Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಲು ಸಚಿವ ಭೋಸರಾಜು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಲು ಸಚಿವ ಭೋಸರಾಜು ಸೂಚನೆ*

ಜೂನ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ನಷ್ಟ ಸಂಭವಿಸಿದೆ. ಜಿಲ್ಲೆಯ ಮಳೆಹಾನಿ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದರು. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡಲಾಗುವುದು. ಮಳೆಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು ಎಂದು ಸಚಿವರು ಹೇಳಿದರು. ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ ಸಹ 100 ಕೋಟಿ ರೂ. ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ವಿವರಿಸಿದರು.  ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿ ಇತ್ತೀಚೆಗೆ ಉದ್ಘಾಟನೆಯಾದ ಪುರಸಭೆ ಕಟ್ಟಡವನ್ನು ವೀಕ್ಷಿಸಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾದರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.  ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು. ಸರ್ಕಾರಿ ಕಚೇರಿಗಳಲ್ಲಿ ಮರಣ ಪ್ರಮಾಣ ಪತ್ರ ನೀಡಲು ಒಂದು ತಿಂಗಳಿಗೂ ಹೆಚ್ಚು ಕಾಲ ತೆಗೆದುಕೊಳ್ಳುವುದು ಸರಿಯಲ್ಲ. ಇಂದಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಕುಶಾಲನಗರದ ಸೇತುವೆಗೆ ತೆರಳಿ ಕಾವೇರಿ ನೀರಿನ ಹರಿವು ಪ್ರಮಾಣ ವೀಕ್ಷಿಸಿದರು. ಬಳಿಕ ಕುಶಾಲನಗರದ ಚಂದ್ರಶೇಖರ ಅವರ ಮನೆಹಾನಿ ಪರಿಶೀಲಿಸಿದರು. ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ನಂತರ ರಂಗಸಮುದ್ರದ ಬಳಿ ಹಾನಿಗೀಡಾಗಿರುವ ಸೇತುವೆ ಪರಿಶೀಲಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.