Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿವಿಯಲ್ಲಿ ಫ.ಗು.ಹಳಕಟ್ಟಿ ಜನ್ಮದಿನಾಚರಣೆ : ವಚನಗಳ ತಾಡೋಲೆಗಳಿಂದ ಕನ್ನಡ ನಾಡು ಕೈಲಾಸ : ಡಾ.ಸಿ.ಸೋಮಶೇಖರ್ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿವಿಯಲ್ಲಿ ಫ.ಗು.ಹಳಕಟ್ಟಿ ಜನ್ಮದಿನಾಚರಣೆ : ವಚನಗಳ ತಾಡೋಲೆಗಳಿಂದ ಕನ್ನಡ ನಾಡು ಕೈಲಾಸ : ಡಾ.ಸಿ.ಸೋಮಶೇಖರ್ ಬಣ್ಣನೆ*

ಜುಲೈ 4, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.4 NEWS DESK : ವಚನ ಸಾಹಿತ್ಯವನ್ನು ಶೋಧಿಸಿ, ಸಂರಕ್ಷಿಸಿ, ಅಚ್ಚುಹಾಕಿಸಿ ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಕನ್ನಡ ನಾಡನ್ನು ಕೈಲಾಸ ಮಾಡಿದ ಕೀರ್ತಿ ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್ ಹೇಳಿದರು.  ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ವಿವಿ ವತಿಯಿಂದ ಚಿಕ್ಕ ಅಳುವಾರದ ವಿವಿಯ ಕಾವೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಪಿತಾಮಹ, ಸಚೇತನ ವಿಶ್ವವಿದ್ಯಾಲಯ, ವಚನ ಗುಮ್ಮಟ ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಯುಜನಾಂಗ ಹಾಗೂ ಎಲ್ಲರೂ ವಚನ ಸಾಹಿತ್ಯವನ್ನು ಅಧ್ಯಯನ ಮಾಡುವ ಮೂಲಕ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು. ಅಂತಹ ವಚನ ಸಾಹಿತ್ಯವನ್ನು ಸಂರಕ್ಷಿಸಿದವರು ಫ.ಗು. ಹಳಕಟ್ಟಿ. ತಾಳೆ ಗರಿಯಲ್ಲಿದ್ದ ವಚನದ ಕಟ್ಟುಗಳನ್ನು ಸಂಗ್ರಹಿಸಲು ಅಪಾರ ಶ್ರಮಿಸಿದ ಇವರು, ಶಾಲೆಗಳು ಹಾಗೂ ಸಹಕಾರಿ ಸಂಘಗಳನ್ನು ತೆರೆದು ಅಪಾರ ಮಂದಿ ಕನ್ನಡಿಗರಿಗೆ ಹೊಸ ಬದುಕು ಕೊಟ್ಟ ಅಪ್ಪಟ ಕನ್ನಡಿಗ. ಇಂತಹ ಆದರ್ಶ ವ್ಯಕ್ತಿಗಳ ಜೀವನ ದರ್ಶನ ಇಂದಿನ ಯುವಕರಿಗೆ ಮಾದರಿಯಾಗಬೇಕು. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಬದುಕಿಗೆ ತಮ್ಮ ಬದುಕನ್ನೇ ಧಾರೆಯೆರೆದ ಹಳಕಟ್ಟಿ ಇಲ್ಲದಿದ್ದರೆ ವಚನ ಸಾಹಿತ್ಯ ತನ್ನ ಹೊಳಪು ಕಳೆದುಕೊಳ್ಳುತ್ತಿತ್ತು. ಬಸವಾದಿ ಶರಣರು ಹನ್ನೆರಡನೇ ಶತಮಾನದಲ್ಲಿ ನಡೆಸಿದ ಸಾಮಾಜಿಕ, ಧಾರ್ಮಿಕ, ನೈತಿಕ ಕ್ರಾಂತಿ ವಿಶ್ವಕ್ಕೆ ಜೀವನದ ಸಂವಿಧಾನವನ್ನು ಕೊಟ್ಟಿತು ಎಂದು ಡಾ.ಸೋಮಶೇಖರ್ ಹೇಳಿದರು. ಮುಖ್ಯ ಅತಿಥಿ ಹಾಸನ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಸಿ.ತಾರಾನಾಥ್ ಮಾತನಾಡಿ, ಫ.ಗು.ಹಳಕಟ್ಟಿಯವರ ಸಮಗ್ರ ಜೀವನ ಕೇವಲ ವಚನ ಸಾಹಿತ್ಯವಲ್ಲ. ನಾಡಿನ ಶ್ರೇಷ್ಠ ಕವಿ ಚೆನ್ನವೀರಕಣವಿ ಅವರು ಬರೆದಂತೆ ಅವರ ಸತ್ಕಾರ್ಯಗಳು ಸಮಾಜದ ಎಲ್ಲಾ ಕ್ಷೇತ್ರಗಳಿಗೂ ವಿಸ್ತರಿಸಿತ್ತು. ಫ.ಗು.ಹಳಕಟ್ಟಿ ಅವರ ಕಾಯ, ಕರ್ಮ,ತೊಡುಗೆ ಸಮನ್ವಯವಾಗಿತ್ತು. ಅನುಭವ ಹಾಗೂ ಅನುಭಾವದಿಂದ ಕೂಡಿತ್ತು.
ವಚನಗಳಲ್ಲಿ ಇರುವ ವೈಜ್ಞಾನಿಕತೆ, ಧಾರ್ಮಿಕತೆ, ಸ್ತ್ರೀ ಸ್ವಾತಂತ್ರ್ಯ ಸೇರಿದಂತೆ ಜೀವನ ಸಂವಿಧಾನವನ್ನು ಅಧ್ಯಯನ ಮಾಡದ ನಾವುಗಳು ಇಂದು ಮೊಬೈಲ್ ಗಳು ಹಾಗೂ ಸಾಮಾಜಿಕ ಜಾಲತಾಣಗಳ ಹಿಂದೆ ಬಿದ್ದಿರುವುದು ವಿಪರ್ಯಾಸ ಎಂದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಮಾತನಾಡಿ, ಹನ್ನೆರಡನೇ ಶತಮಾನದ ಕಲ್ಯಾಣದಲ್ಲಿ ನಡೆದ ಕ್ರಾಂತಿಯಿಂದಾಗಿ ಹಾಳಾಗಿದ್ದ ವಚನಗಳ ತಾಡೋಲೆಗಳನ್ನು ಸಂಗ್ರಹಿಸಿ, ಸಂಶೋಧಿಸಿ,ಅಚ್ಚು ಹಾಕಿಸಿ ಲಕ್ಷಾಂತರ ವಚನಗಳನ್ನು ಜನಮಾನಸಕ್ಕೆ ತಲುಪಿಸಲು ಫ.ಗು.ಹಳಕಟ್ಟಿ ಈ ಶತಮಾನ ಕಂಡ ಶ್ರೇಷ್ಟ ದಾರ್ಶನಿಕ ಸಂತ. ಕನ್ನಡ ನಾಡಿನ ಶ್ರೇಷ್ಠ ಕವಿ ಬಿ.ಎಂ.ಶ್ರೀಕಂಠಯ್ಯ ಬಿಜಾಪುರಕ್ಕೆ ಭೇಟಿ ಕೊಟ್ಟಾಗ ಗೋಳಗುಮ್ಮಟಕ್ಕಿಂತ ವಚನ ಗುಮ್ಮಟವಾದ ಫ.ಗು.ಹಳಕಟ್ಟಿಯವರ ಮನೆಯನ್ನು ನೋಡಲು ಕೌತುಕದಿಂದ ತೆರಳಿದ್ದರು. ಸ್ವಂತ ಮನೆಯೂ ಕೂಡ ಇಲ್ಲದ, ಸೈಕಲ್ ನಲ್ಲಿ ಊರೂರು ಅಲೆದು ವಚನಗಳ ತಾಡೋಲೆಗಳನ್ನು ಸಂಗ್ರಹಿಸಿದ್ದರಿಂದ ಇಂದು ನಾವು ಸಹಸ್ರಾರು ವಚನಗಳನ್ನು ನೋಡಲು, ಅಭ್ಯಸಿಸಲು ಸಾಧ್ಯವಾಗಿದೆ. ಕೇವಲ ವಚನ ಸಾಹಿತ್ಯವಷ್ಟೇ ಅಲ್ಲದೆ ಕನ್ನಡ ನಾಡು, ನುಡಿ, ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಂಡ ಹಳಕಟ್ಟಿಯವರು ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಒಡನಾಡಿಯಾಗಿ ನಾಡು ನುಡಿಗೆ ತಮ್ಮ ಇಡೀ ಜೀವನವನ್ನು ಸಮರ್ಪಿಸಿಕೊಂಡ ಶ್ರೇಷ್ಠ ಚೇತನ ಎಂದು ಕುಲಪತಿ ಡಾ.ಅಶೋಕ್ ಆಲೂರ ಬಣ್ಣಿಸಿದರು. ಅಮೇರಿಕಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ ಬಸವೇಶ್ವರರ ಬಗ್ಗೆ ಮಾತನಾಡಿದಾಗ ಬಸವಣ್ಣ ಕರ್ನಾಟಕದಲ್ಲಿ ಅಲ್ಲದೇ ಅಮೇರಿಕಾದಲ್ಲಿ ಜನಿಸಿದ್ದರೆ ಇಡೀ ಅಮೇರಿಕಾ ಬಸವ ಮಯವಾಗುತ್ತಿತ್ತು ಎಂದದ್ದನ್ನು ಡಾ.ಅಶೋಕ್ ಮಾರ್ಮಿಕವಾಗಿ ನುಡಿದು, ಬಸವಣ್ಣನ ವಿಚಾರಧಾರೆಗಳನ್ನು ಅರಿಯಲು ಕರೆಕೊಟ್ಟರು. ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಶರಣರ ವಿಚಾರಧಾರೆಗಳು ಸರ್ವಕಾಲಕ್ಕೂ ಅತೀತವಾದುದು. ಅಳಿಯುತ್ತಿದ್ದ ವಚನ ಸಾಹಿತ್ಯವನ್ನು ಉಳಿಸುವಲ್ಲಿ ಹಳಕಟ್ಟಿಯವರು ಶ್ರಮಿಸಿದ್ದರಿಂದಲೇ ಈ ಸಾಹಿತ್ಯವನ್ನು ಉಳಿಸಿ ಬೆಳೆಸಿ ಜನಮಾನಸದಲ್ಲಿ ಜಾಗೃತಗೊಳಿಸುವ ನಿಟ್ಟಿನಲ್ಲಿ ಸುತ್ತೂರು ಜಗದ್ಗುರು ಡಾ.ಶ್ರೀ ರಾಜೇಂದ್ರ ಸ್ವಾಮೀಜಿ ಯವರು ಶರಣ ಸಾಹಿತ್ಯ ಪರಿಷತ್ತು ರಚಿಸಿ ನಾಡಿನಾದ್ಯಂತ ಇಂತಹ ಮೌಲಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಹಾಗಾಗಿ ಎಲ್ಲರೂ ಬಸವಾದಿ ಶರಣರು ಸಾರಿದ ” ಇವನಾರವ ಎನ್ನದೇ ಇವ ನಮ್ಮವ ” ಎಂದು ಎಲ್ಲರನ್ನೂ ಅಪ್ಪಿದ ಆಧ್ಯಾತ್ಮಿಕ ಚಿಂತನೆಯ ಸಾಹಿತ್ಯವೇ ವಚನ ಸಾಹಿತ್ಯ ಎಂದು ಶ್ರೀಗಳು ವಿಶ್ಲೇಷಿಸಿದರು. ವಿವಿ ಕುಲಸಚಿವರಾದ ಸುರೇಶ್ ಮಾತನಾಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇರ ಗಾಂಜಿ, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎನ್.ಕುಮಾರಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ,
ಬೆಂಗಳೂರಿನ ಬಸವ ಬಳಗದ ಪ್ರಮುಖರಾದ ಸರ್ವಮಂಗಳ ಸೋಮಶೇಖರ್, ಸಾಹಿತಿ ಭಾರಧ್ವಜ್ ಕೆ.ಆನಂದ ತೀರ್ಥ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್, ಇದ್ದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಸ್ವಾಗತಿಸಿದರು. ಕೊಡಗು ವಿವಿ ಉಪನ್ಯಾಸಕ ಡಾ.ಜಮೀರ್ ಅಹಮದ್ ನಿರೂಪಿಸಿದರು. ವಿವಿಯ ಸಂಶೋಧನಾ ವಿದ್ಯಾರ್ಥಿಗಳಾದ ಶಮಿತಾ, ಸ್ನಿತಾ ತಂಡ ವಚನ ಗಾಯನ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.