
ಮಡಿಕೇರಿ ಜೂ.27 NEWS DESK : ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 14 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನೀಡುವ ಪುರಸ್ಕಾರಕ್ಕೆ ಗೋಣಿಕೊಪ್ಪಲಿನ ಕಾಪ್ಸ್ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿ ಜಯಲಕ್ಷ್ಮಿ ಎಂ.ಬಿ ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಇವರಿಗೆ ಸೇವಾ ಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಜೂ.28 ರಂದು ಮೈಸೂರು ಕಲಾಮಂದಿರದ ಆವರಣದ ಕಿರು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.









