Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೌಡ್ಲುವಿನಲ್ಲಿ ವೈದ್ಯರ ದಿನಾಚರಣೆ : ಉತ್ತಮ ಆರೋಗ್ಯಕ್ಕೆ ಪರಿಸರ ಅಗತ್ಯ : ಸುಪರ್ಣ ಕೃಷ್ಣಾನಂದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೌಡ್ಲುವಿನಲ್ಲಿ ವೈದ್ಯರ ದಿನಾಚರಣೆ : ಉತ್ತಮ ಆರೋಗ್ಯಕ್ಕೆ ಪರಿಸರ ಅಗತ್ಯ : ಸುಪರ್ಣ ಕೃಷ್ಣಾನಂದ*

ಜುಲೈ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.2 NEWS DESK  : ತಾಯಿಯ ಗರ್ಭದಲ್ಲೇ ಮಕ್ಕಳ ಆರೋಗ್ಯ ಪ್ರಾರಂಭವಾಗಿರುತ್ತದೆ. ಮಕ್ಕಳ ಆರೋಗ್ಯದಲ್ಲಿ ಅವರು ಬೆಳೆಯುವ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಪರ್ಣ ಕೃಷ್ಣಾನಂದ ಹೇಳಿದರು. ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಚೌಡ್ಲು ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಹದಿಹರೆಯದಲ್ಲಿ ಮಾನಸಿಕ ಆರೋಗ್ಯದ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಬೆಳೆಯುತ್ತಿರುವ ಮಕ್ಕಳು ನೋಡಿ ಕಲಿಯುವುದೇ ಹೆಚ್ಚು. ಮನೆಯಲ್ಲಿ ಪೋಷಕರು, ಶಾಲಾ ಕಾಲೇಜಿನಲ್ಲಿ ಶಿಕ್ಷಕರನ್ನು ನೋಡಿ ಕಲಿಯುತ್ತಾರೆ. ಮಕ್ಕಳ ಬೆಳವಣಿಗೆಯಲ್ಲಿ ಇಬ್ಬರ ಪಾತ್ರ ಪ್ರಮುಖವಾದುದು ಎಂದು ಹೇಳಿದರು. ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವುದು, ಹಿರಿಯರು, ಪೋಷಕರು ಮತ್ತು ಶಿಕ್ಷಕರನ್ನು ಗೌರವಿಸುವುದು, ಅವರ ಮಾತು ಕೇಳುವುದು. ತಮ್ಮನ್ನು ತಾವು ಕಾಪಾಡಿಕೊಳ್ಳುವುದು, ಒಳ್ಳೆಯ ಅಲೋೀಚನೆ ಮಾಡುವುದು ಇಂತಹವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯವಂತರು ಎಂದು ಗುರುತಿಸಲಾಗುತ್ತದೆ ಎಂದು ಹೇಳಿದರು. ಕಾರಣವಿಲ್ಲದೆ ಚಿಂತೆ, ದು:ಖ ಪಡುವುದು, ಏಕಾಗ್ರತೆ ಕೊರತೆ, ಅವಶ್ಯಕವಿಲ್ಲದ ಕೋಪ, ಭಯಪಡುವುದು, ತಪ್ಪನ್ನು ಒಪ್ಪಿಕೊಳ್ಳದಿರುವುದು ಇವೆಲ್ಲಾ ಮಾನಸಿಕ ರೋಗದ ಲಕ್ಷಣಗಳು, ವಿದ್ಯಾರ್ಥಿಗಳಲ್ಲಿ ಇಂತಹ ಸಮಸ್ಯೆಗಳು ಕಂಡು ಬಂದಾಗ ಪೋಷಕರು ಮತ್ತು ಶಿಕ್ಷಕರು ಸೂಕ್ತ ತಜ್ಞ ವೈದ್ಯರನ್ನು ಭೇಟಿ ಮಾಡಿಸಿ, ಕೌನ್ಸಿಲಿಂಗ್ ಮಾಡಿಸಬೇಕು. ದೂರವಾಣಿ ಮೂಲಕ ಕರೆ ಮಾಡಿದರೆ ವೈದ್ಯರೇ ಶಾಲಾ ಕಾಲೇಜಿಗೆ ಬಂದು ಸೂಕ್ತ ಸಲಹೆಗಳನ್ನು ನೀಡುತ್ತಾರೆ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳಿಗೆ ಮೊಬೈಲ್ ವ್ಯಸನ ಒಳ್ಳೆಯದಲ್ಲ. ಕಲಿಕೆಗೆ ಅವಶ್ಯವಿದ್ದಷ್ಟು ಮಾತ್ರ ಬಳಕೆ ಮಾಡಿಕೊಳ್ಳಬೇಕು. 12 ರಿಂದ 18 ವರ್ಷದ ವಯಸ್ಸಿನಲ್ಲಿ ಶಾರೀರಿಕ, ಮಾನಸಿಕ ಬದಲಾವಣೆಗಳು ನಡೆಯುತ್ತಿವೆ. ಈ ಸಮಯದಲ್ಲಿ ಎಚ್ಚರಿಕೆ ಅಗತ್ಯವಿದೆ. ಪುರುಷರಿಂದ ಮಾನಸಿಕ ಕಿರುಕುಳ ಆದರೆ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದರೆ, ಅರೋಪಿಗಳ ವಿರುದ್ಧ ಪೋಕ್ಸೊ ಮೊಕದ್ದಮೆ ದಾಖಲಾಗುತ್ತದೆ. ವಿದ್ಯಾರ್ಥಿಗಳು ವೈಯುಕ್ತಿಕ ಸಮಸ್ಯೆಯಲ್ಲಿ ಸಿಲುಕಿಕೊಂಡಾಗ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಿದರೆ, ನಿಮ್ಮ ಸಮಸ್ಯೆಗೆ ಸೂಕ್ತ ಪರಿಹಾರ ತಿಳಿಸುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಇನ್ನರ್ ವ್ಹೀಲ್ ಕ್ಲಬ್‍ನ ನಿಯೋಜಿತ ಅಧ್ಯಕ್ಷೆ ತನ್ಮಯಿ ಪ್ರವೀಣ್, ನಿರ್ಗಮಿತ ಅಧ್ಯಕ್ಷ ಸಂಗೀತ ದಿನೇಶ್, ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಿಲ್‍ಡ್ರೆಡ್ ಗೋನ್ಸಾಲ್ವೆಸ್, ಕ್ಲಬ್‍ನ ಪದಾಧಿಕಾರಿಗಳಾದ ಸುಮಲತಾ ಪುರುಷೋತ್ತಮ್, ಲತಾ ಮಂಜು ಇದ್ದರು. ಉಪನ್ಯಾಸಕಿ ಚಂದ್ರಕಲಾ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.