Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೀಸುವ ದೊಣ್ಣೆಯಿಂದ ತಪ್ಪಿಸಲು ರೈತರಿಂದ ಮುಚ್ಚಳಿಕೆ ಪತ್ರ ಪಡೆಯಲಾಗುತ್ತಿದೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೀಸುವ ದೊಣ್ಣೆಯಿಂದ ತಪ್ಪಿಸಲು ರೈತರಿಂದ ಮುಚ್ಚಳಿಕೆ ಪತ್ರ ಪಡೆಯಲಾಗುತ್ತಿದೆ

ಜುಲೈ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 NEWS DESK  : ರೈತರು ಕೃಷಿ ಸಾಲದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಹಕಾರ ಸಂಘಗಳು ಸಾಲ ನೀಡುವ ಸಂದರ್ಭ ಎರಡು ತಿಂಗಳುಗಳ ಒಳಗಾಗಿ ಪಹಣಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಾಗಿ ರೈತರಿಂದ ಮುಚ್ಚಳಿಕೆ ಬರೆಸಿಕೊಳ್ಳುತ್ತಿವೆ. ಇದು ಬೀಸುವ ದೊಣ್ಣೆಯಿಂದ ತಪ್ಪಿಸುವ ಪ್ರಯತ್ನವಾಗಿದೆಯೇ ಹೊರತು ಇದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗುವುದಿಲ್ಲ ಎಂದು ಮಾಲ್ದಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೇರಂಡ ನಂದಾ ಸುಬ್ಬಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಕೆಲವು ಸಂಘಟನೆಗಳು ಮಾಡಿರುವ ಆರೋಪದಂತೆ ಸಹಕಾರ ಸಂಘಗಳಿಂದ ರೈತರಿಗೆ ಸಾಲ ನೀಡುವ ಸಂದರ್ಭ ಅನ್ಯಾಯವಾಗುತ್ತಿಲ್ಲ. ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಮುಚ್ಚಳಿಕೆ ಪಡೆದು ಸಾಲ ನೀಡಲಾಗುತ್ತಿದೆ. ತನ್ನದೇ ಆದ ಇತಿಹಾಸವನ್ನು ಹೊಂದಿರುವ ಕೊಡಗಿನ ಸಹಕಾರ ಕ್ಷೇತ್ರದ ಕುರಿತು ಯಾರೂ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಬಾರದು ಎಂದರು. ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಕರ್ನಾಟಕ ಭೂಕಂದಾಯ ಕಾಯ್ದೆ 2013 ರಲ್ಲಿ ತಿದ್ದುಪಡಿಗೊಂಡು ರಾಷ್ಟ್ರಪತಿಯವರಿಂದ ಮಸೂದೆ ಅನುಮೋದನೆಗೊಂಡು ಜಾರಿಯಲ್ಲಿದ್ದರೂ ಕಂದಾಯ ಇಲಾಖೆ ಇದನ್ನು ವ್ಯವಸ್ಥಿತವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಇದರಿಂದ ಜಿಲ್ಲೆಯ ಭೂಹಿಡುವಳಿದಾರರು ವಿನಾಕಾರಣ ಕಿರುಕುಳ ಅನುಭವಿಸುತ್ತಿದ್ದಾರೆ. 2021ರಲ್ಲಿ ಸರ್ಕಾರ ಸುತ್ತೋಲೆಯೊಂದನ್ನು ನೀಡಿದ್ದು, ಜಿಲ್ಲೆ ಸೇರಿದಂತೆ ರಾಷ್ಟ್ರದಾದ್ಯಂತ ರೈತರು ಕೃಷಿ ಸಾಲ ಮತ್ತು ಸೌಲಭ್ಯಗಳನ್ನು ಪಡೆದುಕೊಳ್ಳಲು FRUITS ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಈ ನೋಂದಣಿಗೆ ತಮ್ಮ ಸಂಬಂಧಿಸಿದ ಪಹಣಿ ಪತ್ರಗಳಲ್ಲಿ ಹಿಡುವಳಿದಾರನ ಹೆಸರು ಏಕವ್ಯಕ್ತಿಯದ್ದೇ ಆಗಿರಬೇಕಾಗಿರುತ್ತದೆ. ಕಂದಾಯ ಇಲಾಖೆಯ ವೈಫಲ್ಯದಿಂದ ರೈತರಿಗೆ ಇದು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡು ಇದುವರೆಗೆ ಜಿಲ್ಲೆಯಲ್ಲಿನ ಸಹಕಾರ ಕ್ಷೇತ್ರ ಆದಷ್ಟು ರೈತರಿಗೆ ಸಹಾಯವಾಗುವಂತೆ ಪ್ರಯತ್ನಿಸಿರುವುದು ಬಹತೇಕ ಜನರಿಗೆ ತಿಳಿದಿರುವ ವಿಚಾರವಾಗಿದೆ. ಈ ಸಾಲಿನಲ್ಲಿ ಸಾಲ ನೀಡುವ ಸಂದರ್ಭ FRUITS ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳುವುದು ಹಾಗೂ ಈ ಬಗ್ಗೆ ಏಕವ್ಯಕ್ತಿಯ ಹೆಸರಿನಲ್ಲಿ ಪಹಣಿ ಪತ್ರ ಇರಬೇಕೆಂಬ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಡ್ಡಾಯಗೊಳಿಸಿವೆ.
ಇದನ್ನು ಮನಗಂಡು ಜಿಲ್ಲೆಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮೇಲೆ ಒತ್ತಡ ತಂದು ರೈತರು ಸೌಲಭ್ಯ ವಂಚಿತರಾಗಬಾರದೆಂಬ ದೃಷ್ಟಿಯಿಂದ ಎರಡು ತಿಂಗಳುಗಳ ಒಳಗಾಗಿ ತಮ್ಮ ಪಹಣಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಾಗಿ ಮುಚ್ಚಳಿಕೆ ಪಡೆದುಕೊಳ್ಳಲಾಗುತ್ತಿದೆ. ಅಲ್ಲದೆ ಕೃಷಿ ಸಾಲ ಪಡೆದುಕೊಳ್ಳಲು ನಮೂನೆ – 3 ರ ನೋಂದಣಿ ಮತ್ತು ಪ್ಲಾಂಟೇಶನ್ ಬೆಳೆಗಳಿಗೆ ಸರಳ ಅಡಮಾನ ಮಾಡಿಸಿಕೊಳ್ಳುವುದು ಕೂಡ ಕಡ್ಡಾಯವಾಗಿರುತ್ತದೆ. ಆದರೆ ಏಕವ್ಯಕ್ತಿಯ ಹೆಸರಿನಲ್ಲಿ ಪಹಣಿ ದಾಖಲೆ ಆಗದೇ ಈ ಸಮಸ್ಯೆ ಇನ್ನೂ ಕೂಡ ಮುಂದುವರೆಯುತ್ತಿದೆ. ಆದುದ್ದರಿಂದ ತಾತ್ಕಾಲಿಕವಾಗಿ ಮುಚ್ಚಳಿಕೆ ಬರೆಸಿಕೊಳ್ಳುವುದು ಅಗತ್ಯವಾಗಿದೆ. ನಮಗೆ ತಿಳಿದಂತೆ ಯಾವುದೇ ರೈತನಿಗೆ ಶೂನ್ಯ ಬಡ್ಡಿದರದ ಸಾಲ ನೀಡದೆ ಇರುವ ಪ್ರಕರಣಗಳು ಇಲ್ಲ. ಎಲ್ಲಾದರೂ ಇದ್ದಲ್ಲಿ ಸಂಬಂಧಿಸಿದ ರೈತರು ಅವಧಿಗೆ ಸರಿಯಾಗಿ ಸಾಲ ಮರುಪಾವತಿ ಮಾಡದೆ ಅಥವಾ ಒಬ್ಬನೆ ರೈತ ಒಂದಕ್ಕೂ ಹೆಚ್ಚು ಸಂಸ್ಥೆಗಳಿಂದ ಸಾಲ ಪಡೆದುಕೊಂಡಿರಬಹುದಾದ ಸಂದರ್ಭಗಳಲ್ಲಿ ಆಗಿರಬಹುದೇ ಹೊರತು ಬೇರೆ ಯಾವುದೇ ರೀತಿಯಲ್ಲಿ ಜಿಲ್ಲೆಯ ರೈತರಿಗೆ ಅನ್ಯಾಯವಾಗಿಲ್ಲ ಎಂದು ನಂದಾ ಸುಬ್ಬಯ್ಯ ಸ್ಪಷ್ಟಪಡಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಘಟನೆಗಳು ಸಂಪೂರ್ಣ ಮಾಹಿತಿಯನ್ನು ಹೊಂದದೆ ಶತಮಾನಕ್ಕೂ ಮೀರಿ ಇತಿಹಾಸ ಇರುವ ಕೊಡಗು ಜಿಲ್ಲೆಯ ಸಹಕಾರ ಚಳುವಳಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪವಾದ ಮಾಡುವುದು ಸರಿಯಲ್ಲ ಮತ್ತು ಇದನ್ನು ಮುಂದುವರಿಸಬಾರದು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಐನಂಡ ಲಾಲ ಅಯ್ಯಣ್ಣ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಅ.19: ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಭಾಗಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ…

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.