
ಮಡಿಕೇರಿ ಜು.2 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿನಿ ಶೈಲಜಾ 9.55 ಸಿಜಿಪಿಎ ಅಂಕಗಳೊಂದಿಗೆ 2021-25ನೇ ಶೈಕ್ಷಣಿಕ ಸಾಲಿನ ವಿಟಿಯು ಇಂಜಿನಿಯರಿಂಗ್ ಪದವಿಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ರ‍್ಯಾಂಕ್ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಸವರಾಜ್ ಅವರ ಮುಂದಾಳತ್ವದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ.ರಾಮಕೃಷ್ಣ ಬಿ.ಬಿ ಹಾಗೂ ಅಧ್ಯಾಪಕರ ಸಮರ್ಥ ಮಾರ್ಗದರ್ಶನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ವಿದ್ಯಾರ್ಥಿನಿ ಶೈಲಜಾ ಅವರ ಈ ಸಾಧನೆಗೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ, ಉಪಾಧ್ಯಕ್ಷ ಕೆ.ಎಂ.ಚಿಣ್ಣಪ್ಪ, ಕಾರ್ಯದರ್ಶಿ ರಾಕೇಶ್ ಪೂವಯ್ಯ, ನಿರ್ದೇಶಕರುಗಳು, ಕಾಲೇಜಿನ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಕಾಲೇಜು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.










