
ಮಡಿಕೇರಿ ಜು.2 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ಜುಲೈ, 03 ರಂದು ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ ಗೈಡ್ ಭವನ ಮ್ಯಾನ್ಸ್ ಕಾಂಪೌಂಡ್ ನಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್‍ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಘಟಕರು ತಿಳಿಸಿದ್ದಾರೆ.










