Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ.ಬಿಡುಗಡೆ : ಪಿಜಿಆರ್ ಸಿಂಧ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ.ಬಿಡುಗಡೆ : ಪಿಜಿಆರ್ ಸಿಂಧ್ಯ*

ಜುಲೈ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.3 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ತಿಳಿಸಿದ್ದಾರೆ. ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದ ಸಭಾಂಗಣದಲ್ಲಿ ನಡೆದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಭಿವೃದ್ಧಿಗಾಗಿ ಅಗತ್ಯ ಸಹಕಾರ ನೀಡುತ್ತಿದ್ದು, ಆ ನಿಟ್ಟಿನಲ್ಲಿ ಇದನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸ್ಥಳೀಯ ಸಂಘಟನೆಗಳಿಗೂ ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಖರ್ಚು ವೆಚ್ಚದ ಸಮಗ್ರ ದಾಖಲೆ ಒದಗಿಸುವಂತಾಗಬೇಕು ಎಂದು ಪಿಜಿಆರ್ ಸಿಂಧ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು 1918 ರಲ್ಲಿಯೇ ಆರಂಭವಾಗಿದೆ. ಎಲ್ಲರ ಸಹಕಾರದಿಂದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ ಎಂದರು. ಜಿಲ್ಲಾಡಳಿತ ಸಹ ಸಂಪೂರ್ಣ ಸಹಕಾರ ನೀಡುತ್ತಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಭವನ ನಿರ್ಮಾಣಕ್ಕೆ ನಿರಾಪೇಕ್ಷಣಾ ಪತ್ರ ಸಹ ನೀಡಿದೆ ಎಂದು ಶ್ಲಾಘಿಸಿದರು. ಸಮಾಜ ಸೇವೆಗೆ ಮತ್ತೊಂದು ಹೆಸರೇ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಂದರೆ ತಪ್ಪಾಗಲಾರದು. ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ, ಪರಿಸರ ದಿನಾಚರಣೆ, ಯೋಗ ದಿನಾಚರಣೆ, ಮಹಾತ್ಮ ಗಾಂಧಿ ಜಯಂತಿ, ಬೇಸಿಗೆ ಶಿಬಿರಗಳು, ಮಕ್ಕಳ ಮೇಳ ಹೀಗೆ ವಿವಿಧ ಕಾರ್ಯಕ್ರಮಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುವುದರ ಮೂಲಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ತೊಡಗಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಮತ್ತಷ್ಟು ಹೆಚ್ಚಿಸುವಂತಾಗಬೇಕು. ಜೊತೆಗೆ ಶಿಕ್ಷಕರು ಸಹ ಸಹಕಾರ ನೀಡುವಂತಾಗಬೇಕು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಬಿಡುಗಡೆ ಆಗಲಿದೆ. ಆ ನಿಟ್ಟಿನಲ್ಲಿ ಹುರುಪಿನಿಂದ ವಿವಿಧ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಆದಿವಾಸಿ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸಂಬಂಧ ಜಾಗೃತಿ ಮೂಡಿಸಲಾಗುತ್ತದೆ ಎಂದರು. ಸಂಸ್ಥೆಯ ಸಹ ಆಯುಕ್ತ ಬಸವರಾಜ್ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮನೆ ಮನೆ ತಲುಪಬೇಕು. ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಹೊಸ ಹೊಸ ಘಟಕಗಳು ಆರಂಭವಾಗಬೇಕು ಎಂದು ಸಲಹೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜ ಮುಖಿಯಾಗಿ ಬೆಳೆಯಲು ಸಾಧ್ಯ. ಜೊತೆಗೆ ವಿದ್ಯಾರ್ಥಿಗಳು ಹಸನ್ಮುಖಿಯಾಗಿ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿದೆ ಎಂದರು. ರಾಜ್ಯ ಸಂಘಟಕರಾದ ಪ್ರಭಾಕರ ಭಟ್ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು. ಪರಿಸರ ದೀಪಾವಳಿ, ವನಮಹೋತ್ಸವ, ಮಳೆ ಕೊಯ್ಲು ಹೀಗೆ ವಿವಿಧ ಚಟುವಟಿಕೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ತೊಡಗಿಸಿಕೊಂಡು ರಾಷ್ಟ್ರಮಟ್ಟದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಟಿ.ಜಿ.ಪ್ರೇಮ್ ಕುಮಾರ್ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಬಾಲಕರು ಮತ್ತು ಬಾಲಕಿಯರಿಗಾಗಿ ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವ ಶೈಕ್ಷಣಿಕ ಆಂದೋಲನವಾಗಿದ್ದು, ಜಾತಿ, ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಬದುಕುವ ಹಾಗೂ ಸಹಬಾಳ್ವೆ ಜೀವನ ನಡೆಸುವ ಚಳುವಳಿಯಾಗಿ ರೂಪುಗೊಂಡಿದೆ. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯು ಮಕ್ಕಳಿಗೆ ಸಮನ್ವಯದ ಬದುಕು ಕಲಿಸುತ್ತದೆ ಎಂದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜ್ಯೋತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಜಿಲ್ಲಾ ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‍ಓ) ಟಿ.ಜಿ.ಪ್ರೇಮಕುಮಾರ್, ತರಬೇತಿ ಆಯುಕ್ತರಾದ ಮೈಥಿಲಿರಾವ್, ಕೆ.ಯು.ರಂಜಿತ, ಪಿ.ಎಚ್.ಅಲೀಮ, ವಿವಿಧ ಸ್ಥಳೀಯ ಸಂಸ್ಥೆಯ ಅಧ್ಯಕ್ಷರುಗಳಾದ ಎಸ್.ಡಿ.ವಿಜೇತ( ಸೋಮವಾರಪೇಟೆ), ಹರಿಣಿ ವಿಜಯ್ (ಮಡಿಕೇರಿ), ಕಾಳಿಮಾಡ ಮೋಟಯ್ಯ( ಪೊನ್ನಂಪೇಟೆ), ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಕುಶಾಲನಗರ ಸಂಸ್ಥೆಯ ಉಪಾಧ್ಯಕ್ಷ ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಂಪಾಜೆ ಸಂಸ್ಥೆಯ ಉಪಾಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಉಷಾರಾಣಿ, ಸೋಮವಾರಪೇಟೆ ಸಂಸ್ಥೆಯ ಕಾರ್ಯದರ್ಶಿ ಜ್ಯೋತಿ, ಸೇರಿದಂತೆ ಸಂಸ್ಥೆಯ ವಿವಿಧ ಘಟಕಗಳ ಪದಾಧಿಕಾರಿಗಳು, ರೋವರ್ಸ್ ವಿದ್ಯಾರ್ಥಿಗಳು ಇದ್ದರು.ಕೆ.ಯು.ರಂಜಿತ್ ನಿರ್ವಹಿಸಿದರು. ಕಾರ್ಯದರ್ಶಿ ಎಂ.ಎಂ.ವಸಂತಿ ವಂದಿಸಿದರು. ಇದೇ ವೇಳೆ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಸೇರಿದಂತೆ ವಿವಿಧ ಪ್ರಶಸ್ತಿ ಪಡೆದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.