
ಸುಂಟಿಕೊಪ್ಪ ಜೂ.27 NEWS DESK : ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಾಜಿ ಸೈನಿಕ ಕಂಡಕರೆ ನಿವಾಸಿ ಗಿರೀಶ್ (44) ಅವರ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿಂಧೂ ರಾಜನ್, ಸದಸ್ಯ ಸಿ.ಇ ತೀರ್ಥಕುಮಾರ್ ಇದ್ದರು.









