂತಿಷ್ಟೇ ಅಂಕ ಪಡೆದಿರಲೇಬೇಕೆಂಬ ನಿಯಮವೇನೂ ಇರುವುದಿಲ್ಲ. ಅಂತೆಯೇ ಋಣಾತ್ಮಕ ಮೌಲ್ಯಮಾಪನ ಕೂಡ ಇರುವುದಿಲ್ಲ. ಕನ್ನಡದಲ್ಲಿ ಪರೀಕ್ಷೆ ನಡೆಯೊಲ್ಲ :: ಪ್ರೊಬೇಷನ್ ಅವಧಿ:  ಆಯ್ಕೆಯಾದ ಅಭ್ಯರ್ಥಿಗಳು ಬ್ಯಾಂಕಿಗೆ ಸೇರಿದ ದಿನಾಂಕದಿಂದ 6 ತಿಂಗಳ ಕಾಲ ಸಕ್ರಿಯ ಸೇವೆಯ ಅವಧಿಗೆ ಪ್ರೊಬೇಷನ್‍ನಲ್ಲಿರುತ್ತಾರೆ. ಅರ್ಜಿ ಸಲ್ಲಿಸಲು ವೆಬ್ ಲಿಂಕ್ ಹಾಗೂ ಅಧಿಸೂಚನೆಗೆ : https://bank.sbi/web/careers/current-openings

ಮಾಹಿತಿ ::  ಆರ್.ಕೆ.ಬಾಲಚಂದ್ರ.
ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.14  NEWS DESK  :  66/33/11 ಕೆ.ವಿ MUSS ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33ಏಗಿ…

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026

*ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*

ಏಪ್ರಿಲ್ 14, 2026

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.