Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»‘ಕೆಂಬಟ್ಟಿ’ ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸಲು ಒತ್ತಾಯ : ಶಾಸಕರಿಗೆ ಮನವಿ ಸಲ್ಲಿಸಿದ ನಿಯೋಗ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಕೆಂಬಟ್ಟಿ’ ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸಲು ಒತ್ತಾಯ : ಶಾಸಕರಿಗೆ ಮನವಿ ಸಲ್ಲಿಸಿದ ನಿಯೋಗ

ಜೂನ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.28 : ಕೊಡಗಿನ ಮೂಲನಿವಾಸಿ ‘ಕೆಂಬಟ್ಟಿ’ ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡವ ಭಾಷಿಕ ಸಮುದಾಯಗಳ ಕೂಟದ ನಿಯೋಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿತು. ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರ ನೇತೃತ್ವದಲ್ಲಿ ಎ.ಎಸ್.ಪೊನ್ನಣ್ಣ ಅವರನ್ನು ಇಂದು ಭೇಟಿಯಾದ ‘ಕೆಂಬಟ್ಟಿ’ ಸಮುದಾಯದ ಪ್ರಮುಖರು ರಾಜ್ಯದ ಬೇರೆಲ್ಲೂ ಕಾಣದ ಕೊಡಗಿನ ಪ್ರಾಚೀನ “ಕೆಂಬಟ್ಟಿ” ಸಮುದಾಯವನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ನಮೂದಿಸಬೇಕು ಎಂದು ಕೋರಿದರು. ಪೂರ್ವಿಕರ ಮಾಹಿತಿಯಂತೆ ಹಾಗೂ ಬ್ರಿಟಿಷರ The Manual of coorg written by G.Richter and published in 1870ರ ಸಮೀಕ್ಷೆಯ ವರದಿಯನ್ವಯ ‘ಕೆಂಬಟ್ಟಿ’ ಸಮುದಾಯ ಅನಾದಿ ಕಾಲದಿಂದಲೂ ಕೊಡಗಿನಲ್ಲಿ ಜೀವಿಸಿಕೊಂಡು, ಕೊಡವ ಭಾಷಾ ಜನಪದ ಪದ್ಧತಿ ಪರಂಪರೆ ಮೈಗೂಡಿಸಿಕೊಂಡು ಬಂದಿರುವ ಮೂಲನಿವಾಸಿಗಳಾಗಿದ್ದಾರೆ. ಇವರನ್ನು ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಯಲ್ಲಿ ಸೇರಿಸಬೇಕೆನ್ನುವುದು ಹಲವು ದಿನಗಳ ಬೇಡಿಕೆಯಾಗಿದೆ. ಅಲ್ಲದೆ ಈ ಕುರಿತು ಜಿಲ್ಲಾಡಳಿತದ ಮೂಲಕ ಸರ್ಕಾರದ ಗಮನವನ್ನು ಕೂಡ ಸೆಳೆಯಲಾಗಿದೆ ಎಂದು ಡಾ.ಮೇಚಿರ ಸುಭಾಷ್ ನಾಣಯ್ಯ ವಿವರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಸಕ ಎ.ಎಸ್.ಪೊನ್ನಣ್ಣ ಅವರು ನಮ್ಮ ಬೇಡಿಕೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಈಗಾಗಲೇ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸರ್ಕಾರ ಸಮಿತಿಯನ್ನು ರಚಿಸಿದ್ದು, ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ನಾಗಮೋಹನ್ ದಾಸ್ ಅವರು ಸುದ್ದಿಗೋಷ್ಠಿಯಲ್ಲಿ ಕೊಡಗಿನ ಕೆಂಬಟ್ಟಿ ಸಮುದಾಯದ ಹೆಸರನ್ನು ಸ್ವತ: ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ ಶಾಸಕರು ನಾಗಮೋಹನ್ ದಾಸ್ ಅವರಿಗೆ ಖುದ್ದು ಕರೆ ಮಾಡಿ ವಿಚಾರಿಸಿದ ಸಂದರ್ಭ ಪರಿಶಿಷ್ಟ ಜಾತಿಯ ಆದಿಕರ್ನಾಟಕ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಕೇಂದ್ರ ಸಮಿತಿಗೆ ಶಿಫಾರಸ್ಸು ಮಾಡಿರುವುದಾಗಿ ಮಾಹಿತಿ ಲಭಿಸಿದೆ. ಇದರಿಂದ ‘ಕೆಂಬಟ್ಟಿ’ ಸಮುದಾಯದ ಬಹುಕಾಲದ ಬೇಡಿಕೆ ಈಡೇರುತ್ತದೆ ಎನ್ನುವ ವಿಶ್ವಾಸ ಮೂಡಿದೆ ಎಂದು ಡಾ.ಮೇಚಿರ ಸುಭಾಷ್ ನಾಣಯ್ಯ ತಿಳಿಸಿದರು. ನಿಯೋಗದಲ್ಲಿ ಬಿಲ್ಲರಿ ಕುಟ್ಟಡ ಪ್ರಭು ಐಯ್ಯಪ್ಪ, ಮೊಳ್ಳೆ ಕುಟ್ಟಡ ಭೋಜಮ್ಮ, ಚಟ್ಟ ಕುಟ್ಟಡ ಸುಬ್ಬಕ್ಕಿ ಮುತ್ತಪ್ಪ, ಬಾಳೆ ಕುಟ್ಟಡ ಉದಯ್ ಮಾದಪ್ಪ, ಕುವಲೆ ಕುಟ್ಟಡ ಗಿರೀಶ್, ಚವರೆ ಕುಟ್ಟಡ ಸುಬ್ರಮಣಿ, ಕೂಪರೆ ಕುಟ್ಟಡ ಸಾಗರ್ ಪೂವಣ್ಣ, ಜೋಕುಟ್ಟಡ ಸಂತೋಷ್, ಬಿದ್ದಣ ಕುಟ್ಟಡ ರೋಹಿಣಿ ಪುಷ್ಪ, ಉಮ್ಮಣ ಕುಟ್ಟಡ ಕಿಶೋರ್ ಪೂವಯ್ಯ, ಚವರೆ ಕುಟ್ಟಡ ನೀಲ, ಮೂಳೆ ಕುಟ್ಟಡ ದಿನೇಶ್ ಪೆಗ್ಗೋಲಿ, ಮುಂತಾದವರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.