Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಂತೆಗಳಲ್ಲಿ ಅಸ್ಸಾಂ ಜನರ ಹೆಸರಿನಲ್ಲಿ ಅಪರಿಚಿತರಿಂದ ವ್ಯಾಪಾರ : ಗ್ರಾ.ಪಂ ಹಾಗೂ ಪೊಲೀಸರು ಎಚ್ಚೆತ್ತುಕೊಳ್ಳಲು ವಿರಾಜಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಸಂತೆಗಳಲ್ಲಿ ಅಸ್ಸಾಂ ಜನರ ಹೆಸರಿನಲ್ಲಿ ಅಪರಿಚಿತರಿಂದ ವ್ಯಾಪಾರ : ಗ್ರಾ.ಪಂ ಹಾಗೂ ಪೊಲೀಸರು ಎಚ್ಚೆತ್ತುಕೊಳ್ಳಲು ವಿರಾಜಪೇಟೆ ಬಿಜೆಪಿ ಒತ್ತಾಯ*

July 3, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯ ವಿವಿಧ ಗ್ರಾ.ಪಂ ವ್ಯಾಪ್ತಿಯ ಸಂತೆಗಳಲ್ಲಿ ಅಸ್ಸಾಂ ನವರು ಹಾಗೂ ಅಸ್ಸಾಂ ಜನರೆಂದು ಹೇಳಿಕೊಳ್ಳುತ್ತಿರುವ ಅಪರಿಚಿತರು ವ್ಯಾಪಾರ ಮಾಡುತ್ತಿದ್ದು, ಈ ಬೆಳವಣಿಗೆ ವಿರುದ್ಧ ಗ್ರಾ.ಪಂ ಗಳು ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರಂಭದಲ್ಲಿ ಕಾರ್ಮಿಕರ ಹೆಸರಿನಲ್ಲಿ ಕೊಡಗು ಜಿಲ್ಲೆಯನ್ನು ಪ್ರವೇಶಿಸಿದ ಅಸ್ಸಾಂ ನವರು ಎಂದು ಹೇಳಿಕೊಳ್ಳುತ್ತಿರುವ ಜನರು ಇಂದು ವ್ಯಾಪಾರಿಗಳಾಗಿ ಪರಿವರ್ತನೆಯಾಗುತ್ತಿದ್ದಾರೆ. ಮನೆಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಸಂತೆಗಳಲ್ಲಿ ಮಾರಾಟ ಮಾಡುತ್ತಿರುವ ಅಪರಿಚಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ಕೊಡಗಿನ ವ್ಯಾಪಾರ ಕ್ಷೇತ್ರದಲ್ಲಿ ಆತಂಕವನ್ನು ಮೂಡಿಸಿದ್ದು, ಗ್ರಾಹಕರು ಕೂಡ ಎಚ್ಚೆತ್ತುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಕಾರ್ಮಿಕರಾಗಿ ಬಂದವರು ವ್ಯಾಪಾರಿಗಳಾಗಿ ಪರಿವರ್ತನೆಯಾದ ಹಿಂದಿನ ಮರ್ಮವೇನು ಮತ್ತು ಇವರಿಗೆ ಹಣ ಹಾಗೂ ಸಾಮಾಗ್ರಿಗಳನ್ನು ನೀಡುತ್ತಿರುವವರು ಯಾರು ಎನ್ನುವ ವಿಚಾರ ಬಹಿರಂಗಗೊಳ್ಳಬೇಕಾಗಿದೆ. ಗ್ರಾ.ಪಂ, ಪೊಲೀಸ್ ಇಲಾಖೆ ಹಾಗೂ ಆಹಾರ ಇಲಾಖೆ ಈ ಬಗ್ಗೆ ಹೆಚ್ಚು ನಿಗಾ ವಹಿಸುವ ಅಗತ್ಯವಿದೆ. ಸ್ಥಳೀಯರೇ ಬಂಡವಾಳ ಹಾಕಿ ಅಸ್ಸಾಂ ಅಪರಿಚಿತರನ್ನು ಮಾರಾಟಗಾರರನ್ನಾಗಿ ನಿಯೋಜಿಸಿಕೊಂಡಿದ್ದರೆ ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳುವುದು ಸೂಕ್ತ. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಾರಿಗಳ ಸೋಗಿನ ಅಪರಿಚಿತರಿಂದ ಅಪಾಯ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಸ್ಸಾಂ ಜನರ ಹೆಸರಿನಲ್ಲಿ ಬಾಂಗ್ಲಾ ನುಸುಳುಕೋರರು ಕಾರ್ಮಿಕರ ರೂಪದಲ್ಲಿ ಕೊಡಗು ಜಿಲ್ಲೆಗೆ ಬಂದಿರುವ ಶಂಕೆ ಇದೆ. ವಲಸೆ ಕಾರ್ಮಿಕರು ಕಾಫಿನಾಡು ಕೊಡಗಿಗೆ ಅನಿವಾರ್ಯವಾಗಿರುವುದರಿಂದ ಬೆಳೆಗಾರರ ಹಿತ ಕಾಯಲು ಈಗಾಗಲೇ ಕಾರ್ಮಿಕರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗಳಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಬೆಳೆಗಾರರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಬಹುತೇಕ ಬೆಳೆಗಾರರು ವಲಸೆ ಕಾರ್ಮಿಕರು ಬಂದಾಗ ಅವರ ಮಾಹಿತಿಯನ್ನು ಪೊಲೀಸ್ ಠಾಣೆಗೆ ಒದಗಿಸುತ್ತಿದ್ದಾರೆ. ಆದರೆ ವ್ಯಾಪಾರಿಗಳ ರೂಪದಲ್ಲಿ ಸಂತೆಗಳನ್ನು ಆಕ್ರಮಿಸಿಕೊಳ್ಳುತ್ತಿರುವ ಅಪರಿಚಿತರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಂಡಿದೆ ಎನ್ನುವ ಬಗ್ಗೆ ಮಾಹಿತಿ ಬೇಕಾಗಿದೆ. ಯಾರೇ ವ್ಯಾಪಾರ ಮಾಡಿದರೂ ಗ್ರಾ.ಪಂ ಯಿಂದ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ. ಅಸ್ಸಾಂ ಜನರ ಹೆಸರಿನ ಅಪರಿಚಿತರು ಯಾರ ಅನುಮತಿ ಪಡೆದು ವ್ಯಾಪಾರ ಮಾಡುತ್ತಿದ್ದಾರೆ ಎನ್ನುವ ಬಗ್ಗೆಯೂ ಸ್ಪಷ್ಟನೆ ಬೇಕಾಗುತ್ತದೆ. ಪರವಾನಗಿ ನೀಡುವ ಸಂದರ್ಭ ವ್ಯಾಪಾರ ಮಾಡುವವರ ಆಧಾರ್ ಕಾರ್ಡ್, ವಾಸ ದೃಢೀಕರಣ ಪತ್ರ, ಸ್ವಂತ ಊರಿನ ಮೂಲದ ಕುರಿತು ದಾಖಲೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನೊಳಗೊಂಡ ದಾಖಲೆಗಳ ಪ್ರತಿಯನ್ನು ಗ್ರಾ.ಪಂ ಗಳು ಪಡೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಗ್ರಾ.ಪಂ ಗಳಿಗೆ ಜಿಲ್ಲಾಡಳಿತ ಹಾಗೂ ಜಿ.ಪಂ ಸ್ಪಷ್ಟ ನಿರ್ದೇಶನವನ್ನು ನೀಡಬೇಕು. ಇದೀಗ ಜಿಲ್ಲೆಯ ವಿವಿಧೆಡೆ ವ್ಯಾಪಾರ ನಡೆಸುತ್ತಿರುವ ಅಸ್ಸಾಂ ಜನರು ಹಾಗೂ ಅಸ್ಸಾಂ ನವರೆಂದು ಹೇಳಿಕೊಳ್ಳುತ್ತಿರುವ ಅಪರಿಚಿತರ ಕುರಿತು ಗ್ರಾ.ಪಂ ಗಳು ಪೊಲೀಸರ ಸಹಕಾರ ಪಡೆದು ಮಾಹಿತಿ ಸಂಗ್ರಹಿಸಬೇಕು ಮತ್ತು ದಾಖಲೆಗಳನ್ನು ಪರಿಶೀಲಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಯಾವುದೇ ದಾಖಲೆಗಳ ಆಧಾರವಿಲ್ಲದೆ ಗ್ರಾಮಗಳಿಗೆ ಬಂದ ಅಪರಿಚಿತರಿಗೆಲ್ಲ ಸಂತೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಿದರೆ ಮುಂದೊಂದು ದಿನ ಕೊಡಗು ಜಿಲ್ಲೆಗೆ ತಿರುಗುಬಾಣವಾಗುವ ಸಾಧ್ಯತೆಗಳಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಶೈಕ್ಷಣಿಕ ನೆರವು : ವಿದ್ಯಾರ್ಥಿಗಳಿಂದ ಅರ್ಜಿಗಳ ಆಹ್ವಾನ*
Next Article *ಕೊಡಗಿನಲ್ಲಿ ಭಾರೀ ಮಳೆ : ಪೊಲೀಸ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರ ಸಭೆ*

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.