Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಗ್ರಾ.ಪಂ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಗ್ರಾ.ಪಂ ನೌಕರರ ಪ್ರತಿಭಟನೆ*

ಜೂನ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK :  ಗ್ರಾಮ ಪಂಚಾಯ್ತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೈಜ್ಞಾನಿಕ ರೂಪದ ಕನಿಷ್ಟ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಸಂಘದ ಸದಸ್ಯರು ಹಾಗೂ ಗ್ರಾ.ಪಂ ನೌಕರರು ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಸಂಘÀಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರ ಸಂಘದಿಂದ ರಾಜ್ಯದಾದ್ಯಂತ ಆಯೋಜಿತ ಮುಷ್ಕರದ ಭಾಗವಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಹಲವಾರು ವರ್ಷಗಳಿಂದ ಗ್ರಾಮ ಪಂಚಾಯ್ತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಇಲ್ಲಿಯವರೆಗು ಸರ್ವೋಚ್ಛ ನ್ಯಾಯಾಲಯದ ಸೂಚನೆಗಳಿದ್ದರು ಕನಿಷ್ಟ ವೇತನ ಪಾವತಿಯಾಗುತ್ತಿಲ್ಲ. ಪ್ರಸ್ತುತ ಪಂಚಾಯ್ತಿಗಳಲ್ಲಿ ನೌಕರರು ‘ಜೀತದಾಳು’ಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ನಿತ್ಯೋಪಯೋಗಿ ವಸ್ತುಗಳ ಧಾರಣೆ ಹೆಚ್ಚಳವಾಗುತ್ತಿದೆ. ಇದಕ್ಕೆ ಅನುಗುಣವಾದ ರೀತಿಯಲ್ಲಿ ಗ್ರಾಮ ಪಂಚಾಯ್ತಿ ನೌಕರರಿಗೆ ವೇತನವನ್ನು ನೀಡುತ್ತಿಲ್ಲ. ಇದರಿಂದ ಗ್ರಾಮ ಪಂಚಾಯ್ತಿಗಳಲ್ಲಿ ದುಡಿಯುತ್ತಿರುವ ನೌಕರರು ಕುಟುಂಬ ನಿರ್ವಹಣೆ ಮಾಡಲು ಅರೆಹೊಟ್ಟೆಯಲ್ಲಿ ಪರದಾಡುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಗ್ರಾಮ ಪಂಚಾಯ್ತಿಯ ವಿವಿಧ ಐದು ಹುದ್ದೆಗಳನ್ನು ಪಂಚಾಯ್ತಿ ನೌಕರರು ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ದರ ಏರಿಕೆಯ ಈ ದಿನಗಳಲ್ಲಿ ಕುಟುಂಬದ ಸದಸ್ಯರ ಆಹಾರ, ಶಿಕ್ಷಣ, ಮನೆ ಬಾಡಿಗೆ ಇತರೆ ಖರ್ಚುವೆಚ್ಚಗಳ ಆಧಾರದಲ್ಲಿ ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನವನ್ನು ನೀಡಬೇಕು. ನ್ಯಾಯಾಲಯದ ಸೂಚನೆಗಳಂತೆ ಗ್ರಾಪಂಗಳ ಕರವಸೂಲಿಗಾರ, ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್‍ಗಳಿಗೆ ಕನಿಷ್ಟ 38 ಸಾವಿರ ರೂ., ವಾಟರ್‍ಮ್ಯಾನ್, ಪಂಪ್ ಆಪರೇಟರ್ ಮತ್ತು ಮೆಕಾನಿಕ್ ಹುದ್ದೆಗಳನ್ನು ನಿರ್ವಹಿಸುವವರಿಗೆ 33 ಸಾವಿರ ರೂ., ಅಟೆಂಡರ್, ಜವಾನರುಗಳಿಗೆ 28,750 ರೂ., ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವರಿಗೆ 25 ಸಾವಿರ ರೂ. ಕನಿಷ್ಠ ವೇತನವನ್ನು ನಿಗದಿಪಡಿಸಬೇಕು. ಗ್ರಾಮ ಪಂಚಾಯ್ತಿಗಳಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಸೇವಾ ಹಿರಿತನದ ಮಾನ್ಯತೆ ನೀಡಿ, ಮೂಲ ವೇತನಕ್ಕೆ ಶೇ.2 ರಷ್ಟು ಹೆಚ್ಚುವರಿ ಭತ್ಯೆಯನ್ನು ಪ್ರತಿವರ್ಷ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನಾಕಾರರು ನೌಕರರ ಸಹಿ ಸಂಗ್ರಹದ ಮನವಿ ಪತ್ರವನ್ನು ಕಾರ್ಮಿಕ ಅಧಿಕಾರಿ ಕಾವೇರಿ ಅವರ ಮೂಲಕ ಕಾರ್ಮಿಕ ಸಚಿವರು ಹಾಗೂ ಪಂಚಾಯತ್ ರಾಜ್ ಸಚಿವರಿಗೆ ಸಲ್ಲಿಸಿದರು. ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರುಗಳಾದ ಮಹದೇವ್, ಸಿ.ವಿ.ದಿಲೀಪ್, ಸದಸ್ಯರುಗಳಾದ ಟಿ.ಕೆ.ಮೂರ್ತಿ, ಮಹಲಿಂಗ., ಎಂ.ಎಂ.ಸೌಮ್ಯ, ಎಂ.ಎಸ್.ಸೌಮ್ಯ, ಶಿವಭಾಗ್ಯ, ಕೆ.ಬಿ.ಸತೀಶ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಪಂಚಾಯ್ತಿ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.4: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಘಟಕ ಹಾಗೂ…

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.