
ಮಡಿಕೇರಿ ಜೂ.27 NEWS DESK : ನಗರದ ಪೇಟೆ ಶ್ರೀ ರಾಮ ಮಂದಿರ ದಸರಾ ಸಮಿತಿಯ 2025ನೇ ಸಾಲಿನ ಅಧ್ಯಕ್ಷರಾಗಿ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಿತೇಶ್ ಭೋಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೋಕೇಟ್ ಸಚಿತ್, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್, ಖಜಾಂಚಿಯಾಗಿ ತೀರ್ಥ ಕುಮಾರ್ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಹೋಟೆಲ್ ಗೌರಿ ಸಭಾಂಗಣದಲ್ಲಿ ಸಮಿತಿ ಮಾಜಿ ಅಧ್ಯಕ್ಷ ಚೇತನ್ ಅಧ್ಯಕ್ಷತೆಯಲ್ಲಿ ಹಾಗೂ ಸದಸ್ಯರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.










