Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು : ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಪದಾಧಿಕಾರಿಗಳ ಪದಗ್ರಹಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು : ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಪದಾಧಿಕಾರಿಗಳ ಪದಗ್ರಹಣ

ಜುಲೈ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜು.4 NEWS DESK : ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಿದರೆ ಅದು ನಿಜವಾದ ಸಮಾಜ ಸೇವೆ ಎನಿಸಿಕೊಳ್ಳುತ್ತದೆ ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲ ಹೆಚ್.ಎಂ.ತಾರಾನಾಥ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕ್ಲಬ್ಬಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ನೆರವೇರಿಸಿ ಅವರು ಮಾತನಾಡಿದರು. ನಾಪೋಕ್ಲು ವಲಯದ ಲಯನ್ಸ್ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಿಸಿ ಉತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೆಲವೊಮ್ಮೆ ಕೆಲವೊಂದು ಕಾರ್ಯ ಚಟುವಟಿಕೆಗಳಲ್ಲಿ ಮನಸ್ಸಿಗೆ ಬೇಸರ ಉಂಟಾಗಬಹುದು. ಕಾರ್ಯ ಚಟುವಟಿಕೆಗಳಲ್ಲಿ ಅನುಮಾನ, ಬೇಸರಕ್ಕೆ ಆಸ್ಪದ ಕೊಡದೆ ಯಾವುದೇ ಸಂದರ್ಭದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು. ಏನಾದರೂ ಸಾಧಿಸಲು ಆತ್ಮವಿಶ್ವಾಸ ಮುಖ್ಯ ಎಂದ ಅವರು ಅಹಂಕಾರ, ಗರ್ವ ಪಡಬಾರದು ಎಂದರು. ಕೊಡಗು ಜಿಲ್ಲೆಯಿಂದ ಹೆಚ್ಚಿನ ಯುವಕರು ಸೈನ್ಯದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ. ಧೈರ್ಯ, ಸಾಹಸಕ್ಕೆ ಕೊಡಗು ಹೆಸರುವಾಸಿಯಾಗಿದೆ. ಇಂತಹ ಜಿಲ್ಲೆಯಲ್ಲಿ ಸಮಾಜ ಸೇವೆಯನ್ನು ಮಾಡುವುದರ ಮೂಲಕ ಕ್ಲಬ್ ಉತ್ತಮವಾಗಿ ಕಾರ್ಯನಿರ್ವಹಿಸಬೇಕು, ನಮ್ಮ ದಿನನಿತ್ಯದ ಚಟುವಟಿಕೆಗಳ ನಡುವೆ ಬಿಡುವು ಮಾಡಿಕೊಂಡು ಕೈಲಾದ ಸೇವೆಯನ್ನು ಸಮಾಜಕ್ಕಾಗಿ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಮಾದೇಯಂಡ ಬಿ.ಕುಟ್ಟಪ್ಪ, ಕಾರ್ಯದರ್ಶಿಯಾಗಿ ಅಪ್ಪುಮಣಿಯಂಡ ಪಿ.ಭೀಮಯ್ಯ, ಖಜಾಂಚಿಯಾಗಿ ಅಪ್ಪಚೆಟ್ಟೋಳಂಡ ವಸಂತ ಮುತ್ತಪ್ಪ ಹಾಗೂ ಲಿಯೋ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಕನ್ನಿಕಾ, ಕಾರ್ಯದರ್ಶಿಯಾಗಿ ಧ್ರುವ ದೇವಯ್ಯ, ಖಜಂಚಿಯಾಗಿ ಅನನ್ಯ ಇತರ ಸದಸ್ಯರು ಅಧಿಕಾರ ವಹಿಸಿಕೊಂಡು ಪ್ರಮಾಣವಚನ ಸ್ವೀಕರಿಸಿದರು. ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ ಪ್ರಾಂತೀಯ ಅಧ್ಯಕ್ಷ ಕೋಟೆರ ಡಾ.ಪಂಚಮ್ ತಿಮ್ಮಯ್ಯ, ರೀಜನಲ್ ಅಂಬಾಸೆಡರ್ ಅಂಬೆಕಲ್ ನವೀನ್, ಜಿಲ್ಲಾ ರಾಯಭಾರಿ ಮೋಹನ್ ದಾಸ್, ವಲಯ ಅಧ್ಯಕ್ಷ ಬಿಂದು ಗಣಪತಿ, ಕ್ಯಾಬಿನೆಟ್ ಜಾಯಿಂಟ್ ಸೆಕ್ರೆಟರಿ ಸುಮನ್ ಬಾಲಚಂದ್ರ, ನಾಪೋಕ್ಲು ಲಯನ್ಸ್ ನಿರ್ಗಮಿತ ಕಾರ್ಯದರ್ಶಿ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಖಜಂಚಿ ಕಾಂಡಂಡ ರೇಖಾ ಪೊನ್ನಣ್ಣ, ಲೀಯೋ ಕ್ಲಬ್ಬಿನ ನಿರ್ಗಮಿತ ಅಧ್ಯಕ್ಷ ಪಿ.ಎಂ.ಅಬೀಬಾ, ಕಾರ್ಯದರ್ಶಿ ಬಿ.ಸಿ.ನವಲ್ ನಾಚಪ್ಪ, ಖಜಾಂಚಿ ಧ್ರುವ ದೇವಯ್ಯ ಉಪಸ್ಥಿತರಿದ್ದರು. ಶೈಲಾ ಭೀಮಯ್ಯ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕೇಟೋಳಿರ ರತ್ನ ಚರ್ಮಣ ಮತ್ತು ಬಡ್ಡೀರ ನಳಿನಿ ಪೂವಯ್ಯ ಅತಿಥಿಗಳ ಪರಿಚಯ ಮಾಡಿದರು. ಈ ಸಂದರ್ಭ ವಿವಿಧ ಲಯನ್ಸ್ ಕ್ಲಬ್ಬಿನ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ. 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.19 : ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾತಂಡ ಪೀಟು ಕಾರ್ಯಪ್ಪ…

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026

ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

ಅಕ್ಟೋಬರ್ 19, 2026

ಮಡಿಕೇರಿ ದಸರಾ : ಮದ್ಯ ಮಾರಾಟ ನಿಷೇಧ

ಅಕ್ಟೋಬರ್ 19, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ: ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 19, 2026

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.