
ನಾಪೋಕ್ಲು ಜು.5 NEWS DESK : ಪೆರಾಜೆ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಯಿತು. ಪೆರಾಜೆ ದೇವಸ್ಥಾನದ ಉಳ್ಳಾಕುಲ ಸ್ಥಾನದ ಪರಿಸರದಲ್ಲಿ ಸಾಗುವನಿ, ಮಹಾಗನಿ, ಬಿಲ್ವ ಪತ್ರೆ ಗಿಡ ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಆಡಳಿತ ಮುಖ್ಯಸ್ಥ ಜಿತೇಂದ್ರ ನಿಡ್ಯಮಲೆ, ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಪಂಚಾಯತ್ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.









