Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ : ಯುವ ಜನತೆ ಉತ್ತಮ ಬದುಕು ಕಟ್ಟಿಕೊಳ್ಳಲು ಶ್ರೀನಾಥ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ : ಯುವ ಜನತೆ ಉತ್ತಮ ಬದುಕು ಕಟ್ಟಿಕೊಳ್ಳಲು ಶ್ರೀನಾಥ್ ಸಲಹೆ*

ಜೂನ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.25 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರ ರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನ ನಡೆಯಿತು. ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡೈರಿ ಫಾರಂನಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್, ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಸ್ಥಿತಿ, ಒತ್ತಡ ಹಾಗೂ ಉದಾಸೀನತೆಯಿಂದ ಹಲವು ರೋಗಗಳನ್ನು ಕಾಣುತ್ತೇವೆ. ಆದ್ದರಿಂದ ಬದುಕಿನ ಜೀವನ ಶೈಲಿಯನ್ನು ಬದಲಿಸಿಕೊಂಡು, ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು. ಹಿಂದೆ ಮನುಷ್ಯನ ಆಯಸ್ಸು 80 ರಿಂದ 100 ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಆಯಸ್ಸು ಕಡಿಮೆಯಾಗುತ್ತಿದೆ. ಆದ್ದರಿಂದ ಯಾವುದೇ ರೀತಿಯ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗಬಾರದು ಎಂದು ಹೇಳಿದರು. ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಡೆಂಗ್ಯೂ ಬಗ್ಗೆ ಯಾರೂ ಸಹ ಉದಾಸೀನ ಮಾಡಬಾರದು ಎಂದು ಶ್ರೀನಾಥ್ ಸಲಹೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಬೇಕು. ಆಟ ಪಾಠವು ಸಹ ಇರಬೇಕು. ಆದರೆ ಯಾವುದೇ ರೀತಿಯ ಚಟಕ್ಕೆ ಬಲಿಯಾಗಬಾರದು ಎಂದರು. ‘ಇತ್ತೀಚೆಗೆ ಐಪಿಎಲ್ ಪಂದ್ಯದಲ್ಲಿ ಗೆದ್ದ ಆರ್‍ಸಿಬಿ ತಂಡ ವಿಜಯೋತ್ಸವ ಸಂದರ್ಭ ಸ್ಮರಿಸಿಕೊಂಡರೆ ಯಾವ ರೀತಿಯ ಚಟಕ್ಕೆ ಬಲಿಯಾಗುತ್ತಾರೆ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ, ಆದ್ದರಿಂದ ಯಾವುದೇ ಒಂದು ಚಟಕ್ಕೆ ದಾಸರಾಗಬಾರದು. ಅವರವರ ಬದುಕು ಅವರಿಗೆ ಮುಖ್ಯ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಮೋಹನ್ ಕುಮಾರ್ ಅವರು ಒತ್ತಿ ಹೇಳಿದರು.’ ಪೊಲೀಸ್ ಇಲಾಖೆಯ ಸಿದ್ದಲಿಂಗಪ್ಪ ಅವರು ಮಾತನಾಡಿ ಮಾದಕ ವಸ್ತುಗಳಿಗೆ ತುತ್ತಾಗಬಾರದು. ಆ ನಿಟ್ಟಿನಲ್ಲಿ ಎಚ್ಚರವಹಿಸಬೇಕು. ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಜೀವನ ಕಳೆದುಕೊಳ್ಳಬೇಕಿದೆ. ಸುಸ್ಥಿರ ಬದುಕು ನಡೆಸುವತ್ತ  ಗಮನಹರಿಸಬೇಕು ಎಂದರು. ಎಎಸ್‍ಐ ಶಿವಾನಂದ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ನಿಲಯ ಮೇಲ್ವಿಚಾರಕರಾದ ಆನಂದ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.