
ಸೋಮವಾರಪೇಟೆ ಜು.3 NEWSDESK : ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಕಳೆದ 36 ವರ್ಷಗಳ ಕಾಲ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಿ.ಕೆ.ಗೋಪಾಲ್ ಅವರನ್ನು ತಾಲ್ಲೂಕು ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಇಒ ಪರಮೇಶ್‍ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಶ್ರೀನಿವಾಸ್, ರಾಕೇಶ್ ಸೇರಿದಂತೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.









