Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪ್ರದಾನ*

ಜೂನ್ 29, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.29 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಒಂದೇ ಊರು ಮೂರು ಚೆಕ್ ಡ್ಯಾಂ” ವರದಿಗೆ ಅಣ್ಣೀರ ಹರೀಶ್ ಮಾದಪ್ಪ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ” ಕೊಡಗಿನ ಕ್ರೀಡಾಕಲಿಗಳಿಗೆ ಕಾಡುತ್ತಿರುವ ದೈಹಿಕ ಶಕ್ತಿ ಕೊರತೆ” ವರದಿಗೆ ಇಸ್ಮಾಯಿಲ್ ಕಂಡಕೆರೆ ಪಡೆದುಕೊಂಡಿದ್ದಾರೆ. ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಇಬ್ಬರು ಪಡೆದುಕೊಂಡಿದ್ದಾರೆ. ವಿಸ್ತಾರ ಚಾನಲ್ ನಲ್ಲಿ ಪ್ರಸಾರವಾಗಿರುವ” ಹಸಿರ ಮನಸಿರಿಗೆ ಚಂದದ ಹೊದಿಕೆ” ಸುದ್ದಿಯ ವೀಡಿಯೋಗ್ರಫಿಗೆ ಮನೋಜ್ ಆರ್.ಆರ್. ಪಡೆದುಕೊಂಡಿದ್ದಾರೆ. ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ದಟ್ಟ ಅರಣ್ಯದೊಳಗೆ ಜಲಲ ಜಲಲ ಜಲಧಾರೆ ವರದಿಯ ವೀಡಿಯೋಗ್ರಫಿಗೆ ಸಂತೋಷ್ ರೈ ಪಡೆದುಕೊಂಡಿದ್ದಾರೆ. ನಿವೃತ್ತ ವಾರ್ತಾಧಿಕಾರಿ ಪಾಳೆಯಂಡ ಪೊನ್ನಪ್ಪ ಅವರು ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ, ಆನೆಚೌಕೂರು ಗಡಿ-ಅಕ್ರಮ ಸಾಗಾಟಕ್ಕೆ ರಾಜಮಾರ್ಗ ವರದಿಗೆ ಹೆಚ್.ಕೆ.ಜಗದೀಶ್ ಪಡೆದುಕೊಂಡಿದ್ದಾರೆ. ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಪ್ರಜಾಸತ್ಯಾ ಪತ್ರಿಕೆಯಲ್ಲಿ ಪ್ರಕಟವಾದ ”ಹೊಟ್ಟೆಪಾಡಿಗಾಗಿ ಆನೆ-ಮಾನವ ಸಂಘರ್ಷ ವರದಿಗೆ ಹೆಚ್.ಇ.ರವಿ ಪಡೆದುಕೊಂಡಿದ್ದಾರೆ. ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯಾ ಪತ್ರಿಕೆಯಲ್ಲಿ ಪ್ರಕಟವಾದ ”ಹೈನುಗಾರಿಕೆಯಲ್ಲಿ ಯಶ ಕಂಡ ಸಹೋದರರು”ವರದಿಗೆ ಹೆಚ್.ಇ.ರವಿ ಪಡೆದುಕೊಂಡಿದ್ದಾರೆ. ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ರಜೆಯಲ್ಲಿ ಮೈದಳೆದ ಈಜುಕೊಳ”ವರದಿಗೆ ದಿನೇಶ್ ಮಾಲಂಬಿ ಪಡೆದುಕೊಂಡಿದ್ದಾರೆ. ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ”ಕೃಷಿಯಲ್ಲಿ ಸಹೋದರರ ಕಮಾಲ್”ವರದಿಗೆ ದಿನೇಶ್ ಮಾಲಂಬಿ ಪಡೆದುಕೊಂಡಿದ್ದಾರೆ. ಕೋವರ್‍ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಯನ್ನು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ”ರಾಸುಗಳಿಗೆ ಉರುಳು ಕಂಟಕ”ವರದಿಗೆ ಜಗದೀಶ್ ಜೋಡುಬೀಟಿ ಪಡೆದುಕೊಂಡಿದ್ದಾರೆ. ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ದ್ಯಾವಮ್ಮ ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಯನ್ನು ಟಿವಿ9 ನಲ್ಲಿ ಪ್ರಸಾರವಾದ ”ಟಿಂಬರ್ ಮಾಫಿಯಾ ಅರಣ್ಯಕ್ಕೆ ಕೊಳ್ಳಿ ”ವರದಿಗೆ ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡಿದ್ದಾರೆ. ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ರಿಪಬ್ಲಿಕ್ ಕನ್ನಡ ಚಾನಲ್ ನಲ್ಲಿ ಪ್ರಸಾರವಾದ ”ತಂದೆಗೆ ತಕ್ಕ ಮಗ ನಂದಾ ಕಾರ್ಯಪ್ಪ ವರದಿಗೆ” ಬಾಚರಣಿಯಂಡ ಅನುಕಾರ್ಯಪ್ಪ ಪಡೆದುಕೊಂಡಿದ್ದಾರೆ. ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿವಂಗತ ಟಿ.ಕೆ.ಸುಬ್ರಹ್ಮಣ್ಯ ಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ” ಅಮ್ಮಾ ನಿನ್ನ ಬಿಸಿ ಅಪ್ಪುಗೆಯಲ್ಲಿ”ವರದಿಗೆ ಶಿವರಾಜ್ ಪಡೆದುಕೊಂಡಿದ್ದಾರೆ. ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜಕೋಟೆರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ ಪ್ರಶಸ್ತಿಯನ್ನು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ಕಾರೆಕಂಡಿ ಹಾಡಿಯಲ್ಲಿ ಶತಾಯುಷಿಗಳು ವರದಿಗೆ ಜಗದೀಶ್ ಜೋಡುಬೀಟಿ ಪಡೆದುಕೊಂಡಿದ್ದಾರೆ. ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸುದ್ದಿ ಛಾಯಾ ಚಿತ್ರ ಪ್ರಶಸ್ತಿಯನ್ನು ಸ್ಟಾರ್ ಆಫ್ ಮೈಸೂರು ಪತ್ರಿಕೆಯಲ್ಲಿ ಪ್ರಕಟವಾದ ;ತಂಗ್‍ಕಾ ವರದಿಯ ಚಿತ್ರಕ್ಕೆ ಪಿ.ವಿ.ಅಕ್ಷಯ್ ಪಡೆದುಕೊಂಡಿದ್ದಾರೆ. ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಸಾಹಿತಿ ದಿವಂಗತ ಡಿ.ಕೃಷ್ಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕøತಿಕ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ;ಸಿನಿಮಾಗೀತೆಗೆ ಧ್ವನಿಯಾದ ಕೊಡಗಿನ ಕಾಡುಮಕ್ಕಳು; ವರದಿಗೆ ಹೆಚ್.ಜೆ,ರಾಕೇಶ್ ಪಡೆದುಕೊಂಡಿದ್ದಾರೆ. ಕೈಬುಲೀರ ಪಾವರ್ತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಸರಕಾರಗಳಿಗೆ ಕೇಳಿಸದಾಯಿತೇ ಕಾವೇರಿ ಕೂಗು ವರದಿಗೆ ಎಂ.ಎನ್.ಚಂದ್ರಮೋಹನ್ ಪಡೆದುಕೊಂಡಿದ್ದಾರೆ. ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಮೂರು ತಲೆಮಾರಿನ ದೇಶಿಯ ನಾಟಿ ಪದ್ದತಿ ವರದಿಗೆ ಕಿಶೋರ್ ಕುಮಾರ್ ಶೆಟ್ಟಿ ಪಡೆದುಕೊಂಡಿದ್ದಾರೆ. ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತಾದ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ದಕ್ಷಿಣ ಕೊಡಗಿನಲ್ಲಿ ತಪ್ಪದ ಹುಲಿ ಭೀತಿ ವರದಿಗೆ ಜಗದೀಶ್ ಜೋಡುಬೀಟಿ ಪಡೆದುಕೊಂಡಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಅನು ಕಾರ್ಯಪ್ಪ, ರಾಜ್ಯ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.