Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ 8 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ 8 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ*

ಜುಲೈ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 NEWS DESK : ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾಕಿರಣ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ 393 ಆರೋಗ್ಯ ಸಂಸ್ಥೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಬಿಬಿಎಂಪಿ ವಲಯದ ಬೆಂಗಳೂರಿನ ಹೊಸಹಳ್ಳಿ ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಿದರು. ಅದರಂತೆ ಕೊಡಗಿನಲ್ಲೂ ವೈದ್ಯಕೀಯ ಕಾಲೇಜು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು ಎಂಟು ಕಡೆ ಏಕಕಾಲದಲ್ಲಿ ಉದ್ಘಾಟಿಸಲಾಯಿತು.  ಕೊಡಗಿನಲ್ಲಿ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ 4,750 ಫಲಾನುಭವಿಗಳಿಗೆ ದೃಷ್ಟಿ ಪರೀಕ್ಷೆ ಮಾಡಲಾಗಿದೆ. 851 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. 114 ಫಲಾನುಭವಿಗಳಿಗೆ ಉಚಿತ ವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು. ಆಶಾ ಕಿರಣ ಕಾರ್ಯಕ್ರಮದ ಮೂಲ ಉದ್ದೇಶಗಳು ರಾಜ್ಯವನ್ನು ಮತ್ತು ಜಿಲ್ಲೆಯನ್ನು ಅಂದತ್ವ ಮುಕ್ತ ರಾಜ್ಯ ಹಾಗೂ ಜಿಲ್ಲೆಯನ್ನಾಗಿಸುವ ಸದುದ್ದೇಶವಾಗಿದೆ. ಆಶಾಕಿರಣ ಯೋಜನೆಯನ್ನು ಶಾಶ್ವತವಾಗಿ ಮತ್ತು ಉಚಿತವಾಗಿ ಸಾರ್ವಜನಿಕರಿಗೆ ಸದುಪಯೋಗವಾಗುವಂತೆ ವ್ಯವಸ್ಥೆ ಮಾಡಲು ಈ ಕಾರ್ಯಕ್ರಮವನ್ನು ಏಕಕಾಲದಲ್ಲಿ ಉದ್ಘಾಟಿಸಲಾಗಿದೆ ಎಂದು ಡಾ. ಆನಂದ್ ತಿಳಿಸಿದರು. ದೃಷ್ಟಿ ದೋಷ ಕಣ್ಣಿನ ಸಮಸ್ಯೆ ಇದ್ದಲ್ಲಿ ಉಚಿತವಾಗಿ ಪರೀಕ್ಷೆ ಮಾಡಲಾಗುವುದು. ದೃಷ್ಟಿ ದೋಷ ಇದ್ದಲ್ಲಿ ಉಚಿತ ಕನ್ನಡಕ ವಿತರಿಸಲಾಗುತ್ತದೆ. ಕಣ್ಣಿನ ಪೊರೆ ಇದ್ದಲ್ಲಿ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಡಯಾಬಿಟಿಕ್ ರೆಟಿನೋಪತಿ ಇದ್ದಲ್ಲಿ ಉನ್ನತ ಮಟ್ಟಕ್ಕೆ ಉನ್ನತ ಚಿಕಿತ್ಸೆಗೆ ಉಚಿತವಾಗಿ ರೆಫರ್ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಸೋಮವಾರಪೇಟೆ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸೋಮವಾರಪೇಟೆಯಲ್ಲಿ ಅಂಧತ್ವ ನಿವಾರಣ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ.ಆನಂದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಉಚಿತವಾಗಿ ಕನ್ನಡಕವನ್ನು ವಿತರಿಸಿದರು. ಕುಶಾಲನಗರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಶಸ್ತ್ರ ಚಿಕಿತ್ಸಕರು ಮತ್ತು ಆಡಳಿತ ವೈದ್ಯಾಧಿಕಾರಿಗಳಾದ ಡಾ. ಮಧುಸೂಧನ್ ಕಾರ್ಯಕ್ರಮ ಉದ್ಘಾಟಿಸಿ ಉಚಿತ ಕನ್ನಡಕವನ್ನು ವಿತರಿಸಿದರು. ಸೋಮವಾರಪೇಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ. ಜಮೀರ್, ಡಾ.ಶಿವಪ್ರಸಾದ್, ಡಾ.ಕಿರಣ್ ಡಾಕ್ಟರ್ ಅಫ್ರೀನಾ, ಮೀನಾಕ್ಷಿ ನೇತ್ರಾಧಿಕಾರಿ ಚೇತನ್ ಮತ್ತು ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ಕುಶಾಲನಗರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ.ಶಿವಕುಮಾರ್, ಡಾ. ಕೀರ್ತಿರಾಜ್, ಡಾ.ಪ್ರತಿಭಾ ಡಾ.ಅಂಜಲಿ ಕೃಷ್ಣಯ್ಯ , ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ನೇತ್ರಾಧಿಕಾರಿ ಆದರ್ಶ್, ಲಿಪಿಕ ನೌಕರರಾದ ಷಣ್ಮುಖ ಮತ್ತು ವಿಶು ಕುಮಾರ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.