Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಹಲವು ವಿಚಾರಗಳ ಕುರಿತು ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಹಲವು ವಿಚಾರಗಳ ಕುರಿತು ಚರ್ಚೆ*

ಜೂನ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದರ ಜೊತೆಗೆ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ಮುತ್ತಪ್ಪ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೊದ್ದೂರು-ಹೊದವಾಡ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿದರು. ಹೆಚ್.ಎಸ್.ಮುತ್ತಪ್ಪ ಮಾತನಾಡಿ, ಹರದೂರು ಗ್ರಾ.ಪಂ ವ್ಯಾಪ್ತಿಯ ಮಲ್ಲಿಕಾರ್ಜುನ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಲವು ಕಾಮಗಾರಿ ನಡೆದಿದ್ದು, ಬಿಲ್ಲುಗಳ ಪಾವತಿಗೆ ಬಾಕಿ ಇದೆ ಎಂದರು. ಮತ್ತೊಬ್ಬ ಸಮಿತಿ ಸದಸ್ಯ ಜೆ.ಎಲ್.ಜನಾರ್ಧನ ಮಾತನಾಡಿ, ಗಂಗಾ ಕಲ್ಯಾಣ ಯೋಜನೆಯಡಿ ಹಲವು ಕೆಲಸಗಳು ಬಾಕಿ ಇದ್ದು, ಕೂಡಲೇ ಪೂರ್ಣಗೊಳಿಸಬೇಕಿದೆ ಎಂದು ಕೋರಿದರು. ಈ ಸಂದರ್ಭ ಮಾತನಾಡಿದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಚಂದ್ರಪ್ಪ ಕೆಲವು ಯೋಜನೆಗಳು ಕೇಂದ್ರ ಕಚೇರಿಯಿಂದ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಈ ಸಂಬಂಧ ಕೇಂದ್ರ ಕಚೇರಿ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ಧನ ಕೊಡ್ಲಿಪೇಟೆ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೆ ಅಲ್ಲಿನ ಸಾರ್ವಜನಿಕರು ಪ್ರತೀನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗಮನ ಸೆಳೆದರು. ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಬೇಕು ಎಂದರು ಕೋರಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ವೈದ್ಯರ ಕೊರತೆ ಎಲ್ಲೆಡೆ ಇದ್ದು, ವೈದ್ಯರ ನಿಯೋಜನೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು. ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಹಾಗೂ ಜಾಯ್ಸ್ ಮೆನೇಜಸ್ ಮಾತನಾಡಿ ಬಾಳೆಗುಂಡಿ ವಾಲ್ನೂರು ತ್ಯಾಗತ್ತೂರು ವಿವಿಧ ಹಾಡಿಗಳಲ್ಲಿ ವಾಸಿಸುವ ಪರಿಶಿಷ್ಟ ವರ್ಗದ ಜನರು ಆಧಾರ್ ಕಾರ್ಡ್ ಇಲ್ಲದೆ ಪಡಿತರ ಚೀಟಿ ಪಡೆಯಲು ಸಾಧ್ಯವಾಗಿಲ್ಲ, ಆದ್ದರಿಂದ ಆಧಾರ್ ಇಲ್ಲದ ಕುಟುಂಬಗಳನ್ನು ಗುರ್ತಿಸಿ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದರು. ಸಫಾಯಿ ಕರ್ಮಚಾರಿ/ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಇದೇ ಸಂದರ್ಭದಲ್ಲಿ ನಡೆಯಿತು. ಸಮಿತಿ ಸದಸ್ಯರಾದ ರಂಗಸ್ವಾಮಿ ಮಾತನಾಡಿ ಪೌರಕಾರ್ಮಿಕರ ದಿನಾಚರಣೆಯನ್ನು ಗ್ರಾ.ಪಂ.ಮಟ್ಟದಲ್ಲಿಯೂ ಆಯೋಜಿಸುವಂತಾಗಬೇಕು ಎಂದು ಕೋರಿದರು. ಹಾಗೆಯೇ ಉನ್ನತ ವ್ಯಾಸಂಗ ಮಾಡಿದ ಪೌರಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಸುಂಟಿಕೊಪ್ಪ ಹೋಬಳಿ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲದೆ ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ಜಾಗ ಕಾಯ್ದಿರಿಸಿ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ರಂಗಸ್ವಾಮಿ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸುಂಟಿಕೊಪ್ಪದಲ್ಲಿ ಸರ್ಕಾರಿ ಭೂಮಿ ಸಿಗುವುದು ಕಷ್ಟಸಾಧ್ಯವಾಗಿದೆ. ಹತ್ತಿರದಲ್ಲಿ ಪೈಸಾರಿ ಜಾಗ ಇದ್ದಲ್ಲಿ ಗುರುತಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸಫಾಯಿ ಕರ್ಮಚಾರಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ನೇರ ಸಾಲ ಯೋಜನೆಯಡಿ ಸಹಾಯಧನ ಕಲ್ಪಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ರಂಗಸ್ವಾಮಿ ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಪರಿಶಿಷ್ಟರಿಗಾಗಿ ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ತಲುಪಿಸುವಂತಾಗಬೇಕು. ಸರ್ಕಾರದಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹರಿಗೆ ಸವಲತ್ತು ತಲುಪಿಸುವಂತಾಗಬೇಕು ಎಂದು ಸೂಚಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಸಮಿತಿ ಸದಸ್ಯ ಪರಮೇಶ್, ವಿಜಯಕುಮಾರ್, ಪುಟ್ಟಮ್ಮ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ತಾ.ಪಂ.ಇಒಗಳಾದ ಅಪ್ಪಣ್ಣ, ಪರಮೇಶ, ಪುರಸಭೆ ಮುಖ್ಯಾಧಿಕಾರಿಗಳಾದ ಗಿರೀಶ್, ನಾಚಪ್ಪ, ಸತೀಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.