Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಕೃಷಿ ಸಾಲ ವಿತರಣೆಗೆ ಯಾವುದೇ ಸಮಸ್ಯೆಗಳಿಲ್ಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಕೃಷಿ ಸಾಲ ವಿತರಣೆಗೆ ಯಾವುದೇ ಸಮಸ್ಯೆಗಳಿಲ್ಲ*

ಜುಲೈ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.2 NEWS DESK : ಪ್ರಸಕ್ತ 2025-26ನೇ ಸಾಲಿನಲ್ಲಿ ಜಿಲ್ಲೆಯ ಕೃಷಿಕರಿಗೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಪತ್ತಿನ ಸಹಕಾರ ಸಂಘಗಳ ಮೂಲಕ ಕೃಷಿ ಸಾಲ ವಿತರಣೆಗೆ ಯಾವುದೇ ಸಮಸ್ಯೆಗಳು ಇಲ್ಲವೆಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಬಿ.ಬಾಂಡ್ ಗಣಪತಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020-21ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದ ಕೃಷಿ ಸಾಲದ ವಿತರಣೆಗಾಗಿ ರೈತರು ‘ಫ್ರ್ರೂಟ್ ತಂತ್ರಾಂಶ’ದ ಐಡಿಯನ್ನು ಪಡೆಯವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಸಂದರ್ಭ ಕೊಡಗಿನ ಜಮೀನುಗಳಲ್ಲಿನ ಜಂಟಿ, ಪೌತಿ ಖಾತೆ ಸೇರಿದಂತೆ ವಿವಿಧ ಭೂ ಹಿಡುವಳಿಗಳ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಬೆಳೆಗಾರರಿಗೆ ಸಾಲ ಸೌಲಭ್ಯವನ್ನು ಒದಗಿಸಿಕೊಂಡು ಬರಲಾಗುತ್ತಿದೆ ಎಂದರು. ಕಳೆದ 2024-25ನೇ ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಮೂಲಕ 39,390 ರೈತರಿಗೆ 1066.47 ಕೋಟಿ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಇದರಲ್ಲಿ ಜಿಲ್ಲೆಯ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 36,756 ರೈತರಿಗೆ 830.32 ಕೊಟಿ ಅಲ್ಪಾವಧಿ ಬೆಳೆ ಸಾಲವನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಶೂನ್ಯ ಬಡ್ಡಿ ದರದ ಸಾಲ ವಿತರಣೆಗೆ ಸಂಬಂಧಿಸಿದಂತೆ ಕಳೆದ 2024-25ನೇ ಸಾಲಿನಲ್ಲಿ ನಬಾರ್ಡ್‍ನಿಂದ 105.39ಕೋಟಿ ಮಾತ್ರ ಪುನರ್ಧನ ಬಿಡುಗಡೆಯಾಗಿದೆ. ಸಹಕಾರ ಸಂಘಗಳಿಗೆ ನೀಡುವ ಅಲ್ಪಾವಧಿ ಕೃಷಿ ಸಾಲಕ್ಕೆ ನಬಾರ್ಡ್‍ನಿಂದ ಈ ಹಿಂದೆ ಶೇ.60 ರಷ್ಟು ರಿಯಾಯಿತಿ ಬಡ್ಡಿದರದಲ್ಲಿ ಪುನರ್ಧನ ನೀಡುತ್ತಿದ್ದು, ಇದು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಕಳೆದ ಸಾಲಿಗೆ ಹೋಲಿಸಿದರೆ ಒಟ್ಟು ಕೃಷಿಸಾಲದ ಪೈಕಿ ಶೇ.12.69 ರಷ್ಟು ಮಾತ್ರ ಪುನರ್ಧನ ಬಿಡುಗಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಬಾರ್ಡ್ ಮತ್ತು ಅಪೆಕ್ಸ್ ಬ್ಯಾಂಕಿನ ಸ್ವಂತ ಬಂಡವಾಳದಿಂದ 363.58 ಕೋಟಿ ಮೊತ್ತವನ್ನು ಕೆಡಿಸಿಸಿ ಬ್ಯಾಂಕ್ ಸಾಲವಾಗಿ ಪಡೆದು ರೈತರಿಗೆ ಶೂನ್ಯ ಬಡ್ಡಿದರದ ಕೃಷಿ ಸಾಲವನ್ನು ವಿತರಿಸಲಾಗಿದೆ. ರೈತರ ಹಿತಕ್ಕೆ ಪೂರಕವಾಗಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದರು, ಸಾಲ ಸೌಲಭ್ಯದ ವಿಚಾರವಾಗಿ ಬ್ಯಾಂಕ್‍ನ ವಿರುದ್ಧದ ಆರೋಪಗಳನ್ನು ಖಂಡಿಸುವುದಾಗಿ ತಿಳಿಸಿದರು. ಪ್ರಸ್ತುತ ರೈತ ಬಾಂಧವರಿಗೆ ಎದುರಾಗಿರುವ ಸಮಸ್ಯೆಗಳಿಗೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಕಾರಣವಲ್ಲ. ಸ್ಥಳೀಯ ರೈತರು ಎದುರಿಸುತ್ತಿರುವ ಜಂಟಿ ಖಾತೆ, ಪೌತಿ ಖಾತೆ, ವಿವಿಧ ಟೆನ್ಯೂರ್‍ಗಳ ಸಮಸ್ಯೆಗಳ ಬಗೆಹರಿಕೆಗೆ ಸರ್ಕಾರ ಮುಂದಾಗಬೇಕು. ಕೊಡಗಿನಲ್ಲಿ ಕಂಡು ಬರುತ್ತಿರುವ ಈ ಸಮಸ್ಯೆಗಳ ಬಗೆಹರಿಕೆ ವಿಶೇಷ ಅಧಿಕಾರಿಯನ್ನು ನೇಮಿಸುವುದು ಸೂಕ್ತ ಎಂದರು. ಫ್ರೂಟ್ ಐಡಿಯನ್ನು ಪಡೆಯುವುದರೊಂದಿಗೆ, ಎಲ್ಲಾ ದಾಖಲೆಗಳ ನೋಂದಣಿಗೆ ಸರ್ಕಾರ ‘ಕಾವೇರಿ-2′ ತಂತ್ರಾಂಶವನ್ನು ಒದಗಿಸಿತ್ತು. ಆದರೆ, ಈ ತಂತ್ರಾಂಶದಲ್ಲಿ ವಾಣಿಜ್ಯ ಬೆಳೆ ಎನ್ನುವ ಕಾರಣಗಳ ಹಿನ್ನೆಲೆಯಲ್ಲಿ ‘ಕಾಫಿ’ ಬೆಳೆ ದಾಖಲಾಗುತ್ತಿಲ್ಲ. ಈ ಸಮಸ್ಯೆಗಳ ಬಗೆಹರಿಕೆಯ ಬಗ್ಗೆ ಬ್ಯಾಂಕ್ ಸರ್ಕಾರದೊಂದಿಗೆ ಅಗತ್ಯ ಪ್ರಯತ್ನಗಳನ್ನು ನಡೆಸಿದೆ. ಕೇಂದ್ರ್ರ ಸರ್ಕಾರ ಪ್ರತ್ಯೇಕವಾದ ಸಹಕಾರ ಸಚಿವಾಲಯವನ್ನು ರಚಿಸಿದೆ. ಈ ಸಚಿವಾಲಯವು ರಾಷ್ಟ್ರದ ವಿವಿಧ ರಾಜ್ಯಗಳಲ್ಲಿನ ಸಹಕಾರ ಸಂಘಗಳಲ್ಲಿ ನೀಡಲಾಗುತ್ತಿರುವ ಸಾಲ ಸೌಲಭ್ಯ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ‘ಏಕ ರೂಪದ ತಂತ್ರಜ್ಞಾನ’ ಅಳವಡಿಸಲು ಮುಂದಾಗಿದೆ. ಇದಕ್ಕಾಗಿ ಈಗಾಗಲೆ ಕರ್ನಾಟಕವನ್ನು ಒಳಗೊಂಡಂತೆ ಮತ್ತೆರಡು ರಾಜ್ಯಗಳನ್ನು ಒಳಗೊಂಡಂತೆ ಪೈಲಟ್ ಪ್ರಾಜೆಕ್ಟ್ ರೂಪಿಸಿ, ಇದರ ಅಳವಡಿಕೆಗೆ ಇದೇ 2025ರ ಡಿ.31 ನ್ನು ಅಂತಿಮ ದಿನಾಂಕವೆಂದು ಸೂಚಿಸಿದೆ. ಒಮ್ಮೆ ಈ ಏಕ ರೂಪದ ತಂತ್ರಜ್ಞಾನ ಅಳವಡಿಕೆಯಾದಲ್ಲಿ ಸಾಲ ಸೌಲಭ್ಯದ ವಿತರಣೆ, ಸಹಕಾರ ಸಂಘಗಳ ಆಡಿಟ್ ಎಲ್ಲವೂ ಆನ್ ಲೈನ್‍ನಲ್ಲಿ ನಡೆಯುತ್ತದೆ. ಆ ಸಂದರ್ಭ ಸಾಲ ಸೌಲಭ್ಯ ಹೊಂದಲು ಫ್ರೂಟ್ ತಂತ್ರಾಂಶ ಕಡ್ಡಾಯವಾಗುವುದಲ್ಲದೆ, ಸಿಂಗಲ್ ಆರ್‍ಟಿಸಿ, ಆಧಾರ್ ಸೇರಿದಂತೆ ಬೆಳೆಗಾರರು ಅಗತ್ಯ ದಾಖಲೆ ಒದಗಿಸಿ ಅದನ್ನು ತಂತ್ರಾಂಶದಲ್ಲಿ ಅಳವಡಿಸಿದರಷ್ಟೆ ಕೆಲಸ ಕಾರ್ಯ ನಡೆಯುತ್ತದೆ. ಆದರೆ, ಈ ಸಾಲಿನಲ್ಲಿ ಜಿಲ್ಲೆಯ ಬೆಳೆಗಾರರಿಗೆ ಸಾಲ ಸೌಲಭ್ಯ ವಿತರಿಸಲು ಯಾವುದೇ ಸಮಸ್ಯೆಗಳು ಇಲ್ಲವೆಂದು ಗಣಪತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರಗಳಾದ ಶರವಣ ಕುಶಾಲನಗರ, ಕಿಲನ್ ಗಣಪತಿ, ಹೆಚ್.ಕೆ.ಮಾದಪ್ಪ ಹಾಗೂ ಹೊಸೂರು ಸತೀಶ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.