Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಮತ್ತೆ ಮುಂಗಾರು ಚುರುಕು : ರೆಡ್ ಅಲರ್ಟ್ ಘೋಷಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ ಮತ್ತೆ ಮುಂಗಾರು ಚುರುಕು : ರೆಡ್ ಅಲರ್ಟ್ ಘೋಷಣೆ

ಜುಲೈ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಗಾಳಿ ಮಳೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬುಧವಾರ ರಾತ್ರಿಯಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ದಾಖಲೆಯ 6 ಇಂಚು ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 49.44 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1486.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 893.60 ಮಿ.ಮೀ ಮಳೆಯಾಗಿತ್ತು. ನದಿ ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮರಗಳು ಬಿದ್ದು ವಿದ್ಯುತ್ ಮಾರ್ಗಗಳಿಗೆ ಹಾನಿಯಾಗಿದೆ. ರಸ್ತೆಗಳು ಹದಗೆಟ್ಟು ಕೆಸರುಮಯವಾಗಿದ್ದು, ವಾಹನ ಸಂಚಾರ ಕಷ್ಟಸಾಧ್ಯವಾಗಿದೆ. ಮಡಿಕೇರಿ ನಗರದಲ್ಲಿ ಕೊಡವ ಮಂದ್ ನಲ್ಲಿದ್ದ ಸುಮಾರು 200 ವರ್ಷಗಳಷ್ಟು ಹಳೆಯದಾದ ಬೃಹತ್ ಮರವೊಂದು ಗಾಳಿ ಮಳೆಗೆ ಬಿದ್ದು ಹೋಗಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವುದರಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿರುವ ಪೊಲೀಸ್ ಅಧಿಕಾರಿಗಳು ಅನಿವಾರ್ಯ ಸಂದರ್ಭಗಳಲ್ಲಿ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಎನ್‍ಡಿಆರ್‍ಎಫ್ ತಂಡ ಹಾಗೂ ಅಗ್ನಿ ಶಾಮಕ ದಳ ಸನ್ನದ್ಧವಾಗಿದೆ.
*ಮಳೆ ವಿವರ* ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ಮಳೆ 60.30 ಮಿ.ಮೀ. ಕಳೆದ ವರ್ಷ ಇದೇ ದಿನ 18.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2114.19 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1278.54 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1476.15 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 931.95 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 24.46 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1449.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 897.24 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 25.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1597.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 712.46 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 796.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 647.80 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 53.50, ನಾಪೋಕ್ಲು 52.20, ಸಂಪಾಜೆ 57.50, ಭಾಗಮಂಡಲ 78, ವಿರಾಜಪೇಟೆ 59, ಅಮ್ಮತ್ತಿ 46.50, ಹುದಿಕೇರಿ 50.80, ಶ್ರೀಮಂಗಲ 43.60, ಪೊನ್ನಂಪೇಟೆ 27, ಬಾಳೆಲೆ 18.90, ಸೋಮವಾರಪೇಟೆ 82.60, ಶನಿವಾರಸಂತೆ 61, ಶಾಂತಳ್ಳಿ 140, ಕೊಡ್ಲಿಪೇಟೆ 34.80, ಕುಶಾಲನಗರ 10, ಸುಂಟಿಕೊಪ್ಪ 30 ಮಿ.ಮೀ.ಮಳೆಯಾಗಿದೆ. *ಹಾರಂಗಿ ನೀರಿನ ಮಟ್ಟ* ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.98 ಅಡಿಗಳು. ಕಳೆದ ವರ್ಷ ಇದೇ ದಿನ 2842.27 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 16.20 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ., ಇಂದಿನ ನೀರಿನ ಒಳಹರಿವು 7582 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1649 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 6604 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.19 : ಪವಿತ್ರ ಕಾವೇರಿ ತೀರ್ಥೋದ್ಭವದ ಮರುದಿನವಾದ ಭಾನುವಾರ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್…

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026

ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

ಅಕ್ಟೋಬರ್ 19, 2026

ಮಡಿಕೇರಿ ದಸರಾ : ಮದ್ಯ ಮಾರಾಟ ನಿಷೇಧ

ಅಕ್ಟೋಬರ್ 19, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ: ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 19, 2026

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.